Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ದೇವರು ಆ ದುಷ್ಟರ ಅನೈತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೆ, ಆ ದುರ್ಜನರ ಅನೈತಿಕ ನಡವಳಿಕೆಯನ್ನು ಕಂಡು ಅತಿಯಾಗಿ ಮನನೊಂದಿದ್ದ ಲೋತ ಎಂಬ ಸತ್ಪುರುಷನನ್ನು ಸಂರಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಆ ಅಧರ್ಮಿಗಳ ನಾಚಿಕೆಗೆಟ್ಟ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ದೇವರು ಆ ಪಟ್ಟಣಗಳಿಂದ ಲೋಟನನ್ನು ರಕ್ಷಿಸಿದನು. ಲೋಟನು ನೀತಿವಂತನಾಗಿದ್ದನು. ದುಷ್ಟ ಜನರ ಕೆಟ್ಟ ನಡತೆಯಿಂದ ಅವನು ದುಃಖಗೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರು ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆನಿ ಲೊಟ್ ಮನ್ತಲ್ಯಾ ನಿತಿವಂತ್ ಮಾನ್ಸಾಕ್ ಹುರ್ವುಲ್ಯಾನ್ ಕಶ್ಯಾಕ್ ಮಟ್ಲ್ಯಾರ್, ತೆಕಾ ಹ್ಯಾ ಅನಿ ಬುರ್ಶಾ ಲೊಕಾನಿ ಕರ್ತಲೆ ಬಗುನ್ ಮನಾಕ್ ತೆಕಾ ಲೈ ಬೆಜಾರ್ ಹೊಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:7
14 ತಿಳಿವುಗಳ ಹೋಲಿಕೆ  

ಅವನು ತಡಮಾಡಲು ಯೆಹೋವನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಮಕ್ಕಳನ್ನೂ ಕೈಹಿಡಿದು ಹೊರಗೆ ತಂದು ಪಟ್ಟಣದ ಆಚೆಗೆ ಬಿಟ್ಟರು.


ದೇವರು ಆ ಪ್ರದೇಶದ ಪಟ್ಟಣಗಳನ್ನು ನಾಶಮಾಡಿದಾಗ, ಅಬ್ರಹಾಮನನ್ನು ನೆನಪುಮಾಡಿಕೊಂಡನು. ಲೋಟನು ವಾಸವಾಗಿದ್ದ ಪಟ್ಟಣಗಳನ್ನು ಹಾಳುಮಾಡಿ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿ ಪಾರುಮಾಡಿದನು.


ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂಚಿತವಾಗಿ ತಿಳಿದುಕೊಂಡಿರುವುದರಿಂದ ದುಷ್ಟರ ವಂಚನೆಯಲ್ಲಿ ಸಿಕ್ಕಿ ನಿಮ್ಮ ಸ್ಥಿರವಾದ ನಂಬಿಕೆಯನ್ನು ಬಿಟ್ಟು ಭ್ರಷ್ಟರಾಗದಂತೆಯೂ ಎಚ್ಚರಿಕೆಯಾಗಿರಿ.


ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.


ಪ್ರವಾದಿಗಳ ವಿಷಯ: ನನ್ನ ಹೃದಯವು ನನ್ನೊಳಗೆ ಒಡೆದುಹೋಗಿದೆ; ನನ್ನ ಎಲುಬುಗಳೆಲ್ಲಾ ಕರಗಿಹೋಗಿವೆ. ನಾನು ಯೆಹೋವನಿಗೂ ಆತನ ಪರಿಶುದ್ಧ ವಾಕ್ಯಗಳಿಗೂ ವಶನಾಗಿ ಅಮಲೇರಿದವನಂತಿದ್ದೇನೆ. ಹೌದು, ದ್ರಾಕ್ಷಾರಸಕ್ಕೆ ಸೋತವನ ಹಾಗಿದ್ದೇನೆ.


ಆದರೆ ಸೊದೋಮ್ ಪಟ್ಟಣದ ಜನರು ಯೆಹೋವನ ದೃಷ್ಟಿಯಲ್ಲಿ ಬಹು ದುಷ್ಟರೂ ಪಾಪಿಷ್ಠರು ಆಗಿದ್ದರು.


ಬೇಗ ಅಲ್ಲಿಗೆ ಹೋಗಿ ತಪ್ಪಿಸಿಕೋ; ನೀನು ಆ ಪಟ್ಟಣವನ್ನು ಮುಟ್ಟುವ ತನಕ ನಾನೇನೂ ಮಾಡುವುದಕ್ಕಾಗುವುದಿಲ್ಲ” ಎಂದನು. ಇದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು.


ಅಯ್ಯೋ, ನಾನು ಮೇಷೆಕಿನವರಲ್ಲಿ ತಂಗಬೇಕಲ್ಲಾ! ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ!


ಲೋಟನಿಗೆ, “ಈ ರಾತ್ರಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ಕರೆದುಕೊಂಡು ಬಾ; ಅವರೊಡನೆ ನಮಗೆ ಸಂಗಮವಾಗಬೇಕೆಂದು” ಕೂಗಿ ಹೇಳಿದರು.


ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು.


ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.


ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು