Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಳಾಡಿ, ಅತ್ತು ಸಾಯಂಕಾಲದವರೆಗೆ ಉಪವಾಸ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ದಾವೀದನೂ ಅವನ ಜನರೂ ದುಃಖದಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಗೋಳಾಡಿದರು. ಸಾಯಂಕಾಲದವರೆಗೆ ಉಪವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದಾವೀದನೂ ಅವನ ಜನರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಗೋಳಾಡಿ ಅತ್ತು ಸಾಯಂಕಾಲದವರೆಗೆ ಉಪವಾಸ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವರು ಬಹಳ ದುಃಖದಿಂದ ಅತ್ತರು. ಅವರು ಸಂಜೆಯ ತನಕ ಏನನ್ನೂ ತಿನ್ನಲಿಲ್ಲ. ಸೌಲನೂ ಅವನ ಮಗನಾದ ಯೋನಾತಾನನೂ ಯೆಹೋವನ ಜನರೂ ಸತ್ತದ್ದಕ್ಕಾಗಿ ಮತ್ತು ಇಸ್ರೇಲಿಗಾಗಿ ದಾವೀದನು ಮತ್ತು ಅವನ ಜನರು ಅತ್ತರು. ಸೌಲನನ್ನೂ ಅವನ ಮಗನಾದ ಯೋನಾತಾನನನ್ನೂ ಮತ್ತು ಅನೇಕ ಮಂದಿ ಇಸ್ರೇಲರನ್ನೂ ಖಡ್ಗಗಳಿಂದ ಇರಿದು ಕೊಂದದ್ದಕ್ಕಾಗಿ ಅವರು ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಸೌಲನೂ, ಅವನ ಮಗನಾದ ಯೋನಾತಾನನೂ ಇಸ್ರಾಯೇಲಿನ ಮನೆಯವರೂ ಯೆಹೋವ ದೇವರ ಜನರೂ ಖಡ್ಗದಿಂದ ಬಿದ್ದ ಕಾರಣ, ಅವರಿಗೋಸ್ಕರ ಗೋಳಾಡಿ ಅತ್ತು, ಅಸ್ತಮಾನದವರೆಗೂ ಉಪವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:12
10 ತಿಳಿವುಗಳ ಹೋಲಿಕೆ  

ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.


ನಿನ್ನ ಶತ್ರು ಬಿದ್ದರೆ ಹಿಗ್ಗಬೇಡ, ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ.


ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, ಕರುಣೆಯೂ, ದೀನಭಾವವೂ ಉಳ್ಳವರಾಗಿರಿ.


ಯಾವನಾದರೂ ಬಲಹೀನನಾಗಿದ್ದರೆ ನಾನೂ ಅವನೊಂದಿಗೆ ಬಲಹೀನನಾಗದೆ ಇದ್ದೆನೋ? ಯಾವನಾದರೂ ತಪ್ಪಿಹೋಗಿದ್ದಲ್ಲಿ ನಾನು ಸಂತಾಪಪಡದೆ ಇದ್ದೆನೋ?


ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ ಮತ್ತು ಉತ್ತಮ ಅಭಿಷೇಕ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡುವುದಿಲ್ಲ.


ಸೂರ್ಯಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು, “ಸೂರ್ಯನು ಮುಣುಗುವ ಮೊದಲು ನಾನು ರೊಟ್ಟಿಯನ್ನಾಗಲಿ, ಬೇರೆ ಯಾವುದನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟು ಹೇಳಿದನು.


ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲಾ!


ಅವರ ಎಲುಬುಗಳನ್ನು ಯಾಬೇಷಿನಲ್ಲಿದ್ದ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ, ಏಳು ದಿನ ಉಪವಾಸ ಮಾಡಿದರು.


ಹೀಗೆ ಸೌಲನೂ ಅವನ ಮೂರು ಮಂದಿ ಮಕ್ಕಳೂ, ಅವನ ಆಯುಧವಾಹಕನು, ಎಲ್ಲಾ ಆಳುಗಳೂ ಅದೇ ದಿನದಲ್ಲಿ ಸತ್ತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು