2 ಸಮುಯೇಲ 11:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೆರುಬ್ಬೇಷೆತನ ಮಗನಾದ ಅಬೀಮೆಲೇಕನನ್ನು ಕೊಂದವರು ಯಾರು ಎಂದು ನಿಮಗೆ ಗೊತ್ತಿಲ್ಲವೋ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿ ಹಾಕಿ ಅವನನ್ನು ಕೊಂದಳಲ್ಲವೇ. ಹೀಗಿರುವುದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇಕೆ?’ ಎಂದು ಕೇಳಿದರೆ ನೀನು, ಹಿತ್ತಿಯನಾದ ನಿನ್ನ ಸೇವಕ ಊರೀಯನು ಮೃತನಾದನೆಂದು ಹೇಳು” ಎಂಬುದಾಗಿ ಆಜ್ಞಾಪಿಸಿ ಅವನನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಕೊಂದವರಾರೆಂದು ನಿಮಗೆ ಗೊತ್ತಿಲ್ಲವೇ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿಹಾಕಿ ಅವನನ್ನು ಕೊಂದಳಲ್ಲವೇ? ಹೀಗಿರುವುದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇಕೆ?’ ಎಂದು ಕೇಳಿದರೆ ನೀನು, ‘ಹಿತ್ತಿಯನಾದ ನಿಮ್ಮ ಸೇವಕ ಊರೀಯನೂ ಮೃತನಾದನೆಂದು ಹೇಳು,’ ಎಂಬುದಾಗಿ ಆಜ್ಞಾಪಿಸಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಕೊಂದವರಾರೆಂದು ನಿಮಗೆ ಗೊತ್ತಿಲ್ಲವೋ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಣಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿಹಾಕಿ ಅವನನ್ನು ಕೊಂದಳಲ್ಲವೇ. ಹೀಗಿರುವದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇನು ಎಂದು ಕೇಳಿದರೆ ನೀನು - ಹಿತ್ತಿಯನಾದ ನಿನ್ನ ಸೇವಕ ಊರೀಯನೂ ಮೃತಿಹೊಂದಿದನೆಂದು ಹೇಳು ಎಂಬದಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಯಾರು ಕೊಂದರೆಂಬುದು ನಿಮಗೆ ಗೊತ್ತಿಲ್ಲವೇ? ಅಬೀಮೆಲೆಕನ ಮೇಲೆ ಬೀಸುವ ಕಲ್ಲನ್ನು ನಗರದ ಗೋಡೆಯ ಮೇಲಿನಿಂದ ಎಸೆದವಳು ತೇಬೇಚಿನ ಒಬ್ಬ ಹೆಂಗಸಲ್ಲವೇ? ನೀವು ಗೋಡೆಯ ಹತ್ತಿರಕ್ಕೆ ಏಕೆ ಹೋದಿರಿ?’ ಎಂದು ಹೇಳಬಹುದು. ಆಗ ನೀನು, ‘ಹಿತ್ತಿಯನಾದ ನಿನ್ನ ಸೇವಕ ಊರೀಯನು ಸಹ ಸತ್ತುಹೋದನು’ ಎಂದು ಉತ್ತರಿಸಬೇಕು” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವರು ಗೋಡೆಯಿಂದ ಬಾಣಗಳನ್ನು ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ? ಯೆರುಬ್ಬೆಷೆತನ ಮಗ ಅಬೀಮೆಲೆಕನನ್ನು ಕೊಂದವರ‍್ಯಾರು? ತೆಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲಿನ ತುಂಡನ್ನು ಅವನ ಮೇಲೆ ಹಾಕಿದಾಗ, ಅವನು ಸತ್ತನಲ್ಲವೋ? ನೀವು ಗೋಡೆಗೆ ಅಷ್ಟು ಸಮೀಪ ಏಕೆ ಹೋದಿರಿ?’ ಎಂದು ಕೇಳಿದರೆ; ಆಗ ನೀನು ಅವನಿಗೆ, ನಿಮ್ಮ ಸೇವಕನಾದ ಊರೀಯನೆಂಬ ಹಿತ್ತಿಯನು ಸತ್ತನೆಂದು ಹೇಳು,” ಎಂದನು. ಅಧ್ಯಾಯವನ್ನು ನೋಡಿ |