Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 3:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕೆಲವರು ಭಾವಿಸುವಂತೆ ಪ್ರಭು ತಮ್ಮ ವಾಗ್ದಾನಗಳನ್ನು ನೆರವೇರಿಸುವುದರಲ್ಲಿ ವಿಳಂಬ ಮಾಡುವವರಲ್ಲ; ಆದರೆ ಅವರು ನಿಮ್ಮ ವಿಷಯದಲ್ಲಿ ದೀರ್ಘಶಾಂತಿ, ಸಹನೆಯುಳ್ಳವರು. ಯಾರೊಬ್ಬನೂ ನಾಶವಾಗಬೇಕೆಂಬುದು ಅವರ ಇಚ್ಛೆಯಲ್ಲ; ಎಲ್ಲರೂ ಪಶ್ಚಾತ್ತಾಪಪಟ್ಟು ತಮಗೆ ಅಭಿಮುಖರಾಗಬೇಕೆಂಬುದೇ ಅವರ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕರ್ತನು ತನ್ನ ವಾಗ್ದಾನವನ್ನು ನೆರವೇರಿಸುವದಕ್ಕೆ ತಡಮಾಡುತ್ತಾನೆಂಬದಾಗಿ ಕೆಲವರು ಅರ್ಥಮಾಡಿಕೊಳ್ಳುವ ಪ್ರಕಾರ ಆತನು ತಡಮಾಡುವವನಲ್ಲ. ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕೆಲವು ಜನರು ತಿಳಿದುಕೊಂಡಿರುವಂತೆ, ಪ್ರಭುವು ತಾನು ವಾಗ್ದಾನ ಮಾಡಿದ್ದನ್ನು ತಡವಾಗಿ ನೆರವೇರಿಸುವುದಿಲ್ಲ. ದೇವರು ನಿಮ್ಮ ವಿಷಯದಲ್ಲಿ ಇನ್ನೂ ತಾಳ್ಮೆಯಿಂದಿದ್ದಾನಷ್ಟೆ. ಯಾವ ವ್ಯಕ್ತಿಯೂ ಕಳೆದುಹೋಗಬಾರದೆಂಬುದು ದೇವರ ಅಪೇಕ್ಷೆಯಾಗಿದೆ. ಪ್ರತಿಯೊಬ್ಬರೂ ತಮ್ಮ ಹೃದಯಗಳನ್ನು ಪರಿವರ್ತಿಸಿಕೊಂಡು, ಪಾಪ ಮಾಡುವುದನ್ನು ನಿಲ್ಲಿಸಬೇಕೆಂಬುದು ದೇವರ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಕರ್ತದೇವರು ತಮ್ಮ ವಾಗ್ದಾನದ ವಿಷಯವಾಗಿ ತಡಮಾಡುತ್ತಾರೆಂಬದಾಗಿ ಕೆಲವರು ಎಣಿಸುವ ಪ್ರಕಾರ ಅವರು ತಡಮಾಡುವವರಲ್ಲ. ಆದರೆ ಯಾವನಾದರೂ ನಾಶವಾಗುವುದರಲ್ಲಿ ಅವರು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಡಬೇಕೆಂದು ಅಪೇಕ್ಷಿಸುವವರಾಗಿದ್ದು ನಮ್ಮ ಕಡೆಗೆ ದೀರ್ಘಶಾಂತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಉಲ್ಲ್ಯಾ ಲೊಕಾನಿ ಒಳ್ಕುನ್ ಘೆಟಲ್ಲ್ಯಾ ಸಾರ್ಕೆ ಅಪ್ನಿ ಗೊಸ್ಟ್ ದಿಲ್ಲ್ಯಾ ಸಾರ್ಕೆ ಹಾಳ್ ಕರುಕ್ ತಡೊ ಕರಿನಾ, ಹೊಲ್ಯಾರ್ಬಿ ದೆವಾನ್ ತುಮ್ಚ್ಯಾ ವಿಶಯಾತ್ ಅಜುನ್ಬಿ ತಾಳುನ್ ಘೆಟಲ್ಲೆ ಎವ್ಡೆಚ್, ದೆವಾಚೊ ಮನ್ ಖಲೊ ಮಾನುಸ್ಬಿ ಹಾಳ್ ಹೊವ್ನ್ ಜಾವ್ಚೆ ನ್ಹಯ್ ಮನುನ್ ಹಾಯ್. ಹರ್ ಎಕ್ಲೊ ತೆಂಚಿ ಮನಾ ಪರ್ತುನ್ ಘೆವ್ನ್ ಪಾಪ್ ಕರ್ತಲೆ ಇಬೆ ಕರುಚೆ ಮನುನ್ ದೆವಾಚೊ ಮನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 3:9
24 ತಿಳಿವುಗಳ ಹೋಲಿಕೆ  

ಎಲ್ಲಾ ಜನರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬುದೇ ಆತನ ಚಿತ್ತವಾಗಿದೆ.


ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?


ಸೂಕ್ತ ಹಾಗು ನಿಯಮಿತ ಕಾಲದಲ್ಲಿ ಆ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂತಿಮ ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು. ತಡವಾದರೂ ಅದಕ್ಕೆ ಕಾದಿರು; ಅದು ಖಂಡಿತವಾಗಿ ಕೈಗೂಡುವುದು.


ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು.


ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಜಾರತ್ವವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು, ಆದರೆ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಳಿಗೆ ಮನಸ್ಸು ಬರಲಿಲ್ಲ.


ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಇದೆ ಎಂದು ಪರಿಗಣಿಸಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ.


ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಶಾಂತಿಯನ್ನು ತೋರ್ಪಡಿಸಿದನು.


“ಬರುವಾತನು ಇನ್ನು ಸ್ವಲ್ಪ ಕಾಲದಲ್ಲಿ ಬರುವನು ತಡಮಾಡುವುದಿಲ್ಲ.


ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; “ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ;


ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ತಾಳ್ಮೆಯಿಂದ ಸಹಿಸಿಕೊಂಡಿದ್ದಾನೆ.


ನನ್ನ ನೀತಿಯನ್ನು ಹತ್ತಿರಕ್ಕೆ ಬರ ಮಾಡುವೆನು. ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು, ಚೀಯೋನಿನಲ್ಲಿ ರಕ್ಷಣಾ ಕಾರ್ಯವನ್ನು ನಡೆಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.”


ದೇವರು ನಿನಗೆ ಹೀಗೆ ಮಾಡುವುದಕ್ಕೆ ಅಪ್ಪಣೆಕೊಡುವುದಾದರೆ, ನೀನು ಈ ಕೆಲಸದ ಹೊರೆಯನ್ನು ನಿರ್ವಹಿಸಲು ಸಾಧ್ಯವಾಗುವುದು. ಇದು ಮಾತ್ರವಲ್ಲದೆ ಈ ಜನರೆಲ್ಲರೂ ಸಂತುಷ್ಟರಾಗಿ ತಮ್ಮ ತಮ್ಮ ಮನೆಗಳಿಗೆ ಹೋಗುವರು” ಎಂದು ಹೇಳಿದನು.


ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಅವರು ಆತನಿಗೆ ಅವಿಧೇಯರಾಗಿದ್ದರು. ಆ ನಾವೆಯೊಳಗೆ ಸೇರಿದ ಎಂಟು ಜನರು ಮಾತ್ರ ನೀರಿನೊಳಗಿನಿಂದ ರಕ್ಷಿಸಲ್ಪಟ್ಟರು.


ಆದರೂ ನೀನು ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀನು ಬರೆದಿರುವ ಜೀವಿತರ ಪುಸ್ತಕದಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.


ಮನುಷ್ಯರೊಳಗೆ ಒಬ್ಬನೂ ತನ್ನ ಸ್ನೇಹಿತನೊಡನೆ ಹೇಗೆ ಮಾತನಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು. ಆನಂತರ ಮೋಶೆಯು ಪಾಳೆಯಕ್ಕೆ ಹಿಂತಿರುಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಯೌವನಸ್ಥನಾದ ಅವನ ಶಿಷ್ಯನು ಆ ಗುಡಾರದಲ್ಲಿಯೇ ಇರುತ್ತಿದ್ದನು, ಅದರ ಬಳಿಯಿಂದ ದೂರ ಸರಿಯುತ್ತಿರಲಿಲ್ಲ.


ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ? ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ?


ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೇ ನಡೆಯದಿರುವ ಕಾರಣ ಅಪರಾಧ ಮಾಡಬೇಕೆಂಬ ಯೋಚನೆಯು ಮನುಷ್ಯರ ಹೃದಯದಲ್ಲಿ ತುಂಬಿ ತುಳುಕುವುದು.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.


ಹನ್ನೆರಡು ತಿಂಗಳು ಕಳೆದನಂತರ ಅವನು ಬಾಬೆಲಿನ ಅರಮನೆಯ ಮಹಡಿಯ ಮೇಲೆ ತಿರುಗಾಡುತ್ತಾ,


ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ.


ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸಮೀಪವಾಯಿತು. ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ರಕ್ಷಣೆಯ ಆಯುಧಗಳನ್ನು ಧರಿಸಿಕೊಳ್ಳೋಣ.


ನೀವು ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನದಿಂದ ದೂರವಾಗಿ ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಅತ್ಯಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು