Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ನಾನು ಆಕಸ್ಮಿಕವಾಗಿ ಗಿಲ್ಬೋವ ಪರ್ವತಪ್ರದೇಶಕ್ಕೆ ಬಂದಾಗ ಸೌಲನು ತನ್ನ ಬರ್ಜಿಯನ್ನೂರಿಕೊಂಡು ನಿಂತಿರುವುದನ್ನೂ ರಥಗಳು ಮತ್ತು ರಾಹುತರು ಅವನನ್ನು ಹಿಂದಟ್ಟಿ ಬರುತ್ತಿರುವುದನ್ನೂ ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವನು, “ನಾನು ಅಕಸ್ಮಾತ್ತಾಗಿ ಗಿಲ್ಬೋವ ಪರ್ವತಪ್ರದೇಶಕ್ಕೆ ಹೋದಾಗ ಸೌಲ ತಮ್ಮ ಭರ್ಜಿಯನ್ನೂರಿಕೊಂಡು ನಿಂತಿದ್ದರು. ರಥಿಕರೂ ರಾಹುತರೂ ಅವರನ್ನು ಹಿಂದಟ್ಟಿಬರುತ್ತಿರುವುದನ್ನೂ ಕಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ಅಕಸ್ಮಾತ್ತಾಗಿ ಗಿಲ್ಬೋವಪರ್ವತ ಪ್ರದೇಶಕ್ಕೆ ಬಂದಾಗ ಸೌಲನು ತನ್ನ ಬರ್ಜಿಯನ್ನೂರಿಕೊಂಡು ನಿಂತಿರುವದನ್ನೂ ರಥಿಕರೂ ರಾಹುತರೂ ಅವನನ್ನು ಹಿಂದಟ್ಟಿ ಬರುತ್ತಿರುವದನ್ನೂ ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅದಕ್ಕೆ ಆ ಯುವಕನು, “ನಾನು ಆಕಸ್ಮಿಕವಾಗಿ ಗಿಲ್ಬೋವದ ಶಿಖರದ ಮೇಲಿದ್ದೆ. ಸೌಲನು ತನ್ನ ಭರ್ಜಿಯ ಮೇಲೆ ಒರಗಿಕೊಂಡಿದ್ದನ್ನು ಅಲ್ಲಿಂದಲೇ ನಾನು ನೋಡಿದೆ. ಫಿಲಿಷ್ಟಿಯರ ರಥಗಳು ಮತ್ತು ಕುದುರೆಸವಾರರು ಸೌಲನ ಹತ್ತಿರಕ್ಕೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಅವನು, “ನಾನು ಅಕಸ್ಮಾತ್ತಾಗಿ ಗಿಲ್ಬೋವ ಬೆಟ್ಟಕ್ಕೆ ಹೋಗಿದ್ದೆನು. ಅಲ್ಲಿ ಸೌಲನು ತನ್ನ ಈಟಿಯನ್ನು ಊರಿಕೊಂಡು ನಿಂತಿದ್ದನು. ಆಗ ರಥಗಳೂ ರಾಹುತರೂ ಅವನನ್ನು ಹಿಂದಟ್ಟಿಕೊಂಡೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:6
9 ತಿಳಿವುಗಳ ಹೋಲಿಕೆ  

ಫಿಲಿಷ್ಟಿಯರು ಸೈನ್ಯಕೂಡಿಸಿಕೊಂಡು ಬಂದು ಶೂನೇಮಿನಲ್ಲಿ ಪಾಳೆಯಮಾಡಿಕೊಂಡರು. ಸೌಲನು ಎಲ್ಲಾ ಇಸ್ರಾಯೇಲರೊಡನೆ ಬಂದು, ಗಿಲ್ಬೋವದಲ್ಲಿ ಇಳಿದುಕೊಂಡರು.


ಆಗ ಒಬ್ಬ ಯಾಜಕನು ಆ ದಾರಿಯಲ್ಲಿ ಇಳಿದುಬರುತ್ತಾ ಅವನನ್ನು ಕಂಡು ಓರೆಯಾಗಿ ಹೋದನು.


ಗಿಲ್ಬೋವ ಗುಡ್ಡಗಳೇ, ನಿಮ್ಮ ಮೇಲೆ ಮಂಜು, ಮಳೆಯು, ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ. ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಗಳು ಬಿದ್ದಿರುತ್ತವೆ. ಸೌಲನ ಗುರಾಣಿಯೂ ಅಭಿಷಿಕ್ತನಲ್ಲದವನ ಗುರಾಣಿಯಂತೆ ಬಿದ್ದಿದೆ.


ಅ ಹಸುಗಳು ತಾವಾಗಿ ಸ್ವದೇಶದ ದಾರಿ ಹಿಡಿದು ಬೇತ್ ಷೆಮೆಷಿನ ಕಡೆಗೆ ಹೋದರೆ ಈ ದೊಡ್ಡ ಕೇಡನ್ನು ಬರಮಾಡಿದವನು ಯೆಹೋವನೇ ಎಂದೂ, ಆ ಮಾರ್ಗವನ್ನು ಹಿಡಿಯದಿದ್ದರೆ ಆತನ ಹಸ್ತವು ನಮ್ಮನ್ನು ಬಾಧಿಸಲ್ಲಿಲ್ಲ ಇದು ಆಕಸ್ಮಿಕವಾಗಿ ಬಂದಿದೆ ಎಂದು, ತಿಳಿದುಕೊಳ್ಳಿರಿ” ಅಂದರು.


ಆಕೆಯು ದೈವಯೋಗದಿಂದ ಎಲೀಮೆಲೆಕನ ಗೋತ್ರದವನಾದ ಬೋವಜನ ಸ್ವತ್ತಾಗಿದ್ದ ಹೊಲಕ್ಕೆ ಹೋಗಿ ತೆನೆ ಕೊಯ್ಯುವವರ ಹಿಂದಿನಿಂದ ಹಕ್ಕಲಾಯುತ್ತಾ ಇದ್ದಳು.


ದಾವೀದನು ಈ ವರ್ತಮಾನ ತಂದ ಆ ಪ್ರಾಯಸ್ಥನಿಗೆ “ಸೌಲನೂ ಅವನ ಮಗನಾದ ಯೋನಾತಾನನೂ ಸತ್ತಿರುವುದು ನಿನಗೆ ಹೇಗೆ ಗೊತ್ತಾಯಿತು” ಎಂದು ಪ್ರಶ್ನಿಸಲು ಅವನು,


ಅವನು ತಿರುಗಿಕೊಂಡು ನನ್ನನ್ನು ನೋಡಿ ಕರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು