Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇವರದು ಬರೀ ಕಾಮುಕ ಕಣ್ಣು; ಇವರು ಎಂದಿಗೂ ಇಂಗದ ಪಾಪಬಯಕೆಯುಳ್ಳವರು; ದುರ್ಬಲರನ್ನು ವಂಚಿಸಿ ವಶಪಡಿಸಿಕೊಳ್ಳುವುದೇ ಇವರ ಹವ್ಯಾಸ; ಲೋಭದಲ್ಲೇ ಪಳಗಿದ ಮನಸ್ಸುಳ್ಳವರು ಹಾಗೂ ಶಾಪಗ್ರಸ್ತ ಸಂತಾನದವರು ಇವರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲಚಿತ್ತರನ್ನು ಮರುಳುಗೊಳಿಸುವವರೂ ಲೋಭದಲ್ಲಿ ತೇರ್ಗಡೆಹೊಂದಿದ ಮನಸ್ಸುಳ್ಳವರೂ ಶಾಪಕ್ಕೆ ಪಾತ್ರರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರಾಗಿದ್ದಾರೆ. ಅವರು ದುರ್ಬಲರನ್ನು ಪಾಪವೆಂಬ ಉರುಲಿನಲ್ಲಿ ಬೀಳಿಸುತ್ತಾರೆ. ಅವರು ತಮ್ಮ ಹೃದಯಗಳಿಗೆ ಸ್ವಾರ್ಥವನ್ನೇ ಕಲಿಸಿದ್ದಾರೆ. ಅವರು ಶಾಪಗ್ರಸ್ತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇವರು ಕಾಮುಕದಿಂದ ತುಂಬಿದ ಕಣ್ಣು ಮತ್ತು ಪಾಪವನ್ನು ಬಿಡಲೊಲ್ಲದ ಚಪಲಚಿತ್ತರೂ ಮರುಳುಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೆನಿ ವೆಭಿಚಾರಾನ್ ಭರಲ್ಲ್ಯಾ ಡೊಳ್ಯಾಂಚೆ ಹೊವ್ನ್ ಹಾತ್, ತೆನಿ ವಿಶ್ವಾಸ್ ನಸಲ್ಲೆ ಪಾಪಾಚ್ಯಾ ಪಾಸಿತ್ ಪಾಡ್ವುತಾತ್, ತೆನಿ ಅಪ್ನಾ ಮನಾಕ್ನಿ ಬರೆ ದಿಸ್ತಲೆಚ್ ಚಿಂತತಾತ್, ಅನಿ ಶಾಪಾಕ್ ಗುರಿ ಹೊಲಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:14
28 ತಿಳಿವುಗಳ ಹೋಲಿಕೆ  

ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.


ನಾವೆಲ್ಲರೂ ಪೂರ್ವದಲ್ಲಿ ಅವರ ಹಾಗೆಯೇ ಇದ್ದೆವು, ಶರೀರಭಾವದ ಆಸೆಗಳಿಗೆ ಅಧೀನರಾಗಿ, ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು.


ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ.


ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ,


ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ನಿಮ್ಮಲ್ಲಿ ಕೆಲವರು ಯೋಗ್ಯರೆಂದು ಕಂಡುಬರುವುದಕ್ಕಾಗಿ ಭಿನ್ನಾಭಿಪ್ರಾಯಗಳು ಇರುವುದು ಅವಶ್ಯವೇ.


ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ?


ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.


ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.


ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಕೂಷ್ಯನು ತನ್ನ ಚರ್ಮವನ್ನು ಮಾರ್ಪಡಿಸಬಲ್ಲನೇ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸಲು ಸಾಧ್ಯವೇ? ಹೀಗಾದರೆ ದುಷ್ಟತನದಲ್ಲಿ ಶಿಕ್ಷಿತರಾದ ನೀವು ಶಿಷ್ಟತನದಲ್ಲಿ ನಡೆಯಬಹುದು.


ಏಕೆಂದರೆ ಅವನು ಎರಡು ಮನಸ್ಸುಳ್ಳವನು, ತನ್ನ ನಡತೆಯಲ್ಲಿ ಚಂಚಲನಾಗಿದ್ದಾನೆ.


ಮಿಥ್ಯಾ ದೀನತೆಯನ್ನು ಅಪೇಕ್ಷಿಸಿ ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದು, ದರ್ಶನಗಳಾದವೆಂದು ಕೊಚ್ಚಿಕೊಂಡು, ಪ್ರಾಪಂಚಿಕ ಬುದ್ಧಿಯಿಂದಾಗಿ, ಕಾರಣವಿಲ್ಲದೆ ಉಬ್ಬಿಕೊಂಡು ಇರುವಂಥವರಿಗೆ ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವುದಕ್ಕೆ ಅವಕಾಶಕೊಡಬೇಡಿರಿ.


ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ.


ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನ ಮಾಡುವುದು, ಇಗೋ, ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯ ತೀರಿಸುವುದಕ್ಕೆ ಕೆಳಗೆ ಇಳಿದು ಬರುವುದು.


ನಿನ್ನ ಹೃದಯವು ಅವಳ ಸೌಂದರ್ಯವನ್ನು ಮೋಹಿಸದಿರಲಿ, ಅವಳು ತನ್ನ ಕಣ್ಣುರೆಪ್ಪೆಗಳಿಂದ ನಿನ್ನನ್ನು ವಶಮಾಡಿಕೊಂಡಾಳು, ನೋಡಿಕೋ.


ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.


ಕೆಲವು ದಿನ ಮಾತ್ರ ಬದುಕತಕ್ಕ ಕೂಸಾಗಲಿ, ವೃದ್ಧನಾಗಲಿ ಅಲ್ಲಿ ಇರುವುದಿಲ್ಲ; ಯುವಕನು ನೂರು ವರ್ಷದೊಳಗೆ ಸಾಯನು, ಪಾಪಿಷ್ಠನಿಗೂ ನೂರು ವರ್ಷದೊಳಗೆ ಶಾಪ ತಗಲದು.


ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,


ಒಂದು ವೇಳೆ ನನ್ನ ಹೃದಯವು ಪರಸ್ತ್ರೀಯಲ್ಲಿ ಮೋಹಗೊಂಡು, ನಾನು ನೆರೆಯವನ ಬಾಗಿಲಲ್ಲಿ ಹೊಂಚು ಹಾಕಿದ್ದರೆ,


ನನ್ನ ನಡತೆಯಲ್ಲಿ ದಾರಿತಪ್ಪಿದ್ದರೆ, ನನ್ನ ಹೃದಯವು ಕಂಡಕಂಡದ್ದನ್ನು ಹಿಂಬಾಲಿಸಿದ್ದರೆ, ನನ್ನ ಕೈಗಳಲ್ಲಿ ಕಲ್ಮಷವು ಅಂಟಿಕೊಂಡಿದ್ದರೆ,


ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.


ಅವಳ ನಡತೆಯು ಚಂಚಲವಾಗಿರುವುದರಿಂದ ಅವಳು ಜೀವದ ಮಾರ್ಗವನ್ನು ವಿವೇಚಿಸಲಾರಳು, ಅದು ಅವಳಿಗೆ ತಿಳಿದೇ ಇಲ್ಲ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಜನರ ಪ್ರಾಣಗಳನ್ನು ಬೇಟೆಯಾಡಬೇಕೆಂದು, ಎಲ್ಲರ ಮೊಣಕೈಗಳಿಗೆ ತಾಯಿತಗಳನ್ನು ಕಟ್ಟಿ, ಉದ್ದವಾದವರಿಗೂ, ಗಿಡ್ಡವಾದವರಿಗೂ ತಕ್ಕ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಸ್ತ್ರೀಯರ ಗತಿಯನ್ನು ಏನೆಂದು ಹೇಳಲಿ! ಸ್ತ್ರೀಯರೇ, ನೀವು ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ ಸ್ವಂತ ಪ್ರಾಣಗಳನ್ನು ಉಳಿಸಿಕೊಳ್ಳುವಿರೋ?


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ಜನರು ನೋಡಬೇಕೆಂದು ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತೀರೀ. ನೀವು ವಿಧವೆಯರ ಮನೆಗಳನ್ನು ನುಂಗಿ ನಟನೆಮಾಡುತ್ತೀರಿ. ಆದುದರಿಂದ ನೀವು ಹೆಚ್ಚಿನ ದಂಡನೆಯನ್ನು ಹೊಂದುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು