2 ಪೂರ್ವಕಾಲ ವೃತ್ತಾಂತ 8:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ರಾಜನು ಯಾಜಕರನ್ನೂ, ಲೇವಿಯರನ್ನೂ, ಭಂಡಾರಗಳನ್ನೂ ಕುರಿತು ಕೊಟ್ಟ ಅಪ್ಪಣೆಯನ್ನು ಅವರು ಸ್ವಲ್ಪವಾದರೂ ಮೀರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅವನು ಯಾಜಕರನ್ನೂ ಲೇವಿಯರನ್ನೂ ಅರಮನೆಯ ಭಂಡಾರಗಳನ್ನೂ ಕುರಿತು ಕೊಟ್ಟ ಅಪ್ಪಣೆಯನ್ನು ಅವರು ಕಿಂಚಿತ್ತಾದರೂ ಮೀರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವನು ಯಾಜಕರನ್ನೂ ಲೇವಿಯರನ್ನೂ ಭಂಡಾರಗಳನ್ನೂ ಕುರಿತು ಕೊಟ್ಟ ಅಪ್ಪಣೆಯನ್ನು ಅವರು ಸ್ವಲ್ಪವಾದರೂ ಮೀರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಸೊಲೊಮೋನನು ಯಾಜಕರಿಗಾಗಲಿ ಲೇವಿಯರಿಗಾಗಲಿ ಕೊಟ್ಟ ಆಜ್ಞೆಗಳನ್ನು ಯಾರೂ ಬದಲಿಸಲಿಲ್ಲ; ಅವುಗಳಿಗೆ ಯಾರೂ ಅವಿಧೇಯರಾಗಲಿಲ್ಲ; ಬೆಲೆಬಾಳುವ ವಸ್ತುಗಳ ಸಂಗ್ರಹಣ ಕಾರ್ಯದಲ್ಲೂ ಅವರು ಜಾಗರೂಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವರು ಯಾವ ಕಾರ್ಯದಲ್ಲಾದರೂ, ಬೊಕ್ಕಸಗಳಲ್ಲಾದರೂ ಅರಸನು ಯಾಜಕರಿಗೂ ಲೇವಿಯರಿಗೂ ಹೇಳಿದ ಆಜ್ಞೆಯನ್ನು ಮೀರಲಿಲ್ಲ. ಅಧ್ಯಾಯವನ್ನು ನೋಡಿ |
ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.