Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 8:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದಲ್ಲದೆ, ತನ್ನ ತಂದೆ ದಾವೀದನ ವಿಧಿಗೆ ಅನುಸಾರವಾಗಿ ಯಾಜಕ ವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡಬೇಕಾಗಿತ್ತು. ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯಬೇಕಾಗಿತ್ತು. ಇದು ದೈವಪುರುಷ ದಾವೀದರಾಜನ ಅಪ್ಪಣೆ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದಲ್ಲದೆ ತನ್ನ ತಂದೆಯಾದ ದಾವೀದನ ವಿಧಿಗನುಸಾರವಾಗಿ ಯಾಜಕವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇವಿುಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರತಿಯ ಮೇಲೆ ಆಯಾ ಬಾಗಲುಗಳನ್ನು ಕಾಯುತ್ತಲೂ ಇರಬೇಕಾಯಿತು. ಇದೇ ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದಾವೀದನು ಹೇಳಿದ ಪ್ರಕಾರ ಸೊಲೊಮೋನನು ಯಾಜಕರನ್ನು ಸರದಿಯ ಪ್ರಕಾರ ಸೇವೆಗೆ ನೇಮಿಸಿದನು. ಲೇವಿಯರನ್ನು ಆಯಾಕೆಲಸಕ್ಕೆ ನೇಮಿಸಿದನು. ಅವರು ಗಾಯನದಲ್ಲಿಯೂ ಯಾಜಕರ ಕೆಲಸಗಳಲ್ಲಿ ಸಹಾಯಕರಾಗಿಯೂ ದೇವಾಲಯದ ಕೆಲಸದಲ್ಲಿ ಪಾಲುತೆಗೆದುಕೊಂಡರು. ದ್ವಾರಪಾಲಕರ ಕೆಲಸಕ್ಕೆ ಸೊಲೊಮೋನನು ಜನರನ್ನು ಆರಿಸಿ ದ್ವಾರಗಳನ್ನು ಕಾಯುವುದಕ್ಕೆ ಅವರನ್ನು ನೇಮಿಸಿದನು. ದೇವಮನುಷ್ಯನಾದ ದಾವೀದನು ಹೀಗೆಯೇ ಮಾಡಬೇಕೆಂದು ತಿಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ, ಅವರ ಸೇವೆಗೆ ಯಾಜಕ ವರ್ಗಗಳವರನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ, ಯಾಜಕರ ಮುಂದೆ ಸ್ತುತಿಸುವುದಕ್ಕೂ, ಸೇವೆ ಮಾಡುವುದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ, ಸೇವೆಯ ಬಾಗಿಲಲ್ಲಿ ತಮ್ಮ ವರ್ಗಗಳ ಸರದಿಯ ಪ್ರಕಾರವಾಗಿ ದ್ವಾರಪಾಲಕರನ್ನೂ ನೇಮಿಸಿದನು. ಏಕೆಂದರೆ ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 8:14
33 ತಿಳಿವುಗಳ ಹೋಲಿಕೆ  

ದ್ವಾರಪಾಲಕರಲ್ಲಿ ಶಲ್ಲೂಮ್, ಅಕ್ಕೂಬ್, ಟಲ್ಮೋನ್, ಅಹೀಮಾನ್, ಇವರೂ ಮತ್ತು ಇವರ ಸಹೋದರರು. ಇವರಲ್ಲಿ ಶಲ್ಲೂಮನು ಪ್ರಮುಖನಾಗಿದ್ದನು.


ದೇವರ ಮನುಷ್ಯನಾದ ದಾವೀದನ ವಾದ್ಯಗಳನ್ನು ಹಿಡಿದಿರುವ ಇವನ ಬಂಧುಗಳಾದ ಶೆಮಾಯ, ಅಜರೇಲ್, ಮಿಲಲೈ, ಗಿಲಲೈ, ಮಾಯೈ, ನೆತನೇಲ್, ಯೆಹೂದ, ಹಾನಾನೀ ಎಂಬುವರೂ ಹೋದರು, ಧರ್ಮೋಪದೇಶಕನಾದ ಎಜ್ರನು ಇವರ ಮುಂದಾಳಾಗಿ ಹೊರಟನು.


ಈ ಲೇವಿಯರ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಅದ ಯೋಯಾಕೀಮ್, ದೇಶಾಧಿಪತಿಯಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನಾದ ಎಜ್ರ ಇವರ ಕಾಲದಲ್ಲಿದ್ದವರು:


ಆ ಮೇಲೆ ಯಾಜಕರ ಮತ್ತು ಲೇವಿಯರ ಆಯಾ ಮಾರ್ಗಗಳನ್ನು ಮೋಶೆಯ ಧರ್ಮಶಾಸ್ತ್ರ ನಿಯಮದ ಪ್ರಕಾರ ಯೆರೂಸಲೇಮಿನ ದೇವರ ಸೇವೆಗೆ ನೇಮಿಸಿದರು.


“ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.


ಆ ಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ನೇಮಕಮಾಡಿ; ‘ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನ್ನ ಹೃದಯಕ್ಕೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವನು’ ಎಂಬುದಾಗಿ ಅವನ ವಿಷಯವಾಗಿ ಸಾಕ್ಷಿಹೇಳಿದನು.


ಒಂದು ದಿನ ಜಕರೀಯನ ವರ್ಗದ ಸರದಿ ಬಂದಾಗ ಅವನು ದೇವರ ಸನ್ನಿಧಿಯಲ್ಲಿ ಯಾಜಕಧರ್ಮವನ್ನು ನಡೆಸುತ್ತಿದ್ದನು.


ಯೂದಾಯದ ಅರಸನಾದ ಹೆರೋದನ ಕಾಲದಲ್ಲಿ ಅಬೀಯನ ಯಾಜಕೀಯ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ವಂಶದವಳಾಗಿದ್ದಳು. ಆಕೆಯ ಹೆಸರು ಎಲಿಸಬೇತ್.


ಸೇವೆಯ ಸಂಬಂಧವಾದದ್ದೆಲ್ಲವನ್ನೂ ಏರ್ಪಡಿಸಿದನಂತರ ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ, ಲೇವಿಯರು ಅರಸನ ಅಪ್ಪಣೆಯಂತೆ ವರ್ಗವರ್ಗಗಳಾಗಿಯೂ ನಿಂತರು;


ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ಸರ್ವಾಂಗಹೋಮ, ಸಮಾಧಾನ ಯಜ್ಞ, ಇವುಗಳನ್ನು ಸಮರ್ಪಿಸುವುದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ, ಕೀರ್ತಿಸುತ್ತಾ, ಕೃತಜ್ಞತಾಸ್ತುತಿಮಾಡುತ್ತಾ ಇರುವುದಕ್ಕೂ ನೇಮಿಸಿದನು.


ಈಗ ನೀವು ಮಾಡತಕ್ಕದ್ದು ಏನೆಂದರೆ: ಸಬ್ಬತ್ ದಿನದಂದು ದೇವಾಲಯದ ಸೇವೆಗೆ ಬರಬೇಕಾದ ಲೇವಿಯರಲ್ಲೂ, ಯಾಜಕರಲ್ಲೂ ಮೂರರಲ್ಲೊಂದು ಭಾಗದವರು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು.


ಮಹಾ ಪರಿಶುದ್ಧ ಸ್ಥಳದಿಂದ ಯಾಜಕರು ಹೊರಗೆ ಬಂದರು. ಸಮಸ್ತ ಯಾಜಕರು ವರ್ಗವ್ಯತ್ಯಾಸವಿಲ್ಲದೆ ಎಲ್ಲರೂ ತಮ್ಮನ್ನು ಶುದ್ಧಮಾಡಿಕೊಂಡಿದ್ದರು.


ಆ ನಕ್ಷೆಯಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ವಿವರವಾದ ಜ್ಞಾನವು ತನಗೆ ಯೆಹೋವನು ಸೂಚಿಸಿದಂತೆ ಪ್ರಾಪ್ತವಾಯಿತೆಂದು ಹೇಳಿದನು.


ದಾವೀದನು ವಯೋವೃದ್ಧನಾಗಿ ತನ್ನ ಜೀವಮಾನದ ಕೊನೆಯ ದಿನಗಳಲ್ಲಿ ತನ್ನ ಮಗನಾದ ಸೊಲೊಮೋನನನ್ನು ಇಸ್ರಾಯೇಲರ ಅರಸನನ್ನಾಗಿ ನೇಮಿಸಿದನು.


ಹೇಮಾನ್ ಮತ್ತು ಯೆದುತೂನರ ಹತ್ತಿರ ವಾದ್ಯಗಾರರಿಗಾಗಿ ತುತ್ತೂರಿ, ತಾಳ ಮೊದಲಾದ ವಾದ್ಯಗಳೂ ಮತ್ತು ದೇವಕೀರ್ತನಾ ಸಾಹಿತ್ಯಗಳಿದ್ದವು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿ ನೇಮಿಸಲ್ಪಟ್ಟರು.


ಆಗ ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಹಾಕುವುದಕ್ಕಾಗಿ ಯಜ್ಞವೇದಿಯ ಹತ್ತಿರ ನಿಂತುಕೊಂಡಿದ್ದನು


“ಯೆಹೋವನ ಆತ್ಮವು ನನ್ನ ಮೂಲಕ ಮಾತನಾಡಿತು. ಆತನ ವಾಕ್ಯವು ನನ್ನ ಬಾಯಲ್ಲಿತ್ತು.


ದೇವಪುರುಷನಾದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಾಯೇಲರ ವಿಷಯವಾಗಿ ಹೇಳಿದ ಆಶೀರ್ವಾದವು:


ದಾವೀದನು ಯೆಹೋವನ ಒಡಂಬಡಿಕೆ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡಿಸುವುದಕ್ಕೆ ಆಸಾಫನನ್ನೂ, ಅವನ ಸಹೋದರರನ್ನೂ ಬಾಗಿಲನ್ನು ಕಾಯುವುದಕ್ಕಾಗಿ,


ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವರು.


ಆಮೇಲೆ ದಾವೀದನು ಮತ್ತು ಗುಡಾರದ ಸೇವೆ ಸಲ್ಲಿಸುತ್ತಿದ್ದ ಪ್ರಧಾನರು ಆಸಾಫ್ಯ, ಹೇಮಾನ್ಯ ಮತ್ತು ಯೆದುತೂನ್ಯರ ಮಕ್ಕಳನ್ನು ಸೇವೆ ಮಾಡುವುದಕ್ಕೋಸ್ಕರ ಆಯ್ಕೆಮಾಡಿದರು. ಇವರು ಕಿನ್ನರಿ, ಸ್ವರಮಂಡಲ, ತಾಳ, ಇವುಗಳನ್ನು ನುಡಿಸುತ್ತಾ, ಪ್ರವಾದಿಸುತ್ತ, ಗಾಯನಮಾಡುತ್ತಿದ್ದರು. ಆ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ,


ದೇವಾಲಯದ ದ್ವಾರಪಾಲಕ ವರ್ಗಗಳ ವಿಷಯ: ಕೋರಹೀಯನಾದ ಮೆಷೆಲೆಮ್ಯ ಎಂಬವನು, ಕೊರೇಯನ ಮಗ ಹಾಗೂ ಆಸಾಫನ ಮೊಮ್ಮಗ.


ರಾಜನು ಯಾಜಕರನ್ನೂ, ಲೇವಿಯರನ್ನೂ, ಭಂಡಾರಗಳನ್ನೂ ಕುರಿತು ಕೊಟ್ಟ ಅಪ್ಪಣೆಯನ್ನು ಅವರು ಸ್ವಲ್ಪವಾದರೂ ಮೀರಲಿಲ್ಲ.


ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕೋಸ್ಕರ ಲೇವಿಯರನ್ನು, ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ನಿಲ್ಲಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು.


ಇಸ್ರಾಯೇಲರ ಅರಸನಾದ ದಾವೀದನೂ, ಅವನ ಮಗನಾದ ಸೊಲೊಮೋನನೂ ಬರೆದು ನೇಮಿಸಿದಂತೆ ನಿಮ್ಮ ನಿಮ್ಮ ಗೋತ್ರವರ್ಗಗಳ ಪ್ರಕಾರ ಸಿದ್ಧರಾಗಿದ್ದು,


ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಈ ದಿಕ್ಕುಗಳಲ್ಲಿರುವ ದೇವಾಲಯದ ಬಾಗಿಲುಗಳನ್ನು ಕಾಯುವವರಾಗಿದ್ದರು.


ದಾವೀದನು ಎಲ್ಲಾಜಾರನ ಸಂತಾನದವನಾದ ಚಾದೋಕನೂ, ಈತಾಮಾರನ ಸಂತಾನದವನಾದ ಅಹೀಮೆಲೆಕನು ಯಾಜಕರನ್ನು ಸರದಿಯ ಮೇಲೆ ಸೇವೆಮಾಡತಕ್ಕ ವರ್ಗಗಳನ್ನಾಗಿ ವಿಭಾಗಿಸಿದರು.


ಯಾವ ವಿಷಯದಲ್ಲಾದರೂ ಅಶುದ್ಧನಾದವನು ಯೆಹೋವನ ಆಲಯವನ್ನು ಪ್ರವೇಶಿಸದಂತೆ ಯೆಹೋಯಾದನು ಆಯಾ ಬಾಗಿಲುಗಳಲ್ಲಿ ದ್ವಾರಪಾಲಕರನ್ನಿರಿಸಿದನು.


ಆಸಾಫ್ಯರಾದ ಗಾಯಕರು, ಅರಸನಾದ ದಾವೀದನ ಮತ್ತು ಆಸಾಫ್, ಹೇಮಾನ್, ಅರಸನ ದರ್ಶಿಯಾದ ಯೆದುತೂನ್ ಇವರ ಆಜ್ಞಾನುಸಾರವಾಗಿ ತಮ್ಮ ಸ್ಥಳದಲ್ಲಿ ನಿಂತಿದ್ದರು; ದ್ವಾರಪಾಲಕರು ಆಯಾ ಬಾಗಿಲುಗಳನ್ನು ಕಾಯುತ್ತಿದ್ದರು. ಅವರ ಸಹೋದರರಾದ ಲೇವಿಯರು ಅವರ ಭೋಜನಕ್ಕೆ ಸಿದ್ಧಮಾಡುತ್ತಿದ್ದದರಿಂದ ಅವರು ತಮ್ಮ ತಮ್ಮ ಸೇವೆಯನ್ನು ಬಿಡುವುದಕ್ಕೆ ಕಾರಣವಿರಲಿಲ್ಲ.


ಹಷಬ್ಯ, ಶೇರೇಬ್ಯ, ಯೇಷೂವ, ಬಿನ್ನೂಯ್, ಕದ್ಮೀಯೇಲ್ ಇವರು. ದೇವರ ಮನುಷ್ಯನಾದ ದಾವೀದನ ಅಪ್ಪಣೆಯ ಮೇರೆಗೆ ಇವರೂ ಇವರ ಸಹೋದರರೂ ಸರದಿಗೆ ಎರಡೆರಡು ವರ್ಗಗಳಾಗಿ ಪರಸ್ಪರ ಹಾಡುತ್ತಾ, ಕೀರ್ತನೆಯನ್ನೂ ಕೃತಜ್ಞತಾಸ್ತುತಿಯನ್ನೂ ಮಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು