Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಸೌಲಯೋನಾತಾನರು ಪ್ರಿಯರೂ ಮನೋಹರರೂ ಆಗಿದ್ದರು. ಅವರು ಜೀವಿಸುವಾಗಲೂ ಸಾಯುವಾಗಲೂ ಅಗಲಿದವರಲ್ಲ. ಅವರು ಹದ್ದುಗಳಿಗಿಂತಲೂ ವೇಗವುಳ್ಳವರು, ಸಿಂಹಗಳಿಗಿಂತಲೂ ಬಲವುಳ್ಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸೌಮ್ಯರು, ಅತಿಪ್ರಿಯರು, ಆ ಸೌಲ-ಯೋನಾತಾನರು ಬಾಳಿನಲು, ಸಾವಿನಲು ಬಿಟ್ಟಗಲದವರು. ಹದ್ದಿಗಿಂತ ಅಧಿಕ ವೇಗ ಅವರದು ಸಿಂಹಕ್ಕಿಂತ ಹೆಚ್ಚಿನ ಶಕ್ತಿ ಅವರದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಸೌಲಯೋನಾತಾನರು ಪ್ರಿಯರೂ ಮನೋಹರರೂ ಆಗಿದ್ದರು; ಅವರು ಜೀವಿಸುವಾಗಲೂ ಸಾಯುವಾಗಲೂ ಅಗಲಿದವರಲ್ಲ. ಅವರು ಹದ್ದುಗಳಿಗಿಂತಲೂ ವೇಗವುಳ್ಳವರು; ಸಿಂಹಗಳಿಗಿಂತಲೂ ಬಲವುಳ್ಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಸೌಲನು ಮತ್ತು ಯೋನಾತಾನನು ಒಬ್ಬರನ್ನೊಬ್ಬರು ಪ್ರೀತಿಸಿದರು; ತಮ್ಮ ಪರಸ್ಪರ ಜೀವಿತದಲ್ಲಿ ಆನಂದಿಸಿದರು. ಸೌಲನು ಮತ್ತು ಯೋನಾತಾನನು ಮರಣದಲ್ಲೂ ಒಂದಾದರು. ಅವರು ಹದ್ದುಗಳಿಗಿಂತ ವೇಗವಾಗಿ ಹೋದರು; ಸಿಂಹಗಳಿಗಿಂತ ಶಕ್ತಿಶಾಲಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಸೌಲನೂ ಯೋನಾತಾನನೂ ಜೀವದಿಂದಿದ್ದಾಗ ಪ್ರಿಯಕರವಾಗಿಯೂ, ಸಂತೋಷಕರವಾಗಿಯೂ ಇದ್ದರು. ತಮ್ಮ ಮರಣದಲ್ಲಿಯೂ ಅಗಲಿ ಹೋಗದೆ ಇದ್ದರು. ಅವರು ಹದ್ದುಗಳಿಗಿಂತ ವೇಗವುಳ್ಳವರೂ, ಸಿಂಹಗಳಿಗಿಂತ ಬಲವುಳ್ಳವರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:23
14 ತಿಳಿವುಗಳ ಹೋಲಿಕೆ  

ಇಗೋ, ಆ ಶತ್ರುವು ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವರ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ.


ಅವರು ಏಳನೆಯ ದಿನ ಸೂರ್ಯ ಮುಳುಗುವುದಕ್ಕಿಂತ ಮೊದಲು ಅವನಿಗೆ, “ಜೇನಿಗಿಂತ ಸಿಹಿಯಾದದ್ದು ಯಾವುದು? ಸಿಂಹಕ್ಕಿಂತ ಬಲಿಷ್ಠವಾದದ್ದು ಯಾವುದು?” ಎಂದು ಹೇಳಲು ಅವನು, “ನೀವು ನನ್ನ ಕಡಸಿನಿಂದ ಉಳದೇ ಹೋಗಿದ್ದರೆ ಒಗಟನ್ನು ಬಿಚ್ಚುವುದು ನಿಮ್ಮಿಂದಾಗುತ್ತಿರಲಿಲ್ಲ” ಅಂದನು.


ನಮ್ಮನ್ನು ಹಿಂದಟ್ಟಿದವರು ಆಕಾಶದ ಹದ್ದುಗಳಿಗಿಂತ ವೇಗಿಗಳಾಗಿದ್ದರು. ಬೆಟ್ಟಗಳ ಮೇಲೆ ನಮ್ಮನ್ನು ಬೆನ್ನು ಹತ್ತಿ ಅರಣ್ಯದಲ್ಲಿ ಹೊಂಚುಹಾಕಿದರು.


ಯಾವುದಕ್ಕೂ ಹೆದರಿ ಓರೆಯಾಗದ, ಮೃಗರಾಜನಾದ ಸಿಂಹ,


ಬೆಂಡಿನ ದೋಣಿಗಳು ದಾಟಿ ಹೋಗುವಂತೆಯೂ, ಹದ್ದು ತನ್ನ ಬೇಟೆಯ ಮೇಲೆ ಎರಗುವಂತೆಯೂ ವೇಗವಾಗಿ ಗತಿಸಿ ಹೋಗುತ್ತವೆ.


ದಾವೀದನು ಸೌಲನೊಡನೆ ಮಾತನಾಡಿ ಮುಗಿಸಿದ ಮೇಲೆ ಯೋನಾತಾನನ ಪ್ರಾಣವು ದಾವೀದನ ಪ್ರಾಣದೊಡನೆ ಒಂದಾಯಿತು. ಅವನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು.


ರಣಹದ್ದು ಹೇಗೆ ದೂರದಿಂದ ಹಾರಿಬರುವುದೋ ಹಾಗೆಯೇ ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.


ಯುದ್ಧವೀರರೂ ಯುದ್ಧನಿಪುಣರೂ, ಗುರಾಣಿಬರ್ಜಿಗಳಲ್ಲಿ ಪ್ರವೀಣರೂ, ಸಿಂಹಮುಖರೂ, ಬೆಟ್ಟದ ಜಿಂಕೆಯಂತೆ ಓಡುವ ಚುರುಕು ಕಾಲಿನವರು ಆಗಿದ್ದು, ದಾವೀದನು ಅರಣ್ಯ ದುರ್ಗದಲ್ಲಿದ್ದಾಗ ಅವನನ್ನು ಸೇರಿಕೊಂಡ ಗಾದ್ಯರು:


ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ಮಾಡಿದನು. ಅದಕ್ಕೆ ದೃಷ್ಟಾಂತವೆಂದರೆ ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.


ಯೋನಾತಾನನು ಅವನಿಗೆ, “ಇದು ಆಗಲೇಬಾರದು, ನಿನಗೆ ಮರಣವಾಗಕೂಡದು. ನನ್ನ ತಂದೆಯು ಅಲ್ಪಕಾರ್ಯವನ್ನಾಗಲಿ, ಮಹಾಕಾರ್ಯವನ್ನಾಗಲಿ ನನಗೆ ತಿಳಿಸದೇ ಮಾಡುವುದಿಲ್ಲ. ಈ ಕಾರ್ಯವನ್ನು ನನಗೆ ಹೇಗೆ ಮರೆಮಾಡಲು ಸಾಧ್ಯ?” ಎಂದು ಹೇಳಿದನು.


ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ, ಅಬೀಷೈ, ಅಸಾಹೇಲ ಎಂಬುವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.


ಇಸ್ರಾಯೇಲ್ ಸ್ತ್ರೀಯರೇ, ಸೌಲನಿಗಾಗಿ ಗೋಳಾಡಿರಿ, ನಿಮಗೆ ಉಲ್ಲಾಸಕರವಾದ ರಕ್ತಾಂಬರಗಳನ್ನು ಉಡಿಸಿ, ಅವುಗಳ ಮೇಲೆ ಸುವರ್ಣಾಭರಣಗಳನ್ನು ತೊಡಿಸಿದವನು ಆತನೇ ಅಲ್ಲವೋ?


ಅವನ ನುಡಿ ಮಧುರ, ಅವನು ಸರ್ವಾಂಗ ಸುಂದರ. ಯೆರೂಸಲೇಮಿನ ಸ್ತ್ರೀಯರುಗಳಿರಾ, ಇವನೇ ಎನ್ನಿನಿಯನು; ಇವನೇ ನನ್ನ ಪ್ರಿಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು