2 ಸಮುಯೇಲ 11:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅದಕ್ಕೆ ದಾವೀದನು ದೂತನಿಗೆ, “ನೀನು ಹೋಗು, ಇದಕ್ಕೋಸ್ಕರ ವ್ಯಸನಪಡಬೇಡ. ಕತ್ತಿಯು ಈ ಹೊತ್ತು ಒಬ್ಬನನ್ನು ನುಂಗಿದರೆ, ನಾಳೆ ಇನ್ನೊಬ್ಬನನ್ನು ನುಂಗುವುದು, ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿರಿ ಎಂಬುದಾಗಿ ಅರಸನು ಆಜ್ಞಾಪಿಸುತ್ತಾನೆ ಎಂದು ಯೋವಾಬನಿಗೆ ಹೇಳಿ ಅವನನ್ನು ಧೈರ್ಯಪಡಿಸು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆಗ ದಾವೀದನು ಆ ದೂತನಿಗೆ, “ನೀನು ಹೋಗಿ ಯೋವಾಬನಿಗೆ, ‘ವ್ಯಸನಪಡಬೇಕಾಗಿಲ್ಲ; ಕತ್ತಿ ಈ ದಿನ ಒಬ್ಬನನ್ನು ನುಂಗಿದರೆ ನಾಳೆ ಇನ್ನೊಬ್ಬನನ್ನು ನುಂಗುತ್ತದೆ. ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿ, ಎಂಬುದಾಗಿ ಅರಸರು ಆಜ್ಞಾಪಿಸುತ್ತಾರೆ’ ಎಂದು ಹೇಳಿ ಅವನನ್ನು ಧೈರ್ಯಪಡಿಸು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆಗ ದಾವೀದನು ದೂತನಿಗೆ ನೀನು ಹೋಗಿ - ಇದಕ್ಕೋಸ್ಕರವಾಗಿ ವ್ಯಸನ ಪಡಬೇಡ; ಕತ್ತಿಯು ಈ ಹೊತ್ತು ಒಬ್ಬನನ್ನು ನುಂಗಿದರೆ ನಾಳೆ ಇನ್ನೊಬ್ಬನನ್ನು ನುಂಗುವದು. ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿರಿ ಎಂಬದಾಗಿ ಅರಸನು ಆಜ್ಞಾಪಿಸುತ್ತಾನೆಂದು ಯೋವಾಬನಿಗೆ ಹೇಳಿ ಅವನನ್ನು ಧೈರ್ಯಪಡಿಸು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ದಾವೀದನು ಸಂದೇಶಕನಿಗೆ, “ನೀನು ಹೋಗಿ ಯೋವಾಬನಿಗೆ: ‘ಇದರಿಂದ ನೀನು ತಳಮಳಗೊಳ್ಳಬೇಡ. ಒಂದೇ ಖಡ್ಗವು ಈ ಹೊತ್ತು ಒಬ್ಬನನ್ನು ಕೊಂದರೆ, ಇನ್ನೊಂದು ದಿನ ಇನ್ನೊಬ್ಬನನ್ನು ಕೊಲ್ಲುವುದು. ರಬ್ಬ ನಗರದ ಮೇಲೆ ಧೈರ್ಯವಾಗಿ ಆಕ್ರಮಣಮಾಡು. ಆಗ ನೀನು ನಗರವನ್ನು ಗೆಲ್ಲುವೆ!’ ಈ ಮಾತುಗಳಿಂದ ಯೋವಾಬನನ್ನು ಹುರಿದುಂಬಿಸು” ಎಂಬುದಾಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆಗ ದಾವೀದನು ಆ ದೂತನಿಗೆ, “ನೀನು ಯೋವಾಬನಿಗೆ, ‘ಇದು ನಿನ್ನನ್ನು ಕದಲಿಸದಿರಲಿ. ಖಡ್ಗವು ಇವನನ್ನಾದರೂ ಸರಿ, ಅವನನ್ನಾದರೂ ಸರಿ ತಿಂದುಬಿಡುವುದು. ನೀನು ಪಟ್ಟಣವನ್ನು ನಿರ್ಮೂಲ ಮಾಡುವ ಹಾಗೆ, ಅದರ ಮೇಲೆ ನಿನ್ನ ಯುದ್ಧವು ಹೆಚ್ಚು ಬಲವಾಗಿರಲಿ,’ ಎಂದು ಹೇಳಿ, ಅವನನ್ನು ಬಲಪಡಿಸು,” ಎಂದನು. ಅಧ್ಯಾಯವನ್ನು ನೋಡಿ |