2 ಸಮುಯೇಲ 1:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಈ ಸಂಗತಿಯನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಹೆಂಗಸರು ಸಂತೋಷಿಸಾರು. ಸುನ್ನತಿಯಿಲ್ಲದವರ ಸ್ತ್ರೀಯರು ಉಲ್ಲಾಸಪಟ್ಟಾರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಸಾರಬೇಡಿ ಈ ಸುದ್ದಿಯನು ‘ಗತ್’ ಊರಿನಲಿ ಘೋಷಿಸಬೇಡಿ ಅಷ್ಕೆಲೋನಿನ ಬೀದಿಗಳಲಿ. ಏಕೆನೆ, ಉಲ್ಲಾಸಿಸಿಯಾರು ಆ ಫಿಲಿಷ್ಟಿಯ ಮಹಿಳೆಯರು; ಜಯಘೋಷ ಮಾಡಿಯಾರು ಸುನ್ನತಿಯಿಲ್ಲದವರಾ ಸ್ತ್ರೀಯರು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಈ ಸಂಗತಿಯನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ; ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಹೆಂಗಸರು ಸಂತೋಷಿಸಾರು; ಸುನ್ನತಿಯಿಲ್ಲದವರ ಸ್ತ್ರೀಯರು ಉಲ್ಲಾಸಿಸಾರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಗತ್‌ನಲ್ಲಿ ಈ ಸುದ್ದಿಯನ್ನು ಹೇಳದಿರು. ಅಷ್ಕೆಲೋನಿನ ಬೀದಿಗಳಲ್ಲಿ ಇದನ್ನು ಸಾರದಿರು. ಫಿಲಿಷ್ಟಿಯರ ಪಟ್ಟಣಗಳೆಲ್ಲಾ ಸಂತೋಷಪಡುವವು. ಆ ವಿದೇಶಿಯರ ಹೆಣ್ಣುಮಕ್ಕಳು ಉಲ್ಲಾಸಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ಗತ್ ಊರಿನಲ್ಲಿ ಇದನ್ನು ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಪುತ್ರಿಯರು ಸಂತೋಷಪಡಬಾರದು; ಸುನ್ನತಿ ಇಲ್ಲದವರ ಪುತ್ರಿಯರು ಉತ್ಸಾಹಪಡಬಾರದು. ಅಧ್ಯಾಯವನ್ನು ನೋಡಿ |