Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವವರೆಗೆ ಜನರು ಹೇಳಿದ ಸುದ್ದಿಯನ್ನು ನಂಬಿರಲಿಲ್ಲ; ಈಗ ನೋಡಿದರೆ, ನಿನ್ನ ಜ್ಞಾನಾತಿಶಯವು ನಾನು ಕೇಳಿದ್ದಕ್ಕಿಂತ ಉನ್ನತವಾಗಿದೆ; ಜನರು ನಿನ್ನ ಜ್ಞಾನ ಮತ್ತು ಐಶ್ವರ್ಯದ ಬಗ್ಗೆ ಅರ್ಧವನ್ನಾದರೂ ನನಗೆ ಹೇಳಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ, ನಿಮ್ಮ ಜ್ಞಾನಾತಿಶಯವು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿದೆ; ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ ನಿನ್ನ ಜ್ಞಾನಾತಿಶಯವು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿದೆ; ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ಇಲ್ಲಿಗೆ ಬಂದು ಅವುಗಳನ್ನೆಲ್ಲಾ ಕಣ್ಣಾರೆ ನೋಡುವ ತನಕ ನಾನು ಅವುಗಳನ್ನು ನಂಬಿರಲಿಲ್ಲ. ಆದರೆ ನಾನು ಕೇಳಿದ್ದು ನಿನ್ನ ಜ್ಞಾನದ ಅರ್ಧದಷ್ಟೂ ಇಲ್ಲವೆಂದು ಈಗ ನನಗೆ ತಿಳಿಯಿತು. ನಾನು ಕೇಳಿದ್ದಕ್ಕಿಂತಲೂ ನೀನು ಮಹಾಜ್ಞಾನಿಯಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವವರೆಗೂ ಜನರ ಮಾತುಗಳನ್ನು ನಂಬದೆ ಹೋದೆನು. ಜನರು ನನಗೆ ನಿನ್ನ ಮಹಾಜ್ಞಾನದಲ್ಲಿ ಅರ್ಧವನ್ನಾದರೂ ಹೇಳಲಿಲ್ಲ. ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಎಷ್ಟೋ ಅಧಿಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:6
11 ತಿಳಿವುಗಳ ಹೋಲಿಕೆ  

ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವುದು.


ಸದ್ಭಕ್ತರಿಗೋಸ್ಕರ ನೀನು ಇಟ್ಟುಕೊಂಡಿರುವ ಮೇಲೂ, ಆಶ್ರಿತರಿಗೋಸ್ಕರ ನೀನು ಎಲ್ಲರ ಮುಂದೆ ಮಾಡಿದ ಉಪಕಾರಗಳೂ ಎಷ್ಟೋ ವಿಶೇಷವಾಗಿವೆ.


ಅವನಿಗೆ, “ನಾನು ನನ್ನ ದೇಶದಲ್ಲಿ ನಿನ್ನ ಜ್ಞಾನವನ್ನೂ ಕೃತ್ಯಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.


ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಿರಲಿಲ್ಲ. ಈಗ ಇಲ್ಲಿ ಬಂದು ನೋಡಿದರೆ ನಿನ್ನ ಜ್ಞಾನವೈಭವಗಳು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿವೆ. ಜನರು ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ.


ಎಲ್ಲಾ ಜನಾಂಗಗಳಲ್ಲಿಯೂ ಸೊಲೊಮೋನನ ಜ್ಞಾನದ ವಿಶೇಷತೆಯನ್ನು ಕುರಿತು ಕೇಳಿದ ಅನೇಕ ರಾಜರೂ ಮತ್ತು ವಿದ್ವಾಂಸರು ಅವನ ಜ್ಞಾನವಾಕ್ಯಗಳನ್ನು ಕೇಳುವುದಕ್ಕೋಸ್ಕರ ಬರುತ್ತಿದ್ದರು.


ಅವನು‍ ಜೆರಹನ ಮಗನಾದ ಏತಾನ್, ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದ ಮೊದಲಾದ ಎಲ್ಲರಿಗಿಂತಲೂ ಜ್ಞಾನಿಯಾಗಿದ್ದನು. ಸುತ್ತಣ ಎಲ್ಲಾ ಜನಾಂಗಗಳಲ್ಲಿ ಅವನ ಹೆಸರು ಸುಪ್ರಸಿದ್ಧವಾಯಿತು.


ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.


ಆದರೆ ದೇವರ ವಾಕ್ಯಗಳಲ್ಲಿ ಬರೆದಿರುವ ಪ್ರಕಾರ, “ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.”


ನಿನ್ನ ಪ್ರಜೆಗಳೂ, ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರೂ ಧನ್ಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು