Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಏಕೆಂದರೆ ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ಬಹಳವಾಗಿ ನೊಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆತನು ಆ ದುರ್ಜನರ ನಡುವೆ ಬಾಳುತ್ತಾ ಅವರ ದುಷ್ಕೃತ್ಯಗಳನ್ನು ಕಂಡು ಕೇಳುತ್ತಿದ್ದಾಗ, ಅವನ ನಿರ್ಮಲ ಹೃದಯ ದಿನೇದಿನೇ ಅತೀವ ವೇದನೆಯನ್ನು ಅನುಭವಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ನೀತಿವಂತನು ಅವರ ನಡುವೆ ಇದ್ದುಕೊಂಡು ಅವರ ಅನ್ಯಾಯಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿವಿುತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ಬಹಳವಾಗಿ ಕರಕರೆಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 (ಲೋಟನು ನೀತಿವಂತನಾಗಿದ್ದನು. ಆದರೆ ಅವನು ಪ್ರತಿದಿನವೂ ಆ ದುಷ್ಟಜನರ ಮಧ್ಯೆ ಜೀವಿಸುತ್ತಿದ್ದನು. ಕೆಟ್ಟಕಾರ್ಯಗಳನ್ನು ನೋಡಿ ಮತ್ತು ಕೇಳಿ ಅವನ ಒಳ್ಳೆಯ ಹೃದಯವು ವೇದನೆಗೆ ಒಳಗಾಗಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯಕೃತ್ಯಗಳನ್ನು ನೋಡುತ್ತಾ, ಕೇಳುತ್ತಾ, ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಲೊಟ್ ಮನ್ತಲೊ ನಿತಿವಂತ್ ತೆಂಚ್ಯಾ ಮದ್ದಿ ಸದ್ದಿ ಜಿವನ್ ಕರುಲಾಗಲೊ, ಅನಿ ಸದ್ದಿ ತೆನಿ ಕರ್ತಲಿ ಬುರ್ಶಿ ಕಾಮಾ ಬಗುನ್ ಸದ್ದಿ ತೊ ಆಯ್ಕುನ್ ತೆಚ್ಯಾ ಮನಾತ್ ಬೆಜಾರ್ ಹೊವ್‍ಲಾಗಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:8
12 ತಿಳಿವುಗಳ ಹೋಲಿಕೆ  

ನಿನ್ನ ನುಡಿಯನ್ನು ಕೈಗೊಳ್ಳದ ಧರ್ಮಭ್ರಷ್ಟರನ್ನು ನೋಡಿ ಅಸಹ್ಯಪಟ್ಟಿದ್ದೇನೆ.


ಯೆಹೋವನು ಕೂಗಿ ಅವನಿಗೆ, “ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು” ಎಂದು ಅಪ್ಪಣೆಕೊಟ್ಟನು.


ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿಮಿತ್ತ, ನನ್ನ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ. ಸಾದ್ದಿ.


ದುಷ್ಟರಿಂದ ಸೋತ ಶಿಷ್ಟನು, ಹಾಳು ಬಾವಿ ಮತ್ತು ತುಳಿದಾಡಿದ ಒರತೆ.


ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.


ಧರ್ಮಶಾಸ್ತ್ರವು ನೀತಿವಂತರಿಗೋಸ್ಕರ ಅಲ್ಲ, ಆದರೆ ಅಕ್ರಮಗಾರರು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ಅಪವಿತ್ರರು, ಪ್ರಾಪಂಚಿಕರು, ತಂದೆತಾಯಿಗಳನ್ನು ಕೊಲ್ಲುವವರು, ನರಹತ್ಯಮಾಡುವವರು,


ಶಿಷ್ಟರಿಗೆ ಉಲ್ಲಾಸವಾದರೆ ದೊಡ್ಡ ಸಂಭ್ರಮವಾಗುವುದು, ದುಷ್ಟರಿಗೆ ಏಳಿಗೆಯಾದರೆ ಜನರು ಅಡಗಿಕೊಳ್ಳುವರು.


ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಟ್ಟಿದ್ದರಿಂದ ನಿನ್ನ ಮೇಲಿನ ಅಭಿಮಾನ ನನ್ನನ್ನು ದಹಿಸಿಬಿಟ್ಟಿತು,


ಆಗ ಅವರು ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


ಆದರೆ ಸೊದೋಮ್ ಪಟ್ಟಣದ ಜನರು ಯೆಹೋವನ ದೃಷ್ಟಿಯಲ್ಲಿ ಬಹು ದುಷ್ಟರೂ ಪಾಪಿಷ್ಠರು ಆಗಿದ್ದರು.


ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು