Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 1:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದಲ್ಲದೆ ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆದ್ದರಿಂದ ಪ್ರವಾದನೆಯ ಸಂದೇಶವು ನಮಗೆ ಮತ್ತಷ್ಟು ಖಚಿತವಾಗಿ ಗೊತ್ತಾಗಿದೆ. ಇದನ್ನು ನೀವು ಕತ್ತಲಲ್ಲಿ ಬೆಳಗುವ ದೀಪವೆಂದು ಪರಿಗಣಿಸಿ ಲಕ್ಷ್ಯಕೊಟ್ಟರೆ ಒಳ್ಳೆಯದು. ನಿಮ್ಮ ಹೃದಯದಲ್ಲಿ ಬೆಳಕು ಹರಿದು ಅರುಣೋದಯದ ನಕ್ಷತ್ರವು ಮೂಡುವವರೆಗೂ ಈ ದೀಪವು ಬೆಳಗುತ್ತಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇದಲ್ಲದೆ ಪ್ರವಾದನವಾಕ್ಯವು ನಮಗೆ ಮತ್ತೂ ದೃಢವಾಗಿದೆ. ನಿಮ್ಮ ಹೃದಯದೊಳಗೆ ಬೆಳ್ಳಿಯು ಮೂಡಿ ಅರುಣೋದಯವಾಗುವ ಪರ್ಯಂತರ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಡುವದೇ ಒಳ್ಳೇದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಪ್ರವಾದಿಗಳು ಹೇಳಿದ ಸಂಗತಿಗಳನ್ನು ಇದು ನಮಗೆ ಮತ್ತಷ್ಟು ಖಚಿತಪಡಿಸಿತು. ಅವರು ಹೇಳಿದ್ದನ್ನು ನೀವು ಚಾಚು ತಪ್ಪದೆ ಅನುಸರಿಸುವುದು ಒಳ್ಳೆಯದೇ ಸರಿ. ಅವರು ಹೇಳಿದ ಸಂಗತಿಗಳು ಅಂಧಕಾರದಲ್ಲಿ ಪ್ರಕಾಶಿಸುವ ಬೆಳಕಿನಂತಿವೆ. ನಿಮ್ಮ ಹೃದಯಗಳಲ್ಲಿ ಹಗಲು ಆರಂಭವಾಗಿ, ಮುಂಜಾನೆಯ ನಕ್ಷತ್ರವು ಮೂಡುವವರೆಗೂ ಆ ಬೆಳಕು ಪ್ರಕಾಶಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಮಾತ್ರವಲ್ಲದೆ ನಮಗೆ ಬಹು ನಿಶ್ಚಯವಾದ ಪ್ರವಾದನೆಯ ವಾಕ್ಯಗಳಿವೆ. ಉದಯ ನಕ್ಷತ್ರವಾಗಿರುವ ಕ್ರಿಸ್ತ ಯೇಸು ನಿಮ್ಮ ಹೃದಯಗಳಲ್ಲಿ ಉದಯಿಸುವಾಗ ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪದಂತೆ ಎಣಿಸಿ, ನೀವು ಆ ಪ್ರವಾದನಾ ವಾಕ್ಯಗಳಿಗೆ ಲಕ್ಷ್ಯಕೊಡುವುದು ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅಸೆ ಪ್ರವಾದ್ಯಾನಿ ಸಾಂಗಲ್ಲ್ಯಾ ಗೊಸ್ಟಿಯಾ ಖರೆಚ್, ಕಾಳ್ಕಾತ್ ಹೊಳಾವ್ತಲೆ ದಿವೊ ತೊ ದಿಸ್ ಉತ್ರುನ್ ಅನಿ ಅಮ್ಚ್ಯಾ ಮನಾತ್ನಿ ಸುಖಿರಾಚೊ ಉಜ್ವೊಡ್ ದಾಕ್ವುಸಾಟ್ನಿ ಹೊಳಾವ್ತಲೊ ಉಜ್ವೊಡ್ ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 1:19
27 ತಿಳಿವುಗಳ ಹೋಲಿಕೆ  

“ಯೇಸುವೆಂಬ ನಾನು ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ ಅವನ ಸಂತತಿಯೂ ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”


ಕತ್ತಲಲ್ಲಿ ಸಂಚರಿಸಿದ ಜನರಿಗೆ ದೊಡ್ಡ ಬೆಳಕು ಕಾಣಿಸಿತು. ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಪ್ರಕಾಶವು ಹೊಳೆಯಿತು.


ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ, ನನ್ನ ದಾರಿಗೆ ಬೆಳಕೂ ಆಗಿದೆ.


ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ.


ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.


ಆಜ್ಞೆಯೇ ದೀಪ, ಉಪದೇಶವೇ ಬೆಳಕು, ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ.


ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ.


ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು.


ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು” ಎಂದು ಹೇಳಿದನು.


ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ. ಹೇಗೆಂದರೆ ದೇವರು ತನ್ನ ಮಗನ ಪರವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.


ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.


ಆದರೂ ಧರ್ಮಶಾಸ್ತ್ರಕ್ಕೆ ಸರಿಯಾಗಿ “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ, ನೀವು ಒಳ್ಳೆಯದನ್ನೇ ಮಾಡುವವರಾಗಿರುವಿರಿ.


ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.


ಇದಕ್ಕಿಂತ ಹೆಚ್ಚಿನ ಹೊರೆಯನ್ನು ನಿಮ್ಮ ಮೇಲೆ ಹೊರಿಸಬಾರದೆಂದು ಪವಿತ್ರಾತ್ಮನಿಗೂ ನಮಗೂ ಹಿತವಾಗಿ ತೋರಿತು; ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೆಯದಾಗುವುದು. ಶುಭವಾಗಲಿ.”


ಅವರು ಸಭೆಯ ಮುಂದೆ ನೀನು ತೋರಿಸಿದ ಪ್ರೀತಿಯ ಕುರಿತು ಸಾಕ್ಷಿ ಹೇಳಿದ್ದಾರೆ. ಅವರು ತಮ್ಮ ಸಂಚಾರವನ್ನು ಇನ್ನೂ ಮುಂದುವರಿಸುವಂತೆ ದೇವರು ಮೆಚ್ಚುವ ರೀತಿಯಲ್ಲಿ ನೀನು ನೆರವಾಗಬೇಕು.


ಕಾರ್ಯವು ನಡೆಯುವುದಕ್ಕೆ ಮೊದಲು ಇವರಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಸಮಯಕ್ಕೆ ಮೊದಲೇ “ಅವನು ಸತ್ಯವಂತನು” ಎಂದು ಯಾರು ಮುಂತಿಳಿಸಿದ್ದಾರೆ? ಯಾರೂ ಏನನ್ನೂ ತಿಳಿಸಬಲ್ಲವರಲ್ಲ, ಏನನ್ನೂ ಹೇಳತಕ್ಕವರಲ್ಲ, ನಿಮ್ಮ ಮಾತುಗಳು ಯಾರ ಕಿವಿಗೂ ಬೀಳುವುದಿಲ್ಲ.


ಆಹಾ, ಉದಯನಕ್ಷತ್ರವೇ, ಉದಯಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ! ಜನಾಂಗಗಳನ್ನು ಸ್ವಾಧೀನಪಡಿಸಿಕೊಂಡ ನೀನು ಭೂಮಿಗೆ ಹೇಗೆ ತಳಲ್ಪಟ್ಟಿದ್ದೀ!


ಯಾಕೆಂದರೆ, ದೇವದೂತರ ಮೂಲಕ ಹೇಳಲ್ಪಟ್ಟ ಸಂದೇಶವು ಸ್ಥಿರವಾಗಿರಲು, ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಮತ್ತು ಅವಿಧೇಯತ್ವಕ್ಕೂ ಶಿಕ್ಷಾರ್ಹವಾದ ಪ್ರತಿಫಲ ಹೊಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು