2 ಪೂರ್ವಕಾಲ ವೃತ್ತಾಂತ 9:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ, ಅಪರಿಮಿತ ಸುಗಂಧ ದ್ರವ್ಯವನ್ನೂ, ಅಮೂಲ್ಯರತ್ನಗಳನ್ನೂ ಕೊಟ್ಟಳು. ಶೆಬಾದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಸುಗಂಧದ್ರವ್ಯಕ್ಕೆ ಸರಿಸಮಾನವಾದ ಸುಗಂಧದ್ರವ್ಯ ಮತ್ತೆ ಸಿಗಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆಕೆ ಅರಸನಿಗೆ 4000 ಕಿಲೋಗ್ರಾಂಗೂ ಹೆಚ್ಚು ಬಂಗಾರವನ್ನೂ ಅಪರಿಮಿತ ಸುಗಂಧದ್ರವ್ಯವನ್ನೂ ರತ್ನಗಳನ್ನೂ ಕೊಟ್ಟಳು. ಶೆಬಾದ ರಾಣಿ ಅರಸ ಸೊಲೊಮೋನನಿಗೆ ಕೊಟ್ಟ ಸುಗಂಧದ್ರವ್ಯಕ್ಕೆ ಸರಿಸಮಾನವಾದದ್ದು ಯಾವುದೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ ಅಪರಿವಿುತಸುಗಂಧದ್ರವ್ಯವನ್ನೂ ರತ್ನಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಸುಗಂಧದ್ರವ್ಯಕ್ಕೆ ಸಮಾನವಾದದ್ದು ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆ ಬಳಿಕ ಶೆಬದ ರಾಣಿಯು ಸೊಲೊಮೋನ್ ಅರಸನಿಗೆ ನಾಲ್ಕು ಸಾವಿರದ ನೂರ ನಲವತ್ತು ಕಿಲೋಗ್ರಾಂ ಬಂಗಾರ, ಲೆಕ್ಕವಿಲ್ಲದಷ್ಟು ಸುಗಂಧದ್ರವ್ಯಗಳು ಮತ್ತು ಬೆಲೆಬಾಳುವ ವಜ್ರಗಳನ್ನು ಕೊಟ್ಟಳು. ಅಷ್ಟು ಅತ್ಯುತ್ತಮವಾದ ಸುಗಂಧದ್ರವ್ಯಗಳನ್ನು ಯಾರೂ ಸೊಲೊಮೋನನಿಗೆ ಕೊಟ್ಟಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವಳು ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂ ತೂಕ ಬಂಗಾರವನ್ನೂ, ಬಹು ಸಮೃದ್ಧಿಯಾದ ಸುಗಂಧದ್ರವ್ಯಗಳನ್ನೂ, ಅಮೂಲ್ಯವಾದ ರತ್ನಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಂಥ ಸುಗಂಧದ್ರವ್ಯಗಳಿಗೆ ಬೇರೆ ಯಾವುದು ಸಮನವಾದದ್ದು ಇರಲಿಲ್ಲ. ಅಧ್ಯಾಯವನ್ನು ನೋಡಿ |