2 ಸಮುಯೇಲ 1:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ದಾವೀದನು, “ದಯವಿಟ್ಟು ಕಾರ್ಯವೇನಾಯಿತೆಂದು ತಿಳಿಸು” ಅನ್ನಲು ಆ ಮನುಷ್ಯನು, “ಇಸ್ರಾಯೇಲರು ರಣರಂಗದಿಂದ ಓಡಿಹೋದರು. ಅನೇಕರು ಗಾಯಗೊಂಡು ಸತ್ತುಹೋದರು. ಸೌಲನೂ ಅವನ ಮಗನಾದ ಯೋನಾತಾನನೂ ಮರಣಹೊಂದಿದರು” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಗ ದಾವೀದನು, “ಏನಾಯಿತೆಂದು ತಿಳಿಸು,” ಎನ್ನಲು ಆ ವ್ಯಕ್ತಿ, “ಇಸ್ರಯೇಲರು ರಣರಂಗದಿಂದ ಓಡಿಹೋದರು; ಅನೇಕರು ಮಡಿದರು. ಸೌಲನೂ ಅವನ ಮಗ ಯೋನಾತಾನನೂ ಮರಣಹೊಂದಿದರು,” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಗ ದಾವೀದನು - ದಯವಿಟ್ಟು ಕಾರ್ಯವೇನಾಯಿತೆಂದು ತಿಳಿಸು ಅನ್ನಲು ಆ ಮನುಷ್ಯನು - ಇಸ್ರಾಯೇಲ್ಯರು ರಣರಂಗದಿಂದ ಓಡಿಹೋದರು. ಅನೇಕರು ಮಡಿದರು. ಸೌಲನೂ ಅವನ ಮಗನಾದ ಯೋನಾತಾನನೂ ಮೃತಿ ಹೊಂದಿದರು ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ದಾವೀದನು ಅವನನ್ನು, “ಯುದ್ಧದಲ್ಲಿ ಯಾರು ಗೆದ್ದರು, ನನಗೆ ದಯವಿಟ್ಟು ತಿಳಿಸು?” ಎಂದು ಕೇಳಿದನು. ಅವನು, “ಇಸ್ರೇಲ್ ಜನರು ಯುದ್ಧರಂಗದಿಂದ ಓಡಿಹೋದರು. ಯುದ್ಧದಲ್ಲಿ ಅನೇಕರು ಸತ್ತುಹೋದರು. ಸೌಲನೂ ಅವನ ಮಗನಾದ ಯೋನಾತಾನನೂ ಸತ್ತರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದಾವೀದನು ಅವನಿಗೆ, “ನಡೆದ ವರ್ತಮಾನವೇನು? ನೀನು ನನಗೆ ತಿಳಿಸು,” ಎಂದನು. ಅವನು, “ಜನರು ಯುದ್ಧದಿಂದ ಓಡಿಹೋದರು. ಜನರಲ್ಲಿ ಅನೇಕರು ಸತ್ತರು. ಸೌಲನೂ, ಅವನ ಮಗ ಯೋನಾತಾನನೂ ಸತ್ತರು,” ಎಂದನು. ಅಧ್ಯಾಯವನ್ನು ನೋಡಿ |