2 ಸಮುಯೇಲ 11:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ರಾಜರೆಲ್ಲರು ಸಾಮಾನ್ಯವಾಗಿ ವಸಂತಕಾಲದ ಪ್ರಾರಂಭದಲ್ಲಿ ಯುದ್ಧಕ್ಕೆ ಹೊರಡುವ ಸಮಯವನ್ನು ಗೊತ್ತುಮಾಡುತ್ತಿದ್ದರು. ದಾವೀದನು ಯೋವಾಬನನ್ನೂ, ತನ್ನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತ್ಯಗಳನ್ನು ನಾಶ ಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ರಾಜರು ಸಾಮಾನ್ಯವಾಗಿ ಯುದ್ಧಕ್ಕೆ ಹೊರಡುವ ವಸಂತಕಾಲ ಅದು. ದಾವೀದನು ಯೋವಾಬನನ್ನು, ತನ್ನ ಸೇವಕರನ್ನು ಹಾಗು ಎಲ್ಲ ಇಸ್ರಯೇಲರನ್ನು ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತ್ಯಗಳನ್ನು ಹಾಳುಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ದಾವೀದನು ಜೆರುಸಲೇಮಿನಲ್ಲೇ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಮರುವರುಷ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ದಾವೀದನು ಯೋವಾಬನನ್ನೂ ತನ್ನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತಗಳನ್ನು ಹಾಳುಮಾಡಿ ರಬ್ಬಕ್ಕೆ ಮುತ್ತಿಗೆಹಾಕಿದರು. ದಾವೀದನು ಯೆರೂಸಲೇವಿುನಲ್ಲಿಯೇ ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ವಸಂತಕಾಲದಲ್ಲಿ, ಎಲ್ಲಾ ರಾಜರೂ ಯುದ್ಧಕ್ಕೆ ಹೊರಡುವ ಸಮಯ ಬಂದಾಗ, ದಾವೀದನು ಯೋವಾಬನನ್ನೂ ಅವನ ಸೇವಕರನ್ನೂ ಮತ್ತು ಇಸ್ರೇಲರೆಲ್ಲರನ್ನೂ ಅಮ್ಮೋನಿಯರೊಂದಿಗೆ ಯುದ್ಧಮಾಡಲು ಕಳುಹಿಸಿದನು. ಯೋವಾಬನ ಸೈನ್ಯವು ರಬ್ಬಕ್ಕೆ ಮುತ್ತಿಗೆ ಹಾಕಿತು. ಆದರೆ ದಾವೀದನು ಜೆರುಸಲೇಮಿನಲ್ಲಿಯೇ ಉಳಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಮರು ವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ದಾವೀದನು ಯೋವಾಬನನ್ನೂ, ಅವನ ಸಂಗಡದಲ್ಲಿದ್ದ ಅವನ ಸೇವಕರನ್ನೂ, ಸಮಸ್ತ ಇಸ್ರಾಯೇಲರನ್ನೂ ಕಳುಹಿಸಿದನು. ಅವರು ಅಮ್ಮೋನಿಯರ ಪ್ರಾಂತಗಳನ್ನು ಹಾಳು ಮಾಡಿ ರಬ್ಬ ನಗರಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು. ಅಧ್ಯಾಯವನ್ನು ನೋಡಿ |