Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಯೋಹಾನನು 1:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಈ ಉಪದೇಶವನ್ನು ಒಪ್ಪದಿರುವ ಯಾವನಾದರೂ ನಿಮಗೆ ಉಪದೇಶಮಾಡಬಂದರೆ, ಮನೆಯೊಳಗೆ ಸೇರಿಸಬೇಡಿ; ಅವನನ್ನು ಹರಸಲೂಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಈ ಉಪದೇಶಕ್ಕೆ ಒಪ್ಪದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ, ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿಮ್ಮ ಬಳಿಗೆ ಬರುವವನು ಈ ಉಪದೇಶವನ್ನು ಹೊಂದಿಲ್ಲದಿದ್ದರೆ ಅವನನ್ನು ನಿಮ್ಮ ಮನೆಯೊಳಗೆ ಸೇರಿಸಿಕೊಳ್ಳಬೇಡಿ. ಅವನನ್ನು ಸ್ವಾಗತಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಈ ಬೋಧನೆಯನ್ನು ಒಪ್ಪದಿರುವ ಯಾರಾದರೂ ನಿಮ್ಮ ಬಳಿಗೆ ಬಂದರೆ, ಅವರನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವರಿಗೆ, “ವಂದನೆ” ಎಂದೂ ಹೇಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆ ಕೊನ್ ಹಿ ಶಿಕಾಪಾ ಆಯ್ಕಿನಸ್ತಾನಾ ರ್‍ಹಾತಾ, ತೊ ತುಮ್ಚ್ಯಾ ಜಗೊಳ್ ಯೆಲ್ಯಾರ್ ತೆಕಾ ಘರಾತ್ ಘೆವ್‍ನಕಾಶಿ. ಅನಿ ತೆಕಾ ನಮಸ್ಕಾರ್ ಕರುನಕಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಯೋಹಾನನು 1:10
14 ತಿಳಿವುಗಳ ಹೋಲಿಕೆ  

ಸಭೆಯಲ್ಲಿ ಭಿನ್ನಭೇದಗಳನ್ನುಂಟುಮಾಡುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟು ಬಿಡು;


ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ ಸಹೋದರನಿಂದ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.


ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.


ಆದರೆ ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನು, ಲೋಭಿಯು, ವಿಗ್ರಹಾರಾಧಕನು, ಜಗಳಗಂಟನೂ, ಕುಡುಕನು, ಸುಲುಕೊಳ್ಳುವವನೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು. ಅಂಥವನ ಸಂಗಡ ಊಟ ಸಹ ಮಾಡಬಾರದು ಎಂದು ಬರೆದಿದ್ದೇನೆ.


ಏಕೆಂದರೆ, ಅವನಿಗೆ ಶುಭವಾಗಲಿ ಎಂದು ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.


ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ ಅವನು ಶಾಪಗ್ರಸ್ತನಾಗಲಿ. ನಮ್ಮ ಕರ್ತನೇ ಬಾ!


ಹಾದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ ಎಂದು, ಯೆಹೋವನ ನಾಮದಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ” ಎಂದೂ ಹೇಳುವುದಿಲ್ಲ.


“ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಸಫಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ದಯೆಯನ್ನು ತೋರಿಸಬೇಕೆಂದು ಬೇಡಿಕೊಳ್ಳುತ್ತೇನೆ.


ಅದಕ್ಕೆ ಅವನು, “ನಾನು ನಿನ್ನ ಸಂಗಡ ಬರವುದಿಲ್ಲ ಮತ್ತು ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳುವುದಿಲ್ಲ.


ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; “ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ;


ಆದಕಾರಣ, ನಾನು ಅಲ್ಲಿಗೆ ಬಂದಾಗ ಅವನು ಮಾಡುವ ಕೃತ್ಯಗಳನ್ನು ಕುರಿತು ಎಲ್ಲರಿಗೂ ತಿಳಿಸುವೆನು. ಅವನು ಹರಟೆಕೊಚ್ಚುವವನಾಗಿ, ನಮ್ಮ ವಿಷಯದಲ್ಲಿ ಅಪ ಪ್ರಚಾರ ಮಾಡುತ್ತಿದ್ದಾನೆ. ಇದರ ಜೊತೆಗೆ ಯಾವ ಸಹೋದರರನ್ನು ಸೇರಿಸಿಕೊಳ್ಳುವುದಿಲ್ಲ ಹಾಗೂ ನಾನು ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿಮಾಡಿ ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು