2 ಪೇತ್ರನು 2:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇಸ್ರಯೇಲ್ ಜನರಲ್ಲೇ ಕಪಟ ಪ್ರವಾದಿಗಳು ಕಾಣಿಸಿಕೊಂಡರು. ಅಂತೆಯೇ, ನಿಮ್ಮಲ್ಲೂ ಸುಳ್ಳುಬೋಧಕರು ಕಾಣಿಸಿಕೊಳ್ಳುವರು. ಹಾನಿಕರವಾದ ದುರ್ಬೋಧನೆಗಳನ್ನು ಗೋಪ್ಯವಾಗಿ ಪ್ರಸರಿಸುವರು. ಒತ್ತೆಯಿಟ್ಟು ತಮ್ಮನ್ನು ರಕ್ಷಿಸಿದ ಒಡೆಯನನ್ನೇ ಅರಿಯೆವೆಂದು ನಿರಾಕರಿಸುವರು. ಹೀಗೆ ತಮ್ಮ ವಿನಾಶವನ್ನು ತಾವೇ ಬೇಗನೆ ಬರಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆದರೆ ಇಸ್ರಾಯೇಲ್ ಜನರಲ್ಲಿ ಸುಳ್ಳುಪ್ರವಾದಿಗಳೂ ಎದ್ದರಲ್ಲಾ; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ನಾಶಕರವಾದ ಮತಭೇದಗಳನ್ನು ಕಳ್ಳತನದಿಂದ ಹುಟ್ಟಿಸುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನು ಕೂಡ ತಾವು ಅರಿಯೆವು ಎಂದು ಹೇಳುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶವನ್ನು ಬರಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆದರೆ ಆ ಕಾಲದಲ್ಲಿ ಸುಳ್ಳು ಪ್ರವಾದಿಗಳು ಸಹ ಜನರಲ್ಲಿ ಕಾಣಿಸಿಕೊಂಡರು. ಅದೇ ಪ್ರಕಾರ ನಿಮ್ಮಲ್ಲಿಯೂ ಈಗ ಸುಳ್ಳು ಬೋಧಕರು ಕಾಣಿಸಿಕೊಳ್ಳುವರು. ಅಂಥವರು ಹಾನಿಕರವಾದ ಸುಳ್ಳು ಬೋಧನೆಗಳನ್ನು ರಹಸ್ಯವಾಗಿ ಸಭೆಯೊಳಗೆ ತರುವರು. ತಮ್ಮನ್ನು ಕೊಂಡುಕೊಂಡ ಸಾರ್ವಭೌಮ ಕರ್ತ ಆಗಿರುವವರನ್ನೇ ಅಲ್ಲಗಳೆಯುವರು. ಹೀಗೆ ಅವರು ತಮ್ಮ ಮೇಲೆ ವಿನಾಶವನ್ನು ತಾವೇ ಬರಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಲೊಕಾಚ್ಯಾ ಮದ್ದಿ ಝುಟೆ ಪ್ರವಾದಿ ಉಟಲ್ಲ್ಯಾ ಸಾರ್ಕೆ ಝುಟಿ ಶಿಕಾಪಾ ಶಿಕ್ವುತಲೆಬಿ ಉಟ್ತಾತ್ ತೆನಿ ನಾಶ್ ಹೊತಲಿ ಶಿಕಾಪಾ ಹಾನ್ತ್ಯಾತ್, ಅನಿ ಅಪ್ನಾಕುಚ್ ಇಕಾತ್ ಘೆಟಲ್ಲ್ಯಾ ಧನಿಯಾಕುಚ್ ಕಾಯ್ಬಿ ನ್ಹಯ್ ಸಾರ್ಕೆ ಕರ್ತಾತ್, ಅನಿ ಅಸೆಚ್ ತೆನಿ ಅಪ್ನಾ ವರ್ತಿ ನಾಶ್ ಹಾನುನ್ ಘೆತಾತ್. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.