Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಕೆಯು ತಾನು ಗರ್ಭಧರಿಸಿದ್ದು ಗೊತ್ತಾದಾಗ ದಾವೀದನಿಗೆ ವರ್ತಮಾನ ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮುಂದೆ, ತಾನು ಗರ್ಭಧರಿಸಿದ್ದು ಗೊತ್ತಾದಾಗ ಆಕೆ ದಾವೀದನಿಗೆ ಸಮಾಚಾರ ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅನಂತರ ಆಕೆಯು ತನ್ನ ಮನೆಗೆ ಹೋದಳು. ಆಕೆಯು ತಾನು ಗರ್ಭಧರಿಸಿದ್ದು ಗೊತ್ತಾದಾಗ ದಾವೀದನಿಗೆ ವರ್ತಮಾನ ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಬಳಿಕ ಬತ್ಷೆಬೆ ಗರ್ಭಿಣಿಯಾದಳು. ಅವಳು ದಾವೀದನಿಗೆ, “ನಾನು ಗರ್ಭಿಣಿಯಾಗಿದ್ದೇನೆ” ಎಂದು ಹೇಳಿ ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ತರುವಾಯ ಆಕೆಯು ತನ್ನ ಮನೆಗೆ ಹೋದಳು. ಆ ಸ್ತ್ರೀಯು ಗರ್ಭಧರಿಸಿ, “ತಾನು ಗರ್ಭವತಿ,” ಎಂಬ ವಿಷಯವನ್ನು ದಾವೀದನಿಗೆ ಹೇಳಿ ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:5
4 ತಿಳಿವುಗಳ ಹೋಲಿಕೆ  

ಯಾವನಾದರೂ ಇನ್ನೊಬ್ಬನ ಹೆಂಡತಿಯೊಡನೆ ವ್ಯಭಿಚಾರಮಾಡಿದ್ದು ತಿಳಿದುಬಂದರೆ ಆ ಸ್ತ್ರೀ ಮತ್ತು ಪುರುಷರಿಬ್ಬರಿಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.


ಏಕೆಂದರೆ ಮತ್ಸರವು ಪತಿಗೆ ಕ್ರೋಧವನ್ನು ಉಂಟುಮಾಡುತ್ತದೆ, ಅವನು ಮುಯ್ಯಿತೀರಿಸತಕ್ಕ ದಿನದಲ್ಲಿ ವ್ಯಭಿಚಾರಿಯನ್ನು ಉಳಿಸನು.


“‘ಯಾವನಾದರೂ ಪರನ ಪತ್ನಿಯೊಡನೆ ವ್ಯಭಿಚಾರವನ್ನು ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.


ಆಗ ದಾವೀದನು ದೂತರ ಮುಖಾಂತರವಾಗಿ ಯೋವಾಬನಿಗೆ, “ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು” ಎಂದು ಹೇಳಿ ಕಳುಹಿಸಿದನು. ಅವನು ಊರೀಯನನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು