2 ಸಮುಯೇಲ 10:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೋವಾಬನು ತನ್ನ ಮುಂದೆಯೂ, ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಸೈನಿಕರನ್ನು ಆರಿಸಿಕೊಂಡು, ಅವರನ್ನು ಅರಾಮ್ಯರಿಗೆ ವಿರೋಧವಾಗಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಯೋವಾಬನು ತನ್ನ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಯೇಲರಲ್ಲಿ ಶ್ರೇಷ್ಠರಾದ ಸೈನಿಕರನ್ನು ಆರಿಸಿಕೊಂಡು ಅವರನ್ನು ಸಿರಿಯಾದವರಿಗೆ ವಿರುದ್ಧ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯೋವಾಬನು ತನ್ನ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಸೈನಿಕರನ್ನು ಆರಿಸಿಕೊಂಡು ಅವರನ್ನು ಅರಾಮ್ಯರಿಗೆ ವಿರೋಧವಾಗಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅಮ್ಮೋನಿಯರು ತಮ್ಮ ವಿರುದ್ಧವಾಗಿ ಹಿಂದೆ ಮತ್ತು ಮುಂದೆ ನಿಂತಿರುವುದನ್ನು ನೋಡಿದ ಯೋವಾಬನು ಇಸ್ರೇಲರಲ್ಲಿ ಶ್ರೇಷ್ಠರಾದವರನ್ನು ಆರಿಸಿಕೊಂಡು ಅರಾಮ್ಯರ ವಿರುದ್ಧ ಯುದ್ಧಮಾಡಲು ಅವರನ್ನು ಸಾಲಾಗಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯೋವಾಬನು, ಯುದ್ಧವು ತನ್ನ ವಿರೋಧವಾಗಿ ಹಿಂದೆಯೂ, ಮುಂದೆಯೂ ಇರುವುದನ್ನು ಕಂಡಾಗ, ಅವನು ಇಸ್ರಾಯೇಲಿನ ಎಲ್ಲಾ ಶ್ರೇಷ್ಠ ಸೈನಿಕರನ್ನು ಆಯ್ದುಕೊಂಡು, ಅರಾಮ್ಯರಿಗೆ ಎದುರಾಗಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿ |