Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಊರೀಯನ ಮರಣದ ವಾರ್ತೆಯನ್ನು ಅವನ ಹೆಂಡತಿಯು ಕೇಳಿ ಗಂಡನಿಗೋಸ್ಕರ ಗೋಳಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಊರೀಯನ ಮರಣವಾರ್ತೆಯನ್ನು ಅವನ ಹೆಂಡತಿ ಕೇಳಿ ಗಂಡನಿಗಾಗಿ ಅತ್ತು ಗೋಳಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಊರೀಯನ ಮರಣವಾರ್ತೆಯನ್ನು ಅವನ ಹೆಂಡತಿಯು ಕೇಳಿ ಗಂಡನಿಗೋಸ್ಕರ ಗೋಳಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ತನ್ನ ಗಂಡನಾದ ಊರೀಯನು ಸತ್ತನೆಂಬ ಸುದ್ದಿಯು ಬತ್ಷೆಬೆಳಿಗೆ ತಿಳಿಯಿತು. ಆಗ ಅವಳು ತನ್ನ ಗಂಡನಿಗಾಗಿ ಗೋಳಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ತನ್ನ ಗಂಡನಾದ ಊರೀಯನು ಸತ್ತನೆಂದು ಊರೀಯನ ಹೆಂಡತಿಯು ಕೇಳಿದಾಗ, ಅವಳು ತನ್ನ ಗಂಡನಿಗೋಸ್ಕರ ಗೋಳಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:26
8 ತಿಳಿವುಗಳ ಹೋಲಿಕೆ  

ತೆಕೋವ ಪಟ್ಟಣದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆದುಕೊಂಡು ಬರಲು ತಿಳಿಸಿದನು. ಅವನು ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹು ದಿನಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು ಎಣ್ಣೆಹಚ್ಚಿಕೊಳ್ಳದೆ,


ಅರಸನಾದ ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟುಗಳನ್ನು ಕಟ್ಟಿಕೊಂಡು, ಗೋಳಾಡುತ್ತಾ ಅಬ್ನೇರನ ಶವದ ಮುಂದೆ ನಡೆಯಿರಿ” ಎಂದು ಆಜ್ಞಾಪಿಸಿ ತಾನು ಶವಯಾತ್ರೆ ಹಿಂದೆ ಹೋದನು.


ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿಮಿತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ, “ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು. ತರುವಾಯ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು” ಎಂದುಕೊಂಡನು.


ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಶೋಕಾಚರಿಸಿದನು.


ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರು ಮೋಶೆಗೋಸ್ಕರ ಮೂವತ್ತು ದಿನಗಳ ವರೆಗೆ ದುಃಖಿಸಿದರು. ಅಲ್ಲಿಗೆ ಮೋಶೆಯ ಪ್ರಲಾಪದ ದಿನಗಳು ಮುಗಿದವು.


ಅವರ ಎಲುಬುಗಳನ್ನು ಯಾಬೇಷಿನಲ್ಲಿದ್ದ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ, ಏಳು ದಿನ ಉಪವಾಸ ಮಾಡಿದರು.


ಅದಕ್ಕೆ ದಾವೀದನು ದೂತನಿಗೆ, “ನೀನು ಹೋಗು, ಇದಕ್ಕೋಸ್ಕರ ವ್ಯಸನಪಡಬೇಡ. ಕತ್ತಿಯು ಈ ಹೊತ್ತು ಒಬ್ಬನನ್ನು ನುಂಗಿದರೆ, ನಾಳೆ ಇನ್ನೊಬ್ಬನನ್ನು ನುಂಗುವುದು, ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿರಿ ಎಂಬುದಾಗಿ ಅರಸನು ಆಜ್ಞಾಪಿಸುತ್ತಾನೆ ಎಂದು ಯೋವಾಬನಿಗೆ ಹೇಳಿ ಅವನನ್ನು ಧೈರ್ಯಪಡಿಸು” ಎಂದನು.


ಇಜ್ರೇಲಿನವನಾದ ನಾಬೋತನ ಮರಣವಾರ್ತೆಯನ್ನು ಅಹಾಬನು ಕೇಳಿ ದ್ರಾಕ್ಷಿ ತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೋಸ್ಕರ ಇಳಿದು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು