Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸೊಲೊಮೋನನು ಆಕೆಯ ಪ್ರಶ್ನೆಗಳಿಗೂ ಉತ್ತರಕೊಟ್ಟನು; ಅವುಗಳಲ್ಲಿ ಅವನಿಗೆ ತಿಳಿಯದಂಥದ್ದು ಒಂದೂ ಇರಲಿಲ್ಲವಾದುದ್ದರಿಂದ ಎಲ್ಲಾ ಪ್ರಶ್ನೆಗಳಿಗೆ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸೊಲೊಮೋನನು ಆಕೆಯ ಪ್ರಶ್ನೆಗಳಿಗೆಲ್ಲಾ ಉತ್ತರಕೊಟ್ಟನು. ಅವುಗಳಲ್ಲಿ ಬಗೆಹರಿಸಲು ಅವನಿಗೆ ಅಸಾಧ್ಯವಾದದ್ದು ಒಂದೂ ಇರಲಿಲ್ಲ; ಎಲ್ಲವುಗಳಿಗೂ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಸೊಲೊಮೋನನು ಆಕೆಯ ಪ್ರಶ್ನೆಗಳಿಗೆಲ್ಲಾ ಉತ್ತರಕೊಟ್ಟನು; ಅವುಗಳಲ್ಲಿ ಅವನಿಗೆ ತಿಳಿಯದಂಥದು ಒಂದೂ ಇರಲಿಲ್ಲವಾದದರಿಂದ ಎಲ್ಲವುಗಳಿಗೂ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವನು ಆಕೆಯ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು. ಆಕೆಯ ಯಾವ ಪ್ರಶ್ನೆಯೂ ಅವನಿಗೆ ಕಷ್ಟಕರವೆನಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಸೊಲೊಮೋನನು ಅವಳ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು, ಅವುಗಳಲ್ಲಿ ಅವನಿಗೆ ತಿಳಿಯದಂಥದ್ದು ಒಂದೂ ಇರಲಿಲ್ಲವಾದ್ದರಿಂದ ಎಲ್ಲವುಗಳಿಗೂ ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:2
12 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.


ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.


ಈ ಕ್ರಿಸ್ತನಲ್ಲಿಯೇ ಜ್ಞಾನ ಮತ್ತು ವಿವೇಕದ ಸರ್ವಸಂಪತ್ತು ಅಡಗಿದೆ.


ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ, ಏಕೆಂದರೆ, ಯಜಮಾನನು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ, ಏಕೆಂದರೆ ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಸಿದ್ದೇನೆ.


ಸಾಮ್ಯಗಳಿಲ್ಲದೆ ಆತನು ಒಂದನ್ನೂ ಹೇಳಲಿಲ್ಲಾ. ಆದರೆ ಏಕಾಂತವಾಗಿರುವಾಗ ಆತನು ತನ್ನ ಆಪ್ತ ಶಿಷ್ಯರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದನು.


ಆತನು ಅವರಿಗೆ, “ದೇವರ ರಾಜ್ಯದ ರಹಸ್ಯ ನಿಮಗೆ ದೊರೆತಿದೆ; ಆದರೆ ಹೊರಗಿನವರಿಗೆ ಎಲ್ಲವನ್ನು ಸಾಮ್ಯಗಳ ರೂಪದಲ್ಲಿ ಹೇಳಿದ್ದೇನೆ.”


ಸತ್ಪುರುಷನ ನುಡಿಯು ಆಳವಾದ ನೀರು, ಜ್ಞಾನದ ಬುಗ್ಗೆ, ಹರಿಯುವ ತೊರೆ.


ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು, ಜ್ಞಾನಹೀನರ ಒಡನಾಡಿ ಸಂಕಟಪಡುವನು.


ದೇವರು ಸೊಲೊಮೋನನಿಗೆ ವಿಶೇಷವಾದ ಜ್ಞಾನ, ವಿವೇಕಗಳನ್ನೂ, ಸಮುದ್ರ ತೀರದ ಮರಳಿನಷ್ಟು ಅಪರಿಮಿತವಾದ ಮನೋವಿಶಾಲತೆಯನ್ನೂ ಅನುಗ್ರಹಿಸಿದನು.


ನೋಡು, ನಿನಗೆ ಜ್ಞಾನವನ್ನು ಮತ್ತು ವಿವೇಕವನ್ನು ಅನುಗ್ರಹಿಸಿದ್ದೇನೆ. ನಿನ್ನಂಥ ಜ್ಞಾನಿಯು ಹಿಂದೆಯೂ ಇರಲಿಲ್ಲ, ಮುಂದೆಯೂ ಇರುವುದಿಲ್ಲ.


ಶೆಬಾದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಯೆರೂಸಲೇಮಿಗೆ ಬಂದಳು. ಆಕೆಯು ಸುಗಂಧದ್ರವ್ಯ, ಲೆಕ್ಕವಿಲ್ಲದಷ್ಟು ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾ ಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತು ಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಸಂಭಾಷಿಸಿದಳು.


ಶೆಬಾದ ರಾಣಿಯು, ಸೊಲೊಮೋನನ ಜ್ಞಾನ, ಅವನು ಕಟ್ಟಿಸಿದ ಅರಮನೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು