Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 3:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪ್ರಿಯರೇ, ಮತ್ತೊಂದು ವಿಷಯವನ್ನು ಮರೆಯದಿರಿ: ಪ್ರಭುವಿನ ದೃಷ್ಟಿಯಲ್ಲಿ ಒಂದು ದಿನ ಸಾವಿರ ವರ್ಷಗಳಂತೆಯೂ ಮತ್ತು ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ಮರೆಯಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಪ್ರಿಯ ಸ್ನೇಹಿತರೇ, ಇದೊಂದನ್ನು ಮಾತ್ರ ಮರೆಯದಿರಿ. ಪ್ರಭುವಿಗೆ ಒಂದು ದಿನವು ಸಾವಿರ ವರ್ಷಗಳಂತಿದೆ ಮತ್ತು ಸಾವಿರ ವರ್ಷಗಳು ಒಂದು ದಿನದಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಪ್ರಿಯರೇ, ಕರ್ತದೇವರ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಪ್ರಿತಿಚ್ಯಾನು ಹಿ ಗೊಸ್ಟ್ ತುಮಿ ಇಸ್ರುನಕಾಸಿ, ಧನಿಯಾಕ್ ಎಕ್ ದಿಸ್ ಮಟ್ಲ್ಯಾರ್ ಹಜಾರ್ ವರ್ಸಾ ಸಾರ್ಕೆ ಹಜಾರ್ ವರಿಸ್ ಮಟ್ಲ್ಯಾರ್ ಎಕ್ ದಿಸ್ ಸಾರ್ಕೆ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 3:8
5 ತಿಳಿವುಗಳ ಹೋಲಿಕೆ  

ಸಾವಿರ ವರ್ಷಗಳು ನಿನ್ನ ದೃಷ್ಟಿಯಲ್ಲಿ ಗತಿಸಿಹೋದ ನಿನ್ನೆಯ ದಿನದಂತೆಯೂ, ರಾತ್ರಿಯ ಜಾವದಂತೆಯೂ ಇವೆ.


ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು.


ಸಹೋದರರೇ ಪವಿತ್ರಾತ್ಮನಿಂದುಂಟಾಗುವ ವರಗಳನ್ನು ಕುರಿತು ನಿಮಗೆ ತಿಳಿವಳಿಕೆಯಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.


ಸಹೋದರರೇ, ನಾನು ನಿಮಗೆ ತಿಳಿಸಲು ಅಪೇಕ್ಷಿಸುವ ಸಂಗತಿ ಏನೆಂದರೆ, ನಮ್ಮ ಪೂರ್ವಿಕರೆಲ್ಲರೂ ಮೇಘದ ಅಡಿಯಲ್ಲಿದ್ದು ಸಮುದ್ರವನ್ನು ದಾಟಿಹೋದರು.


ಪ್ರಿಯರೇ, ನಿಮಗೀಗ ಬರೆಯುವುದು ಎರಡನೆಯ ಪತ್ರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು