Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಗಿಲ್ಬೋವ ಗುಡ್ಡಗಳೇ, ನಿಮ್ಮ ಮೇಲೆ ಮಂಜು, ಮಳೆಯು, ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ. ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಗಳು ಬಿದ್ದಿರುತ್ತವೆ. ಸೌಲನ ಗುರಾಣಿಯೂ ಅಭಿಷಿಕ್ತನಲ್ಲದವನ ಗುರಾಣಿಯಂತೆ ಬಿದ್ದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮಳೆಯಾಗಲಿ, ಮಂಜಾಗಲಿ ಬೀಳದಿರಲಿ ಆ ಗಿಲ್ಬೋವ ಗುಡ್ಡಗಳ ಮೇಲೆ ಅದರ ಮೇಲಿನ ಹೊಲಗಳು ಬೆಳೆಕೊಡದಿರಲಿ ನೈವೇದ್ಯಕೆ. ಏಕೆನೆ ಅಲ್ಲಿ ಬಿದ್ದಿವೆ ಯುದ್ಧವೀರರ ಕತ್ತಿಗುರಾಣಿ ಅಭಿಷಿಕ್ತನಲ್ಲದವನ ಗುರಾಣಿಯಂತೆ ಆ ಸೌಲನ ಗುರಾಣಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಗಿಲ್ಬೋವಗುಡ್ಡಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ; ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಗಳು ಬಿದ್ದಿರುತ್ತವೆ. ಸೌಲನ ಗುರಾಣಿಯೂ ಅಭಿಷಿಕ್ತನಲ್ಲದವನ ಗುರಾಣಿಯಂತೆ ಬಿದ್ದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಗಿಲ್ಬೋವದ ಪರ್ವತಗಳಲ್ಲಿ ಮಂಜೂ ಮಳೆಯೂ ಸುರಿಯದಿರಲಿ. ಆ ಹೊಲಗಳಿಂದ ಕಾಣಿಕೆಯ ವಸ್ತುಗಳೂ ಬಾರದಿರಲಿ. ಅಲ್ಲಿನ ಶಕ್ತಿಸಂಪನ್ನರ ಗುರಾಣಿಗಳೆಲ್ಲ ತುಕ್ಕುಹಿಡಿದಿವೆ. ಸೌಲನ ಗುರಾಣಿಯು ಎಣ್ಣೆಯಿಲ್ಲದೆ ಬಿದ್ದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಬೀಳದೆ ಇರಲಿ, ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ. ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಯೂ ಅವಮಾನಗೊಂಡು ಬಿದ್ದವು. ಸೌಲನ ಗುರಾಣಿಯೂ ಎಣ್ಣೆಯಿಂದ ಅಭಿಷಿಕ್ತನಲ್ಲದವನ ಗುರಾಣಿಯಂತೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:21
14 ತಿಳಿವುಗಳ ಹೋಲಿಕೆ  

ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡಿದರು. ಇಸ್ರಾಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು.


ಔತಣಕ್ಕೆ ಸಿದ್ಧಪಡಿಸಿಕೊಂಡು, ಚಾಪೆಗಳನ್ನು ಹಾಸಿಕೊಂಡು ತಿಂದು, ಕುಡಿಯುತ್ತಾರೆ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಹಚ್ಚಿ ಸಿದ್ಧವಾಗಿ!


ಆ ಆಳು ಮುಂದೆ ಹೋದಾಗ ಸಮುವೇಲನು ತೈಲದ ಕೊಂಬಿನಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವನು ತನ್ನ ಸ್ವತ್ತನ್ನು ಅಳುವುದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.


ಆತನು ಒಂದು ವೇಳೆ ಮನಸ್ಸನ್ನು ಬದಲಾಯಿಸಿ, ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಯೆಹೋವನಿಗೆ ನೀವು ಅರ್ಪಿಸುವ ನೈವೇದ್ಯವನ್ನು ಸ್ವೀಕರಿಸಿ ಸುವರಗಳನ್ನು ದಯಪಾಲಿಸಬಹುದು.


ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ಯೆಹೋವನ ಆಲಯದಿಂದ ತೆಗೆಯಲ್ಪಟ್ಟಿದೆ. ಯೆಹೋವನ ಸೇವಕರಾದ ಯಾಜಕರು ಗೋಳಾಡುತ್ತಾರೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ವೃಕ್ಷವು ಪಾತಾಳಕ್ಕೆ ಇಳಿದು ಹೋದ ದಿನದಲ್ಲಿ ನಾನು ದುಃಖವನ್ನು ಹುಟ್ಟಿಸುವೆನು. ಅದರ ವಿಯೋಗಕ್ಕಾಗಿ ನಾನು ಮಹಾ ನದಿಯನ್ನು ಮರೆಮಾಡಿ, ನದಿಗಳನ್ನು ತಡೆದುಬಿಟ್ಟೆನು, ಜಲಪ್ರವಾಹವು ನಿಂತುಹೋಯಿತು; ಅದಕ್ಕಾಗಿ ಲೆಬನೋನು ಗೋಳಿಡುವಂತೆ ಮಾಡಿದೆನು, ಭೂಮಿಯ ಸಕಲ ವೃಕ್ಷಗಳು ಆ ದುಃಖಕ್ಕೆ ಕುಗ್ಗಿಹೋದವು.


ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.


ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕಾಗಿ ಬಂದಾಗ, ಸೌಲನೂ ಅವನ ಮೂರು ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವುದನ್ನು ಕಂಡರು.


ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡಿದರು. ಇಸ್ರಾಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಸತ್ತುಹೋದರು.


ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ. ‘ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ. ಯುದ್ಧವೀರರ ಹೋರಾಟದ ವಿರುದ್ಧ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲಾ; ಅವರನ್ನು ಶಪಿಸೇ ಶಪಿಸಿರಿ!’


ನಿನ್ನ ಕೊರಳು ದಾವೀದನು ಕಟ್ಟಿಸಿದ ನುಣುಪಾದ ಗೋಪುರದಂತಿದೆ, ನಿನ್ನ ಕತ್ತಿನ ಹಾರ ಸಾವಿರ ಶೂರರ ಗುರಾಣಿಗಳನ್ನು ನೇತುಹಾಕಿರುವ ದಾವೀದನ ಬುರುಜಿನ ಹಾಗಿದೆ.


ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕೆ ಬಂದಾಗ, ಸೌಲನೂ ಅವನ ಮೂರು ಮಂದಿ ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವುದನ್ನು ಕಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು