2 ಸಮುಯೇಲ 11:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಊರೀಯನು ತನ್ನ ಮನೆಗೆ ಹೋಗಲಿಲ್ಲ ಎಂಬ ವರ್ತಮಾನವು ದಾವೀದನಿಗೆ ತಿಳಿದಾಗ ಅವನು ಊರೀಯನಿಗೆ, “ನೀನು ಪ್ರಯಾಣಮಾಡಿಕೊಂಡು ಬಂದಿಯಲ್ಲಾ, ಯಾಕೆ ಮನೆಗೆ ಹೋಗಲಿಲ್ಲ?” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಊರೀಯನು ತನ್ನ ಮನೆಗೆ ಹೋಗಲಿಲ್ಲ ಎಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಆಗ ದಾವೀದನು ಊರೀಯನಿಗೆ, “ನೀನು ದೀರ್ಘಪ್ರಯಾಣಮಾಡಿ ಬಂದಿರುವೆಯಲ್ಲವೆ? ಏಕೆ ಮನೆಗೆ ಹೋಗಲಿಲ್ಲ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಊರೀಯನು ತನ್ನ ಮನೆಗೆ ಹೋಗಲಿಲ್ಲ ಎಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಇವನು ಅವನಿಗೆ - ನೀನು ಪ್ರಯಾಣಮಾಡಿಕೊಂಡು ಬಂದಿಯಲ್ಲಾ; ಯಾಕೆ ಮನೆಗೆ ಹೋಗಲಿಲ್ಲ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸೇವಕರು ದಾವೀದನಿಗೆ, “ಊರಿಯನು ಮನೆಗೆ ಹೋಗಲೇ ಇಲ್ಲ” ಎಂದು ಹೇಳಿದರು. ಆಗ ದಾವೀದನು, “ನೀನು ದೀರ್ಘ ಪ್ರಯಾಣದಿಂದ ಬಂದಿರುವೆ. ನೀನು ಏಕೆ ಮನೆಗೆ ಹೋಗಲಿಲ್ಲ?” ಎಂದು ಊರೀಯನನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಊರೀಯನು ತನ್ನ ಮನೆಗೆ ಹೋಗಲಿಲ್ಲವೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ದಾವೀದನು ಊರೀಯನಿಗೆ, “ನೀನು ಪ್ರಯಾಣದಿಂದ ಬರಲಿಲ್ಲವೋ? ಏಕೆ ನಿನ್ನ ಮನೆಗೆ ಹೋಗಲಿಲ್ಲ?” ಎಂದನು. ಅಧ್ಯಾಯವನ್ನು ನೋಡಿ |
ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷವೂ, ಇಸ್ರಾಯೇಲ್ಯರೂ, ಯೆಹೂದ್ಯರೂ ಗುಡಾರಗಳಲ್ಲಿ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ, ಅವನ ಸೇವಕರೂ ಬಯಲಿನಲ್ಲಿ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಾಗ ನಾನು ಮಾತ್ರ ನನ್ನ ಮನೆಗೆ ಹೋಗಿ ಊಟಮಾಡಿ, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿನ್ನಾಣೆ, ನಿನ್ನ ಜೀವದ ಆಣೆ, ನಾನು ಇಂಥದ್ದನ್ನು ಮಾಡುವುದೇ ಇಲ್ಲ” ಎಂದು ಉತ್ತರಕೊಟ್ಟನು.