2 ಪೇತ್ರನು 3:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂಚಿತವಾಗಿ ತಿಳಿದುಕೊಂಡಿರುವುದರಿಂದ ದುಷ್ಟರ ವಂಚನೆಯಲ್ಲಿ ಸಿಕ್ಕಿ ನಿಮ್ಮ ಸ್ಥಿರವಾದ ನಂಬಿಕೆಯನ್ನು ಬಿಟ್ಟು ಭ್ರಷ್ಟರಾಗದಂತೆಯೂ ಎಚ್ಚರಿಕೆಯಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆದಕಾರಣ ಪ್ರಿಯರೇ, ಈ ವಿಷಯಗಳನ್ನು ಮುಂಚಿತವಾಗಿಯೇ ತಿಳಿದುಕೊಂಡಿರುವ ನೀವು ಎಚ್ಚರಿಕೆಯಿಂದಿರಿ. ದುರ್ಜನರ ದುರ್ಬೋಧನೆಗೆ ಮರುಳಾಗದಿರಿ. ನಿಮ್ಮ ಸ್ಥಿರವಿಶ್ವಾಸವನ್ನು ಬಿಟ್ಟು ಭ್ರಷ್ಟರಾಗದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವದರಿಂದ ಅಧರ್ಮಿಗಳ ಭ್ರಾಂತಿಯ ಸೆಳವಿಗೆ ಸಿಕ್ಕಿಕೊಂಡು ನಿಮ್ಮ ಸ್ಥಿರಮನಸ್ಸನ್ನು ಬಿಟ್ಟು ಭ್ರಷ್ಟರಾಗದಂತೆ ಎಚ್ಚರಿಕೆಯಾಗಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಪ್ರಿಯ ಸ್ನೇಹಿತರೇ, ನೀವು ಈಗಾಗಲೇ ಇದರ ಬಗ್ಗೆ ತಿಳಿದಿರುವಿರಿ. ಆದ್ದರಿಂದ ನೀವು ಎಚ್ಚರದಿಂದಿರಿ. ಆ ಕೆಟ್ಟಜನರು ತಾವು ಮಾಡುವ ಕೆಟ್ಟಕಾರ್ಯಗಳಿಂದ ನಿಮ್ಮನ್ನು ದಾರಿತಪ್ಪಿಸದಂತೆ ನೋಡಿಕೊಳ್ಳಿರಿ. ನಿಮ್ಮ ಬಲವಾದ ನಂಬಿಕೆಯನ್ನು ತೊರೆದುಬಿಡದಂತೆ ಎಚ್ಚರಿಕೆಯಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವುದರಿಂದ ನಿಯಮರಹಿತರ ಸೆಳೆಯುವಿಕೆಗೆ ಮರುಳಾಗಿ ನಿಮ್ಮ ಸ್ಥಿರತೆಯಿಂದ ಬಿದ್ದುಹೋಗದಂತೆ ಎಚ್ಚರಿಕೆಯಿಂದಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಹೆಚ್ಯಾಸಾಟ್ನಿ ಮಾಜ್ಯಾ ಪ್ರಿತಿಚ್ಯಾನು ಹೆ ಸಗ್ಳ್ಯೆ ತುಮ್ಕಾ ಅದ್ದಿ ಗೊತ್ತ್ ಹಾಯ್, ತಸೆ ಮನುನ್ ತುಚ್ಯಾ ಘಟ್ ವಿಶ್ವಾಸಾತ್ನಾ ತುಮಿ ಪಡಿನಸ್ತಾನಾ ರ್‍ಹಾವ್ಕ್ ಸಾಟ್ನಿ ಖಾಯ್ದ್ಯಾಚ್ಯಾ ವಿರೊದ್ ಚಲ್ತಲ್ಯಾ ತ್ಯಾ ಲೊಕಾನಿ ವ್ಹಾಕ್ಡ್ಯಾ ವಾಟೆಕ್ ತುಮ್ಕಾ ನ್ಹಯ್ ನಸಿ ಸಾರ್ಕೆ ಹುರ್ಶಾಕಿನ್ ರಾವಾ. ಅಧ್ಯಾಯವನ್ನು ನೋಡಿ |