2 ಸಮುಯೇಲ 11:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ದಾವೀದನು ಆಗ ತಾನೇ ಋತುಸ್ನಾನಮಾಡಿಕೊಂಡಿದ್ದ ಆಕೆಯನ್ನು ಕರೆದು ತರುವಂತೆ ದೂತರನ್ನು ಕಳುಹಿಸಿದನು. ಆಕೆಯು ಬರಲು ಅವನು ಆಕೆಯನ್ನು ಸಂಗಮಿಸಿದನು. ಅನಂತರ ಆಕೆಯು ತನ್ನ ಮನೆಗೆ ಹೋದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಕೆ ಆಗ ತಾನೆ ಋತುಸ್ನಾನ ಮಾಡಿಕೊಂಡಿದ್ದಳು. ಆಕೆಯನ್ನು ಕರೆದುತರುವಂತೆ ದಾವೀದನು ದೂತರನ್ನು ಕಳುಹಿಸಿದನು. ಆಕೆ ಬಂದಳು. ದಾವೀದನು ಆಕೆಯನ್ನು ಕೂಡಿದನು. ಅನಂತರ ಆಕೆ ತನ್ನ ಮನೆಗೆ ಹೋದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಗ ದಾವೀದನು ಆಗಲೇ ಋತುಸ್ನಾನಮಾಡಿಕೊಂಡಿದ್ದ ಆಕೆಯನ್ನು ದೂತರ ಮುಖಾಂತರವಾಗಿ ಕರೇಕಳುಹಿಸಿದನು; ಆಕೆಯು ಬರಲು ಆಕೆಯನ್ನು ಕೂಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ದಾವೀದನು ತನಗಾಗಿ ಬತ್ಷೆಬೆಳನ್ನು ಕರೆತರಲು ಸಂದೇಶಕರನ್ನು ಕಳುಹಿಸಿದನು. ಅವಳು ದಾವೀದನ ಬಳಿಗೆ ಬಂದಾಗ ಅವನು ಅವಳೊಡನೆ ಲೈಂಗಿಕ ಸಂಬಂಧವನ್ನು ಹೊಂದಿದನು. ತನ್ನ ಮಾಸಿಕ ಮುಟ್ಟು ನಿಂತಮೇಲೆ ತನ್ನನ್ನು ಶುದ್ಧಪಡಿಸಿಕೊಳ್ಳಲು ಆಕೆ ಸ್ನಾನಮಾಡಿಕೊಂಡ ಮೇಲೆ ಇದು ಸಂಭವಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ದಾವೀದನು ದೂತರನ್ನು ಕಳುಹಿಸಿ ಅವಳನ್ನು ಬರಮಾಡಿಕೊಂಡನು. ಅವಳು ಅವನ ಬಳಿಗೆ ಬಂದಾಗ, ಅವಳು ತನ್ನ ಮೈಲಿಗೆಯನ್ನು ಕಳೆದುಕೊಂಡು ಶುಚಿಯಾಗಿದ್ದದರಿಂದ, ದಾವೀದನು ಅವಳ ಸಂಗಡ ಮಲಗಿದನು. ಅಧ್ಯಾಯವನ್ನು ನೋಡಿ |