2 ಯೋಹಾನನು 1:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅನೇಕ ಮಂದಿ ವಂಚಕರು ಲೋಕದಲ್ಲಿ ತಲೆದೋರಿದ್ದಾರೆ. ಯೇಸುಕ್ರಿಸ್ತರು ಮನುಷ್ಯ ಆಗಿಬಂದರೆಂಬುದನ್ನು ಇವರು ಒಪ್ಪಿಕೊಳ್ಳುವುದಿಲ್ಲ. ಇಂಥವನು ವಂಚಕನೂ ಕ್ರಿಸ್ತವಿರೋಧಿಯೂ ಹೌದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಮನುಷ್ಯನಾಗಿ ಬಂದಿರುವ ಯೇಸು ಕ್ರಿಸ್ತನನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಯೇಸುವನ್ನು ಒಪ್ಪದವನು ಮೋಸಗಾರನೂ ಕ್ರಿಸ್ತವಿರೋಧಿಯೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಈಗ ಲೋಕದಲ್ಲಿ ಅನೇಕ ಸುಳ್ಳುಬೋಧಕರಿದ್ದಾರೆ. ಯೇಸು ಕ್ರಿಸ್ತನು ಈ ಲೋಕಕ್ಕೆ ಮನುಷ್ಯನಾಗಿ ಬಂದನೆಂಬುದನ್ನು ಈ ಸುಳ್ಳುಬೋಧಕರು ಒಪ್ಪಿಕೊಳ್ಳುವುದಿಲ್ಲ. ಈ ಸತ್ಯವನ್ನು ಒಪ್ಪಿಕೊಳ್ಳದವನು ಸುಳ್ಳುಬೋಧಕನಾಗಿದ್ದಾನೆ ಮತ್ತು ಯೇಸು ಕ್ರಿಸ್ತನ ವೈರಿಯಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಏಕೆಂದರೆ ನರಮಾಂಸದಲ್ಲಿ ಬಂದಿರುವ ಕ್ರಿಸ್ತ ಯೇಸುವನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವರೇ ಮೋಸಗಾರರೂ ಕ್ರಿಸ್ತವಿರೋಧಿಗಳೂ ಆಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಕಶ್ಯಾಕ್ ಮಟ್ಲ್ಯಾರ್, ಜೆಜು ಕ್ರಿಸ್ತ್ ಮಾನುಸ್ ಹೊವ್ನ್ ಯೆಲೊ ಮನ್ತಲೆ ಮಾನಿನಸ್ತಾನಾ, ಲೊಕಾಕ್ನಿ ಪಸ್ವುತಲಿ ಅನಿ ಕ್ರಿಸ್ತಾಕ್ ವಿರೊಧ್ ಹೊವ್ನ್ ಹೊತ್ತಿ ಲೊಕಾ ಹ್ಯಾ ಜಗಾತ್ ಪಗಳ್ಳ್ಯಾತ್. ಹೆನಿಚ್ ಪಸ್ವುತಲೆ ಅನಿ ಕ್ರಿಸ್ತಾಕ್ ವಿರೊಧಿ. ಅಧ್ಯಾಯವನ್ನು ನೋಡಿ |
ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.