Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 10:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರ ಬಾಗಿಲಿನ ಬಳಿಯಲ್ಲಿ ವ್ಯೂಹರಚಿಸಿದರು. ಚೋಬ, ರೆಹೋಬ್ ಎಂಬ ಸ್ಥಳಗಳ ಅರಾಮ್ಯರೂ ಟೋಬ್ ಮತ್ತು ಮಾಕಾ ದೇಶಗಳವರೂ ಪ್ರತ್ಯೇಕವಾಗಿ ಮೈದಾನದಲ್ಲಿ ಇಳಿದುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರಬಾಗಿಲಿನ ಬಳಿಯಲ್ಲೆ ವ್ಯೂಹಕಟ್ಟಿದರು. ಚೋಬಾ ಮತ್ತು ರೆಹೋಬ್ ಎಂಬ ಸ್ಥಳಗಳ ಸಿರಿಯಾದವರೂ ಟೋಬ್, ಮಾಕಾ ದೇಶಗಳವರೂ ಪ್ರತ್ಯೇಕವಾಗಿ ಮೈದಾನದಲ್ಲಿ ಇಳಿದುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರುಬಾಗಲಿನ ಬಳಿಯಲ್ಲಿ ವ್ಯೂಹಕಟ್ಟಿದರು. ಚೋಬಾ, ರೆಹೋಬ್ ಎಂಬ ಸ್ಥಳಗಳ ಅರಾಮ್ಯರೂ ಟೋಬ್ ಮಾಕಾ ದೇಶಗಳವರೂ ಪ್ರತ್ಯೇಕವಾಗಿ ಮೈದಾನದಲ್ಲಿ ಇಳುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಮ್ಮೋನಿಯರು ಹೊರಗೆ ಬಂದು ಯುದ್ಧಕ್ಕೆ ಸಿದ್ಧರಾದರು. ಅವರು ನಗರದ ಬಾಗಿಲಿನಲ್ಲಿ ನಿಂತರು. ಚೋಬಾ ಮತ್ತು ರೆಹೋಬ್‌ಗಳ ಅರಾಮ್ಯರು, ಟೋಬ್ ಮತ್ತು ಮಾಕಾದ ಜನರು ಯುದ್ಧರಂಗದಲ್ಲಿ ಅಮ್ಮೋನಿಯರ ಜೊತೆಯಲ್ಲಿ ಒಟ್ಟಾಗಿ ನಿಲ್ಲಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಅಮ್ಮೋನಿಯರು ಹೊರಟು ಪಟ್ಟಣದ ದ್ವಾರದ ಹತ್ತಿರ ವ್ಯೂಹ ಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬಿನಿಂದಲೂ ಟೋಬಿನಿಂದಲೂ ಮಾಕಾನಿಂದಲೂ ಬಂದ ಅರಾಮ್ಯರು ಪ್ರತ್ಯೇಕವಾಗಿ ಬೈಲಿನಲ್ಲಿ ಇಳಿದುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 10:8
13 ತಿಳಿವುಗಳ ಹೋಲಿಕೆ  

ತಾವು ದಾವೀದನ ಕೋಪಕ್ಕೂ, ಅಸಮಾಧಾನಕ್ಕೂ ಗುರಿಯಾಗಿದ್ದೇವೆ ಎಂದು ತಿಳಿದು ಅಮ್ಮೋನಿಯರು ಬೇತ್ ರೆಹೋಬ್ ಮತ್ತು ಚೋಬಾ ಎಂಬ ಪಟ್ಟಣಗಳಿಂದ ಅರಾಮ್ಯರ ಇಪ್ಪತ್ತು ಸಾವಿರ ಕಾಲಾಳುಗಳನ್ನೂ, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನೂ ಮತ್ತು ಟೋಬ್ ದೇಶದಿಂದ ಹನ್ನೆರಡು ಸಾವಿರ ದಂಡಾಳುಗಳನ್ನೂ ಹಣಕೊಟ್ಟು ತರಿಸಿದನು


ಆಗ ಮೂವತ್ತೆರಡು ಸಾವಿರ ರಥಬಲದವರೂ, ಮಾಕದ ಅರಸನೂ ಮತ್ತು ಅವನ ದಂಡಾಳುಗಳು ಬಂದು ಅವರ ಸಹಾಯಕ್ಕೋಸ್ಕರ ಮೇದೆಬ ಊರಿನ ಮುಂದೆ ಪಾಳೆಯ ಮಾಡಿಕೊಂಡರು. ಅಮ್ಮೋನಿಯರೂ ತಮ್ಮ ಪಟ್ಟಣಗಳಿಂದ ಯುದ್ಧಕ್ಕೆ ಕೂಡಿಬಂದರು.


ಆಶೇರ್ಯರು ಅಕ್ಕೋ, ಚೀದೋನ್, ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಎಂಬ ಪಟ್ಟಣಗಳಲ್ಲಿ ವಾಸವಾಗಿದ್ದ ಜನರನ್ನು ಹೊರಡಿಸಿಬಿಡಲಿಲ್ಲ;


ಕಾಬೂಲ್, ಎಬ್ರೋನ್, ರೆಹೋಬ್, ಹಮ್ಮೋನ್, ಕಾನಾ ಇವುಗಳ ಮೇಲೆ ಚೀದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.


ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನ ವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು.


ಅವನು ತನ್ನ ಸಹೋದರರನ್ನು ಬಿಟ್ಟು ಟೋಬ್ ದೇಶಕ್ಕೆ ಹೋಗಲು ಅಲ್ಲಿನ ಕಾಕಪೋಕರು ಕೂಡಿ ಅವನನ್ನು ಹಿಂಬಾಲಿಸಿದರು.


ಆಗ ಗಿಲ್ಯಾದಿನ ಹಿರಿಯರು ಯೆಪ್ತಾಹನನ್ನು ಟೋಬ್ ದೇಶದಿಂದ ಕರೆದುಕೊಂಡು ಬರುವುದಕ್ಕಾಗಿ ಅಲ್ಲಿಗೆ ಹೋದರು.


ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಯೋವಾಬನನ್ನೂ, ಎಲ್ಲಾ ಶೂರ ಸೈನಿಕರನ್ನೂ ಕಳುಹಿಸಿದನು.


ಯೋವಾಬನು ತನ್ನ ಮುಂದೆಯೂ, ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಸೈನಿಕರನ್ನು ಆರಿಸಿಕೊಂಡು, ಅವರನ್ನು ಅರಾಮ್ಯರಿಗೆ ವಿರೋಧವಾಗಿ ನಿಲ್ಲಿಸಿದನು.


ಮಾಕಾ ಊರಿನ ಅಹಸ್ಬೈ ಎಂಬುವನ ಮಗನಾದ ಎಲೀಫೆಲೆಟ್, ಗಿಲೋವಿನ ಅಹೀತೋಫೆಲ ಎಂಬುವನ ಮಗನಾದ ಎಲೀಯಾಮ್,


ದಾವೀದನು ಚೋಬದವರನ್ನು ಸಂಹರಿಸಿದಾಗ ಅವನು ಚೋಬದ ಅರಸನೂ ಒಡೆಯನೂ ಆದ ಹದದೆಜೆರನನ್ನು ಬಿಟ್ಟು ಓಡಿಹೋಗಿ ಕೆಲವು ಜನರನ್ನು ಕೂಡಿಸಿಕೊಂಡು ತಾನು ಅವರ ನಾಯಕನಾಗಿ ಅವರೊಡನೆ ದಮಸ್ಕಕ್ಕೆ ಬಂದು ಅಲ್ಲಿ ಅರಸನಾದನು.


ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರ ಬಾಗಿಲಿನ ಬಳಿಯಲ್ಲಿ ವ್ಯೂಹಕಟ್ಟಿದರು. ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಮೈದಾನದಲ್ಲಿ ನಿಂತರು.


ಆ ಸೇನಾಪತಿಗಳು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಯೋನಾಥಾನ, ತನ್ಹುಮೆತನ ಮಗನಾದ ಸೆರಾಯ, ಮಾಕಾ ಊರಿನವನ ಮಗನಾದ ಯೆಜನ್ಯ, ನೆಟೋಫದವನಾದ ಏಫಯನ ಮಕ್ಕಳು ಇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು