2 ಪೂರ್ವಕಾಲ ವೃತ್ತಾಂತ 9:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅರಸನು ಸುಗಂಧದ ಮರದಿಂದ ಯೆಹೋವನ ದೇವಾಲಯವನ್ನು ಹಾಗೂ ಅರಮನೆಗಳಿಗೆ ಸೋಪಾನಗಳನ್ನೂ, ಸಂಗೀತಗಾರರಿಗಾಗಿ ಕಿನ್ನರಿಗಳನ್ನೂ, ಸ್ವರಮಂಡಲಗಳನ್ನೂ ಮಾಡಿಸಿದನು. ಇಂಥ ಗಂಧದ ಮರವು ಹಿಂದೆಂದೂ ಯೆಹೂದ ದೇಶದಲ್ಲಿ ಕಂಡಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅರಸನು ಸುಗಂಧದ ಮರದಿಂದ ದೇವಾಲಯ ಹಾಗೂ ಅರಮನೆಗಳಿಗೆ ಸೋಪಾನಗಳನ್ನೂ ಗಾಯಕರಿಗಾಗಿ ಕಿನ್ನರಿಗಳನ್ನೂ ಸ್ವರಮಂಡಲಗಳನ್ನೂ ಮಾಡಿಸಿದನು. ಇಂಥ ಸುಗಂಧದ ಮರವನ್ನು ಹಿಂದೆಂದೂ ಜುದೇಯ ನಾಡಿನಲ್ಲಿ ಕಂಡಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅರಸನು ಸುಗಂಧದ ಮರದಿಂದ ದೇವಾಲಯ, ಅರಮನೆ ಇವುಗಳಿಗೆ ಸೋಪಾನಗಳನ್ನೂ ಗಾಯಕರಿಗೋಸ್ಕರ ಕಿನ್ನರಿಗಳನ್ನೂ ಸ್ವರಮಂಡಲಗಳನ್ನೂ ಮಾಡಿಸಿದನು. ಇಂಥ [ಸುಗಂಧದ ಮರವು] ಮುಂಚೆ ಯೆಹೂದ ದೇಶದಲ್ಲಿ ಕಾಣಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಸುಗಂಧದ ಮರಗಳಿಂದ ಸೊಲೊಮೋನನು ದೇವಾಲಯದ ಮತ್ತು ಅರಮನೆಯ ಮೆಟ್ಟಲುಗಳನ್ನು ಮಾಡಿಸಿದನು; ಅಲ್ಲದೆ ಗಾಯಕರಿಗಾಗಿ ಹಾರ್ಪ್ ಮತ್ತು ಲೈರ್ ವಾದ್ಯಗಳನ್ನೂ ಅದರಿಂದ ತಯಾರಿಸಿದನು. ಯೆಹೂದ ಪ್ರಾಂತ್ಯದಲ್ಲಿ ಯಾರೂ ಅಂತಹ ಸುಂದರವಾದ ಸುಗಂಧವಸ್ತುಗಳನ್ನು ನೋಡಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅರಸನು ಆ ಸುಗಂಧದ ಮರಗಳಿಂದ ಯೆಹೋವ ದೇವರ ಆಲಯಕ್ಕೋಸ್ಕರವೂ, ಅರಮನೆಗೋಸ್ಕರವೂ ಸೋಪಾನಗಳನ್ನು ಮಾಡಿಸಿದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ ವೀಣೆಗಳನ್ನೂ ಮಾಡಿಸಿದನು. ಯೆಹೂದ ದೇಶದಲ್ಲಿ ಹಿಂದೆಂದೂ ಇಂಥವುಗಳನ್ನು ಕಂಡಿರಲಿಲ್ಲ. ಅಧ್ಯಾಯವನ್ನು ನೋಡಿ |