Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೋನಾತಾನನೇ, ನನ್ನ ಸಹೋದರನೇ ನಿನಗೋಸ್ಕರ ನನ್ನಲ್ಲಿ ಬಹು ಸಂಕಟವುಂಟಾಗಿದೆ. ನೀನು ನನಗೆ ಮನೋಹರನಾಗಿದ್ದಿ. ನನ್ನ ಮೇಲಿನ ನಿನ್ನ ಪ್ರೀತಿಯು ಆಶ್ಚರ್ಯಕರವಾದದ್ದು. ಅದು ಸತಿ ಪ್ರೇಮಕ್ಕಿಂತ ಶ್ರೇಷ್ಠವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಯೋನಾತಾನನೇ, ಸಹೋದರನೇ, ಮನೋಹರನೇ, ನಿನ್ನ ಮರಣ ತಂದಿದೆ ಅತೀವ ಸಂಕಟ ನನಗೆ, ನನ್ನ ಮೇಲೆ ನಿನಗಿದ್ದ ಪ್ರೀತಿ ಅದೆಷ್ಟು ಆಶ್ಚರ್ಯಕರ! ಸತಿಪ್ರೇಮಕ್ಕಿಂತಲೂ ಅದು ಅಮೋಘಕರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೋನಾತಾನನೇ, ನನ್ನ ಸಹೋದರನೇ, ನಿನಗೋಸ್ಕರ ನನ್ನಲ್ಲಿ ಬಹು ಸಂಕಟವುಂಟಾಗಿದೆ; ನೀನು ನನಗೆ ಬಹುಮನೋಹರನಾಗಿದ್ದಿ. ನನ್ನ ಮೇಲಿದ್ದ ನಿನ್ನ ಪ್ರೀತಿಯು ಆಶ್ಚರ್ಯಕರವಾದದ್ದೇ ಸರಿ; ಅದು ಸತೀಪ್ರೇಮಕ್ಕಿಂತ ಶ್ರೇಷ್ಠವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನನ್ನ ಸೋದರನಾದ ಯೋನಾತಾನನೇ, ನಿನಗಾಗಿ ನಾನು ದುಃಖಿಸುವೆ! ನಿನ್ನ ಗೆಳೆತನವು ನನಗೆ ಉಲ್ಲಾಸದಾಯಕವಾಗಿತ್ತು. ನನ್ನ ಮೇಲಿನ ನಿನ್ನ ಪ್ರೀತಿಯು ಸ್ತ್ರೀಯರ ಪ್ರೀತಿಗಿಂತಲೂ ಅತಿಶಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನನ್ನ ಸಹೋದರನಾದ ಯೋನಾತಾನನೇ, ನಾನು ನಿನಗೋಸ್ಕರ ಶೋಕಿಸುತ್ತೇನೆ. ನೀನು ನನಗೆ ಬಹಳ ಮನೋಹರನಾಗಿದ್ದಿ. ನಿನ್ನ ಪ್ರೀತಿ ನನ್ನ ಮೇಲೆ ಆಶ್ಚರ್ಯಕರವಾಗಿತ್ತು. ಅದು ಸ್ತ್ರೀಯರ ಪ್ರೀತಿಗಿಂತ ಅಧಿಕವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:26
7 ತಿಳಿವುಗಳ ಹೋಲಿಕೆ  

ತಾನು ದಾವೀದನನ್ನು ಸ್ವಂತ ಪ್ರಾಣದಂತೆ ಪ್ರೀತಿಸುತ್ತಿದ್ದುದರಿಂದ ಆ ಪ್ರೀತಿಸಾಕ್ಷಿಯಾಗಿ ಅವನಿಂದ ಪ್ರಮಾಣಮಾಡಿಸಿದನು.


ಆಗ ಸೌಲನ ಮಗನಾದ ಯೋನಾತಾನನು ಅಲ್ಲಿಗೆ ಹೋಗಿ,


ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದ ಎದ್ದುಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು.


ಆದ್ದರಿಂದ ಅವನು ದಾವೀದನಿಗೆ, “ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದಿರುತ್ತಾನೆ. ನೀನು ಜಾಗರೂಕತೆಯಿಂದಿರು. ನಾಳೆ ಬೆಳಿಗ್ಗೆ ಒಂದು ಗುಪ್ತವಾದ ಸ್ಥಳದಲ್ಲಿ ಅಡಗಿಕೊಂಡಿರು.


ಅಯ್ಯೋ ಪರಾಕ್ರಮಶಾಲಿಗಳು ಹೇಗೆ ಹತರಾದರು, ಯುದ್ಧದ ಆಯುಧಗಳು ಹೇಗೆ ಹಾಳಾದವು.”


ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ, ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು