Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದಲ್ಲದೆ ದೇಶಾಂತರದಲ್ಲಿ ವ್ಯಾಪಾರಮಾಡುತ್ತಿದ್ದ ವ್ಯಾಪಾರಿಗಳೂ, ವರ್ತಕರೂ, ಅರಬಸ್ಥಾನದ ಅರಸರೂ, ದೇಶಾಧಿಪತಿಗಳೂ ಅರಸನಾದ ಸೊಲೊಮೋನನಿಗೆ ಬೆಳ್ಳಿ ಮತ್ತು ಬಂಗಾರವನ್ನು ತರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪ್ರತಿವರ್ಷ ಸುಮಾರು 23,000 ಕಿಲೋಗ್ರಾಂ ಬಂಗಾರ ದೊರಕುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಪ್ರತಿವರುಷ ಆರುನೂರರುವತ್ತಾರು ತಲಾಂತು ಬಂಗಾರವು ದೊರಕುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇತರ ದೇಶಗಳ ವ್ಯಾಪಾರಸ್ಥರು, ಅರೇಬಿಯದ ಎಲ್ಲಾ ರಾಜರುಗಳು ಮತ್ತು ದೇಶಾಧಿಪತಿಗಳು ಸೊಲೊಮೋನನಿಗೆ ಬೆಳ್ಳಿಬಂಗಾರಗಳನ್ನು ತಂದುಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ಸೊಲೊಮೋನನಿಗೆ ವರ್ತಕರೂ ವ್ಯಾಪಾರಸ್ಥರೂ ಅರೇಬಿಯದ ಅರಸರೂ ದೇಶದ ಅಧಿಪತಿಗಳೂ ಸಹ ಬೆಳ್ಳಿಬಂಗಾರವನ್ನು ತರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:14
7 ತಿಳಿವುಗಳ ಹೋಲಿಕೆ  

ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.


ಅರಸುಗಳು ಯೆರೂಸಲೇಮ್ ಪಟ್ಟಣಕ್ಕೆ ನಿನಗೋಸ್ಕರ ಕಾಣಿಕೆಗಳನ್ನು ತಂದು ಸಮರ್ಪಿಸಲಿ.


ಅದರ ಜೊತೆಗೆ ದೇಶಾಂತರ ವ್ಯಾಪಾರಿಗಳೂ, ವರ್ತಕರೂ, ಅರಬಿಯ ಅರಸರೂ, ಪ್ರದೇಶಾಧಿಪತಿಗಳೂ ಸಹ ಸೊಲೊಮೋನನಿಗೆ ಬೆಳ್ಳಿ ಬಂಗಾರವನ್ನು ಕೊಡುತ್ತಿದ್ದರು.


ಅರಸನಾದ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು; ಪ್ರತಿಯೊಂದು ಗುರಾಣಿಗೆ ಆರುನೂರು ತೊಲಾ ಬಂಗಾರವು ಹಿಡಿಸುತ್ತಿತ್ತು.


ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ, ಕಪ್ಪವನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರಬಿಯರು ತಮ್ಮ ಪಶುಪ್ರಾಣಿಗಳ ಹಿಂಡುಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ, ಏಳು ಸಾವಿರದ ಏಳು ನೂರು ಆಡುಗಳನ್ನೂ ಕೊಡುತ್ತಿದ್ದರು.


ಅರಬಿಯದ ಎಲ್ಲಾ ಅರಸರು, ಅರಣ್ಯವಾಸಿಗಳಾದ ಮಿಶ್ರಜಾತಿಯವರ ಎಲ್ಲಾ ಅರಸರು,


ಆಪಿನೊಳಗೆ ವಾಸಿಸುವ ನೀರಾನೆ, ಕರುಗಳ ಸಹಿತವಾದ ಹೋರಿಗಳ ಗುಂಪು, ಇವುಗಳಂತಿರುವ ಶತ್ರುಜನಾಂಗಗಳನ್ನು ಬೆದರಿಸು. ಅವು ಬೆಳ್ಳಿಗಟ್ಟಿಗಳನ್ನು ತಂದು ನಿನಗೆ ಅಡ್ಡಬೀಳಲಿ. ಯುದ್ಧಾಸಕ್ತ ಜನಾಂಗಗಳನ್ನು ಚದುರಿಸಿಬಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು