Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ದುಃಖಕಾಲವು ತೀರಿದ ನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರತರಿಸಿ, ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆಯು ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕೃತ್ಯಗಳು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದೂ, ಅನೀತಿಯೂ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ದುಃಖಕಾಲ ತೀರಿದನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರೆಯಿಸಿ ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆ ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನ ಈ ಕೃತ್ಯ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ದುಃಖಕಾಲ ತೀರಿದನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರತರಿಸಿ ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು; ಆಕೆಯು ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನ ಈ ಕೃತ್ಯವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅವಳು ತನ್ನ ಶೋಕಕಾಲವನ್ನು ಮುಗಿಸಿದ ನಂತರ, ಅವಳನ್ನು ತನ್ನ ಮನೆಗೆ ಕರೆತರಲು ದಾವೀದನು ಸೇವಕರನ್ನು ಕಳುಹಿಸಿದನು. ಅವಳು ದಾವೀದನ ಪತ್ನಿಯಾದಳು. ಅವಳು ದಾವೀದನಿಂದ ಒಂದು ಗಂಡುಮಗುವಿಗೆ ಜನ್ಮನೀಡಿದಳು. ದಾವೀದನು ಮಾಡಿದ ಈ ಕೆಟ್ಟಕಾರ್ಯವು ಯೆಹೋವನಿಗೆ ದುಃಖವನ್ನುಂಟುಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ದುಃಖದ ದಿವಸಗಳು ತೀರಿದ ತರುವಾಯ, ದಾವೀದನು ಅವಳನ್ನು ತನ್ನ ಮನೆಗೆ ಕರೆಯಕಳುಹಿಸಿದನು. ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕಾರ್ಯವು ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:27
16 ತಿಳಿವುಗಳ ಹೋಲಿಕೆ  

ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ, ನನ್ನ ದೃಷ್ಟಿಯಲ್ಲಿ ಅನೀತಿಯನ್ನು ಕೆಟ್ಟದ್ದಾಗಿರುವುದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿರುವೆ.


ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.


ಜನಗಣತಿ ಮಾಡಿದ್ದು ದೇವರಿಗೆ ಕೆಟ್ಟದ್ದೆಂದು ಕಂಡದ್ದರಿಂದ ಆತನು ಇಸ್ರಾಯೇಲರನ್ನು ಬಾಧಿಸಿದನು.


ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ, ಅವಳ ತಂದೆಗೆ ಐವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.


ಈ ನಡತೆ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದುದರಿಂದ ಆತನು ಅವನನ್ನೂ ಸಾಯಿಸಿದನು.


ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ.


ಇಷಯನ ಮಗನು ಅರಸನಾದ ದಾವೀದನು. ದಾವೀದನ ಮಗನಾದ ಸೊಲೊಮೋನನು ಊರೀಯನ ಹೆಂಡತಿಯಲ್ಲಿ ಹುಟ್ಟಿದವನು.


ಒಂದು ವೇಳೆ ಆತನು ‘ನಿನ್ನಲ್ಲಿ ನನಗೆ ಇಷ್ಟವಿಲ್ಲ’ ಎಂದುಕೊಂಡರೆ ಇಗೋ, ನಾನು ಇಲ್ಲಿದ್ದೇನೆ. ಆತನು ತನಗೆ ಸರಿ ಕಂಡಂತೆ ಮಾಡಲಿ” ಎಂದನು.


ಇಜ್ರೇಲಿನವನಾದ ನಾಬೋತನ ಮರಣವಾರ್ತೆಯನ್ನು ಅಹಾಬನು ಕೇಳಿ ದ್ರಾಕ್ಷಿ ತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೋಸ್ಕರ ಇಳಿದು ಹೋದನು.


ಅಹಾಬನು ಎಲೀಯನನ್ನು ಕಂಡು ಅವನನ್ನು, “ನನ್ನ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ” ಎಂದು ಕೇಳಲು ಅವನು, “ಹೌದು ಕಂಡುಹಿಡಿದ್ದೆನು. ನೀನು ನಿನ್ನನ್ನು ಪಾಪಕ್ಕೆ ಮಾರಿಕೊಂಡು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.


ನೆರೆಯವನ ಹೆಂಡತಿಯ ಹತ್ತಿರ ಹೋಗುವವನಿಗೆ ಹೀಗೆಯೇ ಆಗುವುದು, ಯಾರು ಅವಳನ್ನು ಮುಟ್ಟುವನೋ ಅವನು ದಂಡನೆಯನ್ನು ಹೊಂದದೇ ಇರನು.


ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಡುವುದಕ್ಕೆ, ಅಗಾಧಕ್ಕೆ ಹೋಗಿ, “ನಮ್ಮನ್ನು ಯಾರು ನೋಡುವರು? ಯಾರು ತಿಳಿದಾರು?” ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡೆಸುವವರ ಗತಿಯನ್ನು ಏನು ಹೇಳಲಿ!


ವ್ಯಾಜ್ಯವನ್ನು ಅನ್ಯಾಯವಾಗಿ ತೀರಿಸುವುದೂ, ಇವುಗಳನ್ನು ಕರ್ತನು ಲಕ್ಷ್ಯಕ್ಕೆ ತಾರನೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು