Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 8:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ಕಾಲದಿಂದ ಸೊಲೊಮೋನನು, ತಾನು ಮಂಟಪದ ಮುಂದೆ ಕಟ್ಟಿಸಿದ ಯೆಹೋವನ ಯಜ್ಞವೇದಿಯ ಮೇಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆ ಕಾಲದಲ್ಲಿ ಸೊಲೊಮೋನನು ತಾನು ಸರ್ವೇಶ್ವರನಿಗಾಗಿ ಮಂಟಪದ ಮುಂದೆ ಕಟ್ಟಿಸಿದ ಸರ್ವೇಶ್ವರನ ಬಲಿಪೀಠದ ಮೇಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ಕಾಲದಿಂದ ಸೊಲೊಮೋನನು, ತಾನು ಯೆಹೋವನಿಗೋಸ್ಕರ ಮಂಟಪದ ಮುಂದೆ ಕಟ್ಟಿಸಿದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅನಂತರ ಸೊಲೊಮೋನನು ದೇವಾಲಯದ ಮಂಟಪದ ಮುಂದೆ ತಾನು ಕಟ್ಟಿಸಿದ ಯಜ್ಞವೇದಿಕೆಯ ಮೇಲೆ ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಸೊಲೊಮೋನನು ದ್ವಾರಾಂಗಳದ ಮುಂದೆ ತಾನು ಕಟ್ಟಿಸಿದ ಯೆಹೋವ ದೇವರ ಬಲಿಪೀಠದ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 8:12
8 ತಿಳಿವುಗಳ ಹೋಲಿಕೆ  

ಇದಲ್ಲದೆ ಸೊಲೊಮೋನನು ತಾಮ್ರದ ಯಜ್ಞವೇದಿಯನ್ನು ಮಾಡಿಸಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳವು ಆಗಿತ್ತು.


ಯೇಸು ದೇವಾಲಯದೊಳಗೆ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಾ ಇರುವಾಗ,


ಯೆಹೋವನ ಸೇವಕರಾದ ಯಾಜಕರು, ದ್ವಾರಮಂಟಪಕ್ಕೂ, ಯಜ್ಞವೇದಿಯ ನಡುವೆ ಅಳುತ್ತಾ ಹೀಗೆ ಹೇಳಲಿ, “ಯೆಹೋವನೇ, ನಿನ್ನ ಜನರನ್ನು ಕರುಣಿಸು, ಅನ್ಯಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು.”


ಆತನು ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆತಂದನು; ಇಗೋ, ಯೆಹೋವನ ಆಲಯದ ಬಾಗಿಲ ಮುಂದೆ ಮಂಟಪಕ್ಕೂ ಮತ್ತು ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಆಲಯಕ್ಕೆ ಬೆನ್ನು ಮಾಡಿ ಪೂರ್ವದ ಕಡೆಗೆ ಮುಖ ಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.


ಆಸನು ಓದೇದನ ಮಗನಾದ ಅಜರ್ಯ ಪ್ರವಾದಿಯ ಈ ಮಾತುಗಳನ್ನು ಕೇಳಿದಾಗ ಧೈರ್ಯಗೊಂಡನು. ಯೆಹೂದ, ಬೆನ್ಯಾಮೀನ್ ಪ್ರಾಂತ್ಯಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು. ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಎದುರಿಗಿದ್ದ ಯೆಹೋವನ ಯಜ್ಞವೇದಿಯನ್ನು ಜೀರ್ಣೋದ್ಧಾರ ಮಾಡಿಸಿದನು.


ಚೊಕ್ಕ ಬಂಗಾರದ ಮುಳ್ಳು ಬೋಗುಣಿ, ಹೂಜಿಗಳ ಮತ್ತು ಬೆಳ್ಳಿ ಬಂಗಾರದ ಆಯಾ ಪಾತ್ರೆಗಳ ತೂಕ,


ಆಗ ಸೊಲೊಮೋನನು ದೇವದರ್ಶನ ಗುಡಾರದ ಬಳಿಯಲ್ಲಿ ಯೆಹೋವನ ಮುಂದೆ ಇರುವ ತಾಮ್ರದ ಯಜ್ಞವೇದಿಯ ಬಳಿಗೆ ಹೋಗಿ ಅದರ ಮೇಲೆ ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು.


ಉತ್ಸವಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮ ಪಶು, ಧಾನನೈವೇದ್ಯ ಪಾನನೈವೇದ್ಯ, ಇವುಗಳನ್ನು ಒದಗಿಸುವುದು ಅರಸನ ಕರ್ತವ್ಯವಾಗಿದೆ; ಇಸ್ರಾಯೇಲ್ ವಂಶದ ದೋಷ ನಿವಾರಣೆಗಾಗಿ ಅವನು ದೋಷಪರಿಹಾರಕ ಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮ ಪಶು, ಸಮಾಧಾನ ಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು