2 ಪೇತ್ರನು 3:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಪ್ರಭುವಿನ ದಿನ ಬಂದೇ ತೀರುವುದು. ಅದು ಕಳ್ಳನಂತೆಯೇ ಬರುವುದು. ಆಗ, ಆಕಾಶಮಂಡಲವು ಸಿಡಿಲ ಗರ್ಜನೆಯೊಂದಿಗೆ ಅಳಿದುಹೋಗುವುದು. ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಸುಟ್ಟು ಲಯವಾಗಿ ಹೋಗುವುವು. ಭೂಮಿಯೂ ಅದರಲ್ಲಿರುವ ಸಮಸ್ತವೂ ಉರಿದು ಭಸ್ಮವಾಗುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವದು, ಸೂರ್ಯಚಂದ್ರ ನಕ್ಷತ್ರಗಳು ಉರಿದು ಲಯವಾಗಿ ಹೋಗುವವು, ಭೂವಿುಯೂ ಅದರಲ್ಲಿರುವ ಕೆಲಸಗಳೂ ಸುಟ್ಟುಹೋಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದರೆ ಪ್ರಭುವು ಮತ್ತೆ ಪ್ರತ್ಯಕ್ಷನಾಗುವ ದಿನವು ಕಳ್ಳನು ಬರುವಂತೆ ಅನಿರೀಕ್ಷಿತವಾಗಿ ಬರುತ್ತದೆ. ಆಕಾಶವು ಮಹಾ ಘೋಷದೊಂದಿಗೆ ಅದೃಶ್ಯವಾಗುತ್ತದೆ. ಆಕಾಶಮಂಡಲದಲ್ಲಿರುವ ಎಲ್ಲಾ ಸೃಷ್ಟಿಗಳು ಬೆಂಕಿಯಿಂದ ನಾಶವಾಗುತ್ತವೆ. ಈ ಲೋಕವೂ ಅದರಲ್ಲಿರುವ ಸಮಸ್ತವೂ ಸುಟ್ಟುಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೂ ಕರ್ತ ಯೇಸುವಿನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಖರೆ ಧನಿಯಾಚೊ ದಿಸ್ ಚೊರಾ ಸಾರ್ಕೊ ಯೆತಾ, ತ್ಯಾ ದಿಸಿ ಮಳ್ಬಾ ಮೊಟ್ಯಾ ಅವಾಜ್ಯಾ ವಾಂಗ್ಡಾ ನಾ ಪತ್ತೊ ಹೊವ್ನ್ ಜಾತಾ, ಅನಿ ಮುಳ್ ಆಗಿನ್ ಕಡುನ್ ಜಾತಾತ್ ಅನಿ ಜಿಮ್ನಿ ವರ್ತಿ ಹೊತ್ತಿ ಸಗ್ಳಿ ಸಾಮಾನಾ ಜಳುನ್ ಜಾತಾ. ಅಧ್ಯಾಯವನ್ನು ನೋಡಿ |