Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 1:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಮ್ಮ ದೇವರ ಮತ್ತು ಉದ್ಧಾರಕ ಯೇಸುಕ್ರಿಸ್ತರ ಸತ್ಸಂಬಂಧದ ಮೂಲಕ ನಮ್ಮಂತೆಯೇ ಅಮೂಲ್ಯವಾದ ವಿಶ್ವಾಸವನ್ನು ಹೊಂದಿರುವ ಭಕ್ತಾದಿಗಳಿಗೆ - ಯೇಸುಕ್ರಿಸ್ತರ ದಾಸನೂ ಪ್ರೇಷಿತನೂ ಆದ ಸಿಮೋನ ಪೇತ್ರನು ಬರೆಯುವ ಪತ್ರ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ಕ್ರಿಸ್ತನ ಸೇವಕನೂ ಅಪೊಸ್ತಲನೂ ಆದ ಸಿಮೆಯೋನ ಪೇತ್ರನು ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿರುವ ಜನರೆಲ್ಲರಿಗೂ ಬರೆಯುವ ಪತ್ರ. ನಮ್ಮ ದೇವರೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನು ನೀತಿವಂತನಾಗಿರುವುದರಿಂದ ನೀವು ಆ ನಂಬಿಕೆಯನ್ನು ಪಡೆದುಕೊಂಡಿರಿ. ಆತನು ಯೋಗ್ಯವಾದದ್ದನ್ನೇ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು, ನಮ್ಮ ದೇವರ ಮತ್ತು ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ನೀತಿಯ ಮೂಲಕ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜು ಕ್ರಿಸ್ತಾಚೊ ಅಪೊಸ್ತಲ್ ಅನಿ ಸೆವಕ್ ಸಿಮಾವ್ ಪೆದ್ರು, ಅಮ್ಚ್ಯಾ ದೆವಾಚ್ಯಾ ನಿತಿವಂತ್ಪಾನಾ ಅನಿ ಸುಟ್ಕಾ ದಿನಾರ್‍ಯಾ ಜೆಜು ಕ್ರಿಸ್ತಾಚೊ ವಿಶ್ವಾಸ್ ಕಿಮ್ತಿಚೊ ಮನುನ್ ದಿಲ್ಲ್ಯಾಕ್ನಿ ಲಿವ್ತಲೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 1:1
40 ತಿಳಿವುಗಳ ಹೋಲಿಕೆ  

ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.


ಹಾಗು, ಆ ಸಂದೇಶವನ್ನು ಸಾರುವ ಜವಾಬ್ದಾರಿಯು ನಮ್ಮ ರಕ್ಷಕನಾದ ದೇವರ ಆಜ್ಞೆಯ ಅನುಸಾರವಾಗಿ ನನಗೆ ಒಪ್ಪಿಸಲ್ಪಟ್ಟಿದೆ ಹಾಗು ಸೂಕ್ತ ಕಾಲದಲ್ಲಿ ಸಂದೇಶವನ್ನು ಸಾರುವುದರ ಮೂಲಕ ತನ್ನ ವಾಕ್ಯವನ್ನು ನನಗೆ ಪ್ರಕಟಪಡಿಸಿದ್ದಾನೆ.


“ನಾನು ನಂಬಿದೆನು. ಆದ್ದರಿಂದ ಮಾತನಾಡಿದೆನು.” ಎಂಬ ಶಾಸ್ತ್ರೋಕ್ತಿಯಲ್ಲಿ ಕಾಣುವಹಾಗೆ ನಂಬಿಕೆಯ ಅದೇ ಆತ್ಮನು ನಮ್ಮಲ್ಲಿರುವುದರಿಂದ ನಾವು ನಂಬಿದವರಾಗಿ ಮಾತನಾಡುತ್ತೇವೆ.


ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.


ನೀವು ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನದಿಂದ ದೂರವಾಗಿ ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಅತ್ಯಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.


ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ,


ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.


ಯೇಸು ಕ್ರಿಸ್ತನ ದಾಸನೂ, ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟವನೂ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಿಸಲ್ಪಟ್ಟವನೂ ಆಗಿರುವ ಪೌಲನು,


ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ.


ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ,


ನಿನ್ನಲ್ಲಿರುವ ಯಥಾರ್ಥವಾದ ನಂಬಿಕೆಯು ನನ್ನ ನೆನಪಿಗೆ ಬಂದಿತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಳಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು. ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ.


ಇದರಲ್ಲಿ ನನ್ನ ಉದ್ದೇಶವೇನೆಂದರೆ, ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು, ಧರ್ಮಶಾಸ್ತ್ರದ ಫಲವಾಗಿರುವ ಸ್ವನೀತಿಯನ್ನಲ್ಲ, ಕ್ರಿಸ್ತನನ್ನು ನಂಬುವುದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿರಬೇಕೆಂಬುದೇ.


“ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.


ಈ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಯಾವುವೆಂದರೆ, ಮೊದಲನೆಯವನು ಪೇತ್ರನೆನಿಸಿಕೊಳ್ಳುವ ಸೀಮೋನನು, ಅವನ ತಮ್ಮ ಅಂದ್ರೆಯ, ಜೆಬೆದಾಯನ ಮಗ ಯಾಕೋಬ, ಅವನ ತಮ್ಮನಾದ ಯೋಹಾನ,


ಆದ್ದರಿಂದ ನಂಬುವವರಾದ ನಿಮಗೇ ಈ ಕಲ್ಲು ಅತ್ಯಮೂಲ್ಯವಾದುದು. ಆದರೆ ನಂಬದೆಯಿರುವವರಿಗೆ, “ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು”


ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.


ದೇವರ ಸೇವಕನೂ, ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು, ನಮ್ಮೆಲ್ಲರಿಗೆ ಹುದುವಾದ ನಂಬಿಕೆಯಲ್ಲಿ ನಿಜಕುಮಾರನಾಗಿರುವ ತೀತನಿಗೆ ಬರೆಯುವ ಪತ್ರ.


ಕ್ರಿಸ್ತನ ಮೇಲೆ ನಂಬಿಕೆಯಿಡುವುದು ಮಾತ್ರವಲ್ಲ ಆತನಿಗೋಸ್ಕರ ಬಾಧೆಯನ್ನನುಭವಿಸುವುದು ನಿಮಗೆ ವರವಾಗಿ ದೊರಕಿದೆ.


ನಿಮ್ಮೆಲ್ಲರಿಗೂ ಕರ್ತನು ಒಬ್ಬನೇ, ನಂಬಿಕೆಯು ಒಂದೇ, ದೀಕ್ಷಾಸ್ನಾನ ಒಂದೇ,


ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.


ಸುನ್ನತಿಯಾದವರಲ್ಲಿ ಅಪೊಸ್ತಲತನವನ್ನು ನಡೆಸುವುದಕ್ಕೋಸ್ಕರ ಪೇತ್ರನಿಗೆ ವಹಿಸಿಕೊಟ್ಟಂಥ ದೇವರು, ಸುನ್ನತಿಯಿಲ್ಲದವರಲ್ಲಿ ಅದನ್ನು ನಡೆಸುವುದಕ್ಕಾಗಿ ನನಗೆ ವಹಿಸಿದ್ದನು.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.


ನಾನಂತೂ ಅಪೊಸ್ತಲರಲ್ಲಿ ಕನಿಷ್ಠನು; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ.


ನಾನು ಸ್ವತಂತ್ರನಲ್ಲವೋ? ನಾನು ಅಪೊಸ್ತಲನಲ್ಲವೋ? ನಮ್ಮ ಕರ್ತನಾದ ಯೇಸುವನ್ನು ನಾನು ಕಂಡವನಲ್ಲವೇ? ನಾನು ಕರ್ತನಲ್ಲಿ ಮಾಡಿದ ಸೇವೆಯ ಪ್ರತಿಫಲವು ನೀವೇ ಅಲ್ಲವೇ?


ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.


ಹೇಗೆಂದರೆ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ.


ಯೇಸು ಅವರಿಗೆ, “ನಿಮಗೆ ಸಮಾಧಾನವಾಗಲಿ” ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು.


ಅವನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಅವನನ್ನು ನೋಡಿ “ನೀನು ಯೋಹಾನನ ಮಗನಾದ ಸೀಮೋನನು. ಇನ್ನು ಮೇಲೆ ನೀನು ‘ಕೇಫ’ ಎಂದು ಕರೆಯಲ್ಪಡುವಿ” ಎಂದು ಹೇಳಿದನು. (ಕೇಫ ಎಂದರೆ ಪೇತ್ರ ಇಲ್ಲವೆ ಬಂಡೆ ಎಂದು ಅರ್ಥ)


ಆದುದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಕೊಲ್ಲುವರು, ಕೆಲವರನ್ನು ಹಿಂಸೆಪಡಿಸುವರು.’


ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು.


ಆಗ ಯೆಹೂದ್ಯರು ಸುರಕ್ಷಿತವಾಗಿರುವರು, ಯೆರೂಸಲೇಮಿನವರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ‘ನಮ್ಮ ಸದ್ಧರ್ಮ’ ಎಂಬ ಹೆಸರು ಈ ಪಟ್ಟಣಕ್ಕೆ ಸಲ್ಲುವುದು.”


ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”


ಕ್ರಿಸ್ತ ಯೇಸುವಿನ ದಾಸರಾದ ಪೌಲ ಮತ್ತು ತಿಮೊಥೆಯರು, ಫಿಲಿಪ್ಪಿಯದಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಮತ್ತು ಅವರೊಂದಿಗಿರುವ ಸಭಾಧ್ಯಕ್ಷರಿಗೂ ಹಾಗೂ ಸಭಾಸೇವಕರಿಗೂ ಬರೆಯುವುದೇನೆಂದರೆ,


ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದುರಿರುವ ಇಸ್ರಾಯೇಲ್ಯರ ಹನ್ನೆರಡು ಗೋತ್ರದವರಿಗೂ ಬರೆಯುವುದೇನೆಂದರೆ, “ನಿಮಗೆ ಶುಭವಾಗಲಿ.”


ಯೇಸು ಕ್ರಿಸ್ತನ ಸೇವಕನೂ, ಯಾಕೋಬನ ತಮ್ಮನೂ ಆಗಿರುವ ಯೂದನು ಕರೆಯಲ್ಪಟ್ಟವರಿಗೆ, ತಂದೆಯಾದ ದೇವರಲ್ಲಿ ಪ್ರಿಯರಾದವರಿಗೆ, ಯೇಸು ಕ್ರಿಸ್ತನಿಗಾಗಿ ಕಾಪಾಡಲ್ಪಟ್ಟವರಿಗೆ ಬರೆಯುವುದೇನೆಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು