Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೋನಾತಾನನ ಬಿಲ್ಲು ಹತರಾದವರ ರಕ್ತವನ್ನು ಹೀರದೆಯೂ ಪರಾಕ್ರಮಶಾಲಿಗಳ ಕೊಬ್ಬನ್ನು ರುಚಿಸದೆಯೂ ಬರುತ್ತಿರಲಿಲ್ಲ. ಸೌಲನ ಕತ್ತಿಯು ವ್ಯರ್ಥವಾಗಿ ಹಿಂದಿರುಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಹಿಂದಿರುಗುತ್ತಿರಲಿಲ್ಲ ಸೌಲನಾಕತ್ತಿ ವ್ಯರ್ಥವಾಗಿ, ಬರುತ್ತಿರಲಿಲ್ಲ ಯೋನಾತಾನನಾ ಬಿಲ್ಲು ಬರಿದಾಗಿ, ಹತರಾದವರ ರಕುತವನು ಹೀರದೆ ಪರಾಕ್ರಮಿಗಳ ಕೊಬ್ಬನು ರುಚಿಸದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೋನಾತಾನನ ಬಿಲ್ಲು ಹತರಾದವರ ರಕ್ತವನ್ನು ಹೀರದೆಯೂ ಪರಾಕ್ರಮಶಾಲಿಗಳ ಕೊಬ್ಬನ್ನು ಭುಜಿಸದೆಯೂ ಬರುತ್ತಿರಲಿಲ್ಲ. ಸೌಲನ ಕತ್ತಿಯು ವ್ಯರ್ಥವಾಗಿ ಹಿಂದಿರುಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೋನಾತಾನನ ಬಿಲ್ಲು ತನ್ನ ಪಾಲಿನ ಶತ್ರುಗಳನ್ನು ಸಂಹರಿಸಿತು. ಸೌಲನ ಖಡ್ಗವು ತನ್ನ ಪಾಲಿನ ಶತ್ರುಗಳನ್ನು ಸಂಹರಿಸಿತು. ಈಗ ಸತ್ತುಬಿದ್ದಿರುವ ಸೈನಿಕರ ರಕ್ತವನ್ನು ಅವರ ಆಯುಧಗಳು ಚಿಮ್ಮಿಸಿದವು. ಅವರ ಆಯುಧಗಳು ಬಲಿಷ್ಠರ ಕೊಬ್ಬನ್ನು ಕತ್ತರಿಸಿಹಾಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಹತರಾದವರ ರಕ್ತದಿಂದಲೂ, ಯೋನಾತಾನನ ಬಿಲ್ಲು ಹಿಂದಕ್ಕೆ ತಿರುಗಲಿಲ್ಲ. ಸೌಲನ ಖಡ್ಗ ತೃಪ್ತಿಗೊಳ್ಳದೆ ತಿರುಗಿ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:22
7 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ತನ್ನ ಮೈಮೇಲಿದ್ದ ನಿಲುವಂಗಿಯನ್ನು ತನ್ನ ಯುದ್ಧವಸ್ತ್ರಗಳನ್ನು, ಕತ್ತಿ, ಬಿಲ್ಲು, ನಡುಕಟ್ಟುಗಳನ್ನೂ ದಾವೀದನಿಗೆ ಕೊಟ್ಟನು.


ನನ್ನ ಬಾಣಗಳು ರಕ್ತವನ್ನು ಕುಡಿದು ಮತ್ತವಾಗುವವು; ನನ್ನ ಕತ್ತಿಯು ಕೊಲ್ಲಲ್ಪಟ್ಟವರ ಮತ್ತು ಸೆರೆಹಿಡಿದವರ ರಕ್ತಮಾಂಸಗಳನ್ನು ಭಕ್ಷಿಸಿ ಶತ್ರುಗಳಲ್ಲಿರುವ ವೀರರ ತಲೆಗಳನ್ನು ಚೆಂಡಾಡುವುದು’ ಎಂಬುದೇ.


ಸೌಲನು ಇಸ್ರಾಯೇಲ್ಯರಿಗೆ ಅರಸನಾದ ಮೇಲೆ ಅವನು ಸುತ್ತಣ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಅವನು ಹೋದ ಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು.


ಇದಲ್ಲದೆ ಅವನು ಅಮಾಲೇಕ್ಯರಿಗೆ ವಿರೋಧವಾಗಿ ದಂಡೆತ್ತಿ ಹೋಗಿ ಪರಾಕ್ರಮದಿಂದ ಅವರನ್ನು ಸದೆಬಡಿದನು. ಇಸ್ರಾಯೇಲ್ಯರನ್ನು ಸುಲಿಗೆಮಾಡುವವರ ಕೈಗೆ ಸಿಕ್ಕದಂತೆ ತಪ್ಪಿಸಿದನು.


ಇಗೋ, ನಾನು ಮಹಾ ಜನಾಂಗಗಳ ಸಮೂಹವನ್ನು ಎಬ್ಬಿಸಿ ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬೀಳಮಾಡುವೆನು; ಅವು ಬಾಬಿಲೋನಿಗೆ ವಿರುದ್ಧವಾಗಿ ವ್ಯೂಹಕಟ್ಟಿ ಅದನ್ನು ಅದರ ಸ್ಥಳದೊಳಗಿಂದ ನಿರ್ಮೂಲಮಾಡುವವು; ಅವುಗಳ ಬಾಣಗಳು ಸುಮ್ಮನೆ ಹಿಂದಿರುಗದ ಯುದ್ಧಪ್ರವೀಣರಾದ ಶೂರನಂತಿರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು