Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಊರಿನ ಜನರು ಹೊರಗೆ ಬಂದು ಯೋವಾಬನೊಡನೆ ಕಾದಾಡಿದಾಗ ದಾವೀದನ ಸೇವಕರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ಊರೀಯನೂ ಸಹ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆ ಊರಿನ ಜನರು ಹೊರಗೆ ಬಂದು ಯೋವಾಬನ ಸೈನ್ಯದೊಡನೆ ಹೋರಾಡಿದರು. ದಾವೀದನ ಸೇವಕರಲ್ಲಿ ಕೆಲವರು ಸತ್ತರು; ಹಿತ್ತಿಯನಾದ ಊರೀಯನೂ ಮಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆ ಊರಿನ ಜನರು ಹೊರಗೆ ಬಂದು ಯೋವಾಬನೊಡನೆ ಕಾದಿದಾಗ ದಾವೀದನ ಸೇವಕರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ಊರೀಯನೂ ಮಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೋವಾಬನ ವಿರುದ್ಧ ಹೋರಾಡಲು ಆ ನಗರದ ಜನರು ಹೊರಗೆ ಬಂದು ದಾವೀದನ ಕೆಲವು ಜನರನ್ನು ಕೊಂದರು. ಹಿತ್ತಿಯನಾದ ಊರೀಯನೂ ಅವರಲ್ಲೊಬ್ಬನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಪಟ್ಟಣದ ಮನುಷ್ಯರು ಹೊರಟು ಯೋವಾಬನ ಸಂಗಡ ಯುದ್ಧಮಾಡುವಾಗ, ದಾವೀದನ ಸೇವಕರಾದವರಲ್ಲಿ ಕೆಲವರು ಸತ್ತರು. ಇದಲ್ಲದೆ ಹಿತ್ತಿಯನಾದ ಊರೀಯನೂ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:17
5 ತಿಳಿವುಗಳ ಹೋಲಿಕೆ  

ದೇವರೇ, ನನ್ನ ರಕ್ಷಣಾ ಕರ್ತನೇ, ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ನೀತಿಯನ್ನು ಕೊಂಡಾಡುವುದು.


ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ, ನನ್ನ ದೃಷ್ಟಿಯಲ್ಲಿ ಅನೀತಿಯನ್ನು ಕೆಟ್ಟದ್ದಾಗಿರುವುದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿರುವೆ.


ಯೋವಾಬನು ಪಟ್ಟಣಕ್ಕೆ ಮುತ್ತಿಗೆ ಹಾಕುವಾಗ ಶೂರರಾದ ಶತ್ರುಸೈನಿಕರು ಎಲ್ಲಿರುತ್ತಾರೆಂದು ಗೊತ್ತುಮಾಡಿಕೊಂಡು ಊರೀಯನನ್ನು ಅಲ್ಲಿ ನಿಲ್ಲಿಸಿದನು.


ಅನಂತರ ಯೋವಾಬನು ಒಬ್ಬ ದೂತನನ್ನು ಕರೆದು ಅವನಿಗೆ, “ನೀನು ಹೋಗಿ ದಾವೀದನಿಗೆ ಯುದ್ಧ ವರ್ತಮಾನವನ್ನೆಲ್ಲಾ ತಿಳಿಸು.


ಯೆರುಬ್ಬೇಷೆತನ ಮಗನಾದ ಅಬೀಮೆಲೇಕನನ್ನು ಕೊಂದವರು ಯಾರು ಎಂದು ನಿಮಗೆ ಗೊತ್ತಿಲ್ಲವೋ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿ ಹಾಕಿ ಅವನನ್ನು ಕೊಂದಳಲ್ಲವೇ. ಹೀಗಿರುವುದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇಕೆ?’ ಎಂದು ಕೇಳಿದರೆ ನೀನು, ಹಿತ್ತಿಯನಾದ ನಿನ್ನ ಸೇವಕ ಊರೀಯನು ಮೃತನಾದನೆಂದು ಹೇಳು” ಎಂಬುದಾಗಿ ಆಜ್ಞಾಪಿಸಿ ಅವನನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು