Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 10:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ ಮತ್ತು ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ನಮ್ಮ ಶೌರ್ಯವನ್ನು, ಪೌರುಷವನ್ನು ತೋರಿಸೋಣ. ಯೆಹೋವನು ತನ್ನ ಚಿತ್ತದಂತೆ ಮಾಡಲಿ” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಧೈರ್ಯದಿಂದಿರು, ನಮ್ಮ ಜನರಿಗಾಗಿ ಹಾಗು ನಮ್ಮ ದೇವರ ಪಟ್ಟಣಗಳಿಗಾಗಿ ನಮ್ಮ ಪೌರುಷವನ್ನು ತೋರಿಸೋಣ; ಸರ್ವೇಶ್ವರ ತಮಗೆ ಸರಿಕಾಣುವಂಥದ್ದನ್ನು ಮಾಡಲಿ,” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ನಮ್ಮ ಪೌರುಷವನ್ನು ತೋರಿಸೋಣ; ಯೆಹೋವನು ತನಗೆ ಸರಿಕಾಣುವಂಥದನ್ನು ಮಾಡಲಿ ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀನು ಶಕ್ತನಾಗಿರು. ನಮ್ಮ ಜನರಿಗಾಗಿ ಮತ್ತು ನಮ್ಮ ದೇವರ ನಗರಗಳಿಗಾಗಿ ಧೈರ್ಯದಿಂದ ಹೋರಾಡೋಣ. ಯೆಹೋವನು ತನಗೆ ಸರಿಯೆನಿಸುವುದನ್ನು ಮಾಡಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೃಢವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಧೈರ್ಯವಾಗಿ ಹೋರಾಡೋಣ, ಯೆಹೋವ ದೇವರು ತಮ್ಮ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 10:12
24 ತಿಳಿವುಗಳ ಹೋಲಿಕೆ  

ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ.


ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.


ಸಮುವೇಲನು ಮುಚ್ಚುಮರೆಯಿಲ್ಲದೆ ಎಲ್ಲವನ್ನು ತಿಳಿಸಿದನು. ಏಲಿಯು ಅದನ್ನು ಕೇಳಿ, “ಆತನು ಯೆಹೋವನು; ತನಗೆ ಸರಿಕಾಣುವುದನ್ನು ಮಾಡಲಿ” ಎಂದನು.


ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.


ಆಗ ನಾನು ಅವರನ್ನು ಸಂದರ್ಶಿಸಿ ಅವರ ಮುಂದೆ ನಿಂತು ಶ್ರೀಮಂತರನ್ನೂ, ಅಧಿಕಾರಿಗಳನ್ನೂ, ಉಳಿದ ಜನರನ್ನೂ ಉದ್ದೇಶಿಸಿ, “ನಿಮ್ಮ ಹಗೆಗಳಿಗೆ ಹೆದರಬೇಡಿರಿ; ಮಹೋನ್ನತನೂ, ಭಯಂಕರನೂ ಆಗಿರುವ ಕರ್ತನನ್ನು ನೆನಪುಮಾಡಿಕೊಂಡು ನಿಮ್ಮ ಸಹೋದರರಿಗಾಗಿಯೂ, ಗಂಡು ಹೆಣ್ಣು ಮಕ್ಕಳಿಗಾಗಿಯೂ, ಹೆಂಡತಿಯರಿಗಾಗಿಯೂ, ನಿಮ್ಮ ಮನೆಗಳಿಗೋಸ್ಕರವೂ ಹೋರಾಡಿರಿ” ಎಂದು ಹೇಳಿದೆನು.


ಫಿಲಿಷ್ಟಿಯರೇ, ಬಲಗೊಳ್ಳಿರಿ, ಶೂರರಾಗಿರಿ; ನಿಮಗೆ ದಾಸರಾಗಿದ್ದ ಇಬ್ರಿಯರಿಗೆ ನೀವೇ ದಾಸರಾದೀರಿ. ಆದಕಾರಣ ಶೌರ್ಯದಿಂದ ಯುದ್ಧಮಾಡಬೇಕು” ಎಂದು ಹೇಳಿಕೊಂಡು


ಅವರು ತಿರುಗಿ ಯೆಹೋವನಿಗೆ, “ನಾವು ಪಾಪ ಮಾಡಿದ್ದೇವೆ; ನಿನಗೆ ಸರಿಕಾಣುವ ಪ್ರಕಾರ ನಮಗೆ ಮಾಡು; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು” ಎಂದು ಮೊರೆಯಿಟ್ಟು ಅನ್ಯದೇವತೆಗಳನ್ನು ತಮ್ಮಲ್ಲಿಂದ ತೆಗೆದು ಹಾಕಿ ಯೆಹೋವನನ್ನು ಸೇವಿಸುವವರಾದರು.


ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ, ನಮ್ಮ ದೇವರ ಪಟ್ಟಣಗಳಿಗೋಸ್ಕರವೂ, ನಮ್ಮ ಪೌರುಷವನ್ನು ತೋರಿಸೋಣ. ಯೆಹೋವನು ತನಗೆ ಸರಿಕಾಣುವ ಹಾಗೆ ಮಾಡಲಿ” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರುದ್ಧವಾಗಿ ಕಳುಹಿಸಿದನು.


“ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿಹೋಗುವೆನು; ನನಗಿರುವುದನ್ನೆಲ್ಲ ಯೆಹೋವನೇ ಕೊಟ್ಟನು, ಅವುಗಳನ್ನು ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ” ಎಂದು ಹೇಳಿದನು.


ದಾವೀದನು ಸೌಲನಿಗೆ, “ಆ ಫಿಲಿಷ್ಟಿಯನ ನಿಮಿತ್ತವಾಗಿ ಯಾವನೂ ಧೈರ್ಯಗೆಡಬಾರದು ನಿನ್ನ ಸೇವಕನಾದ ನಾನು ಹೋಗಿ ಅವನೊಡನೆ ಯುದ್ಧಮಾಡುವೆನು” ಅನ್ನಲು,


ಅವರು ಯೋನಾತಾನನಿಗೂ ಅವನ ಆಯುಧಗಳನ್ನು ಹೊರುವವನಿಗೂ, “ಹತ್ತಿ ನಮ್ಮ ಬಳಿಗೆ ಬನ್ನಿರಿ; ನಿಮಗೆ ತೋರಿಸಿಬೇಕಾದ ಕಾರ್ಯ ಬಂದಿದೆ” ಎಂದರು. ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, “ನೀನೂ ನನ್ನ ಸಂಗಡ ಹತ್ತಿ ಬಾ; ಯೆಹೋವನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದಾನೆ” ಎಂದು ಹೇಳಿದನು.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ. ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹು ಜನರಿದ್ದರೂ, ಸ್ವಲ್ಪ ಜನರಿದ್ದರೂ ರಕ್ಷಿಸುವುದು ಯೆಹೋವನಿಗೆ ಅಸಾಧ್ಯವಲ್ಲ” ಎಂದು ಹೇಳಿದನು.


ನಿನ್ನ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯ ಮಾಡಿದರೆ ನಿನ್ನ ವಿಧಿಗಳಿಗೆ ವಿರುದ್ಧವಾಗಿ ನಡೆದರೆ ಮರಣದಂಡನೆಗೆ ಗುರಿಯಾಗತಕ್ಕವನು; ಆದುದರಿಂದ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು” ಎಂದು ಹೇಳಿದರು.


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.


ಭೂಮಿಯು ಸಾರವಾದುದೋ ಅಥವಾ ನಿಸ್ಸಾರವಾದುದೋ, ಮರಗಳುಳ್ಳದ್ದೋ ಅಥವಾ ಬಯಲುಪ್ರದೇಶವೋ ಎಂದು ನೋಡಿ ತಿಳಿದುಕೊಳ್ಳಬೇಕು. ಅದಲ್ಲದೆ ನೀವು ಧೈರ್ಯವುಳ್ಳವರಾಗಿದ್ದು ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಬೇಕು” ಎಂದು ಹೇಳಿದನು. ಆಗ ದ್ರಾಕ್ಷಾಲತೆಗಳ ಪ್ರಥಮ ಫಲದ ಕಾಲವಾಗಿತ್ತು.


“ಶೂರರಾಗಿರಿ, ಧೈರ್ಯದಿಂದಿರಿ; ಅಶ್ಶೂರದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಗುಂಪಿಗೂ ಅಂಜಬೇಡಿರಿ, ಕಳವಳಪಡಬೇಡಿರಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯವು ದೊಡ್ಡದ್ದು. ಅವನೊಂದಿಗಿರುವದಕ್ಕಿಂತ ದೊಡ್ಡವನಾಗಿರುವವನು ನಮ್ಮೊಂದಿಗಿದ್ದಾನೆ.


ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು.,


ಯೋವಾಬನು ಅವನಿಗೆ, “ಅರಾಮ್ಯರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ. ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುವೆನು.


ಆಗ ಮೋಶೆ ಯೆಹೋಶುವನನ್ನು ಕರೆದು ಇಸ್ರಾಯೇಲರ ಮುಂದೆ ಅವನಿಗೆ, “ಯೆಹೋವನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿ ಧೈರ್ಯದಿಂದಿರು;


ಒಂದು ವೇಳೆ ಆತನು ‘ನಿನ್ನಲ್ಲಿ ನನಗೆ ಇಷ್ಟವಿಲ್ಲ’ ಎಂದುಕೊಂಡರೆ ಇಗೋ, ನಾನು ಇಲ್ಲಿದ್ದೇನೆ. ಆತನು ತನಗೆ ಸರಿ ಕಂಡಂತೆ ಮಾಡಲಿ” ಎಂದನು.


ನಾವು ಒಟ್ಟಾಗಿ ಯೆರೂಸಲೇಮಿನವರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗಿ ಅವರನ್ನು ಗಲಿಬಿಲಿಗೊಳಿಸೋಣ ಎಂದು ಒಳಸಂಚು ಮಾಡಿಕೊಂಡರು.


ನೀವೆಲ್ಲರೂ ಮೂರು ದಿನ ಹಗಲಿರುಳು ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸ ಮಾಡಿರಿ; ಅದರಂತೆ ನಾನೂ ನನ್ನ ಸೇವಕಿಯರೊಡನೆ ಉಪವಾಸದಿಂದಿರುವೆನು. ಅನಂತರ ನಾನು ವಿಧಿಮೀರಿ ಅರಸನ ಬಳಿಗೆ ಹೋಗುವೆನು, ಸತ್ತರೆ ಸಾಯುತ್ತೇನೆ” ಎಂದು ಹೇಳಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು