2 ಪೇತ್ರನು 1:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀವು ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನದಿಂದ ದೂರವಾಗಿ ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಅತ್ಯಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಹೀಗೆ ನೀವು ಲೋಕದಲ್ಲಿ ಆಶಾಪಾಶಗಳಿಂದ ಉಂಟಾಗುವ ಭ್ರಷ್ಟಾಚಾರದಿಂದ ತಪ್ಪಿಸಿಕೊಂಡು ದೈವಿಕಸ್ವಭಾವದಲ್ಲಿ ಪಾಲುಗಾರರಾಗುವಂತೆ, ದೇವರು ಅಮೂಲ್ಯವೂ ಅತ್ಯುತ್ತಮವೂ ಆದ ವಾಗ್ದಾನಗಳನ್ನು ಅನುಗ್ರಹಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಪ್ರಭಾವ ಗುಣಾತಿಶಯಗಳಿಂದ ಅಮೂಲ್ಯವಾಗಿಯೂ ಉತ್ಕೃಷ್ಟವಾಗಿಯೂ ಇರುವ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೇಸು ತಾನು ಮಾಡಿದ ವಾಗ್ದಾನದಂತೆ, ತನ್ನ ಪ್ರಭಾವ ಮತ್ತು ಗುಣಾತಿಶಯಗಳ ಮೂಲಕ ನಮಗೆ ಅಮೂಲ್ಯವಾದ ಹಾಗೂ ಉತ್ಕೃಷ್ಟವಾದ ವರಗಳನ್ನು ದಯಪಾಲಿಸಿರುವನು. ಆ ವರಗಳಿಂದ ನೀವು ದೇವರ ಗುಣಾತಿಶಯದಲ್ಲಿ ಪಾಲುಗಾರರಾಗಲು ಸಾಧ್ಯ. ಹೀಗಿರಲಾಗಿ ನೀವು ಈ ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನಕ್ಕೆ ತಪ್ಪಿಸಿಕೊಂಡವರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಅತ್ಯಂತ ಮಹತ್ವವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ದೇವರು ನಮಗೆ ದಯಪಾಲಿಸಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಅಸೆ ತೆನಿ ಅಮ್ಕಾ ಗೊಸ್ಟ್ ದಿವ್ನ್ ಸಾಂಗಲ್ಲೆ ಲೈ ಮೊಟೆ ಅನಿ ಕಿಮ್ತಿಚೆ ವರು ದಿಲ್ಯಾನಾಯ್, ಅಸೆ ಹ್ಯಾ ವರುಕ್ ಲಾಗುನ್ ತೆನಿ ಹ್ಯಾ ಜಗಾಚ್ಯಾ ನಾಸ್ ಹೊವ್ನ್ ಜಾತಲ್ಯಾ ಬುರ್ಶ್ಯಾಪಾನಾತ್ನಾ ಚುಕ್ವುನ್ ಘೆವ್ಚೆ ಅನಿ ದೆವಾಚ್ಯಾ ಗುನಾತ್ ವಾಟೊ ಘೆಯ್ ಸಾರ್ಕೆ ಹೊಲೆ. ಅಧ್ಯಾಯವನ್ನು ನೋಡಿ |