2 ಪೇತ್ರನು 2:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮುಖ್ಯವಾಗಿ ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಮುಖ್ಯವಾಗಿ, ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಬಲಿಯಾಗಿರುವವರನ್ನು ಮತ್ತು ದೇವರ ಅಧಿಕಾರವನ್ನು ತೃಣೀಕರಿಸುವವರನ್ನು ಅವರು ಶಿಕ್ಷಿಸದೆ ಬಿಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮುಖ್ಯವಾಗಿ ಬಂಡುತನವನ್ನು ಆಶಿಸಿ ಶರೀರಭಾವಾನುಸಾರ ನಡೆದು ಪ್ರಭುತ್ವ ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಫಾಪರರಾಗಿದ್ದು ಮಹಾಪದವಿಯವರನ್ನು ನಿರ್ಭಯವಾಗಿ ದೂಷಿಸುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಪ್ರಭುವಿನ ಅಧಿಕಾರವನ್ನು ದ್ವೇಷಿಸುವ ಜನರನ್ನು ಮತ್ತು ತಮ್ಮ ಪಾಪಸ್ವಭಾವದ ಇಚ್ಚೆಗನುಸಾರವಾಗಿ ಕೆಟ್ಟಕಾರ್ಯಗಳನ್ನು ಮಾಡುವ ಜನರನ್ನು ದೇವರು ಹೀಗೆ ದಂಡಿಸುತ್ತಾನೆ. ಈ ಸುಳ್ಳುಬೋಧಕರು ತಮಗೆ ಬೇಕಾದದ್ದನ್ನೆಲ್ಲಾ ಮಾಡುತ್ತಾರೆ ಮತ್ತು ತಮ್ಮ ಬಗ್ಗೆ ಹೊಗಳಿಕೊಳ್ಳುತ್ತಾರೆ. ಪ್ರಭಾವದಿಂದ ಕೂಡಿರುವ ದೇವದೂತರ ಬಗ್ಗೆ ಕೆಟ್ಟದ್ದನ್ನು ಹೇಳಲು ಅವರು ಹೆದರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೆ ಮುಖ್ಯವಾಗಿ ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವರು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ. ದುರಹಂಕಾರದಿಂದ ಸ್ವರ್ಗೀಯ ಜೀವಿಗಳನ್ನು ದೂಷಿಸುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಅನಿ ತಿ ಝುಟಿ ಶಿಕಾಪಾ ಶಿಕ್ವುತಲೆ ಕೊನಾಕ್ಬಿ ಭಿಂಯ್ ನಸ್ತಾನಾ ಅಪ್ನಾಚ್ಯಾ ಮನಾಕ್ ಯೆತಾ ತಸೆ ಆಂಗಾಕ್ ಸಮಂದ್ ಪಡಲ್ಲೆ ಹೊವ್ನ್ ಹಾತ್, ಅನಿ ಮಹಿಮೆಚ್ಯಾ ಪದ್ವಿ ವರ್ತಿ ಅನಿ ಎಕ್ಲ್ಯಾಕ್ನಿ ಮಾನ್ ದಿವ್ನಸ್ತಾನಾ ಹೊತ್ತೆ. ಅಧ್ಯಾಯವನ್ನು ನೋಡಿ |