Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಊರೀಯನ ಹೆಂಡತಿಯಲ್ಲಿ ದಾವೀದನಿಗೆ ಹುಟ್ಟಿದ ಮಗು ಯೆಹೋವನ ಪೆಟ್ಟಿನಿಂದ ಬಹಳವಾಗಿ ಅಸ್ವಸ್ಥವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಎಂದು ಹೇಳಿ ಮನೆಗೆ ಹೊರಟು ಹೋದನು. ಊರೀಯನ ಹೆಂಡತಿಯಲ್ಲಿ ದಾವೀದನಿಗೆ ಹುಟ್ಟಿದ ಮಗು ಸರ್ವೇಶ್ವರನ ಶಿಕ್ಷೆಯಿಂದಾಗಿ ಬಹು ಅಸ್ವಸ್ಥವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಎಂದು ಹೇಳಿ ಮನೆಗೆ ಹೊರಟು ಹೋದನು. ಊರೀಯನ ಹೆಂಡತಿಯಲ್ಲಿ ದಾವೀದನಿಗೆ ಹುಟ್ಟಿದ ಮಗುವು ಯೆಹೋವನ ಪೆಟ್ಟಿನಿಂದ ಬಹುವಾಗಿ ಅಸ್ವಸ್ಥವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾತಾನನು ಮನೆಗೆ ಹೋದನು. ದಾವೀದನಿಗೆ ಊರೀಯನ ಹೆಂಡತಿಯಲ್ಲಿ ಹುಟ್ಟಿದ ಗಂಡುಮಗುವಿಗೆ ಯೆಹೋವನು ಬಹಳ ಕಾಯಿಲೆಯನ್ನು ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಂತರ ನಾತಾನನು ತನ್ನ ಮನೆಗೆ ಹೋದನು. ಯೆಹೋವ ದೇವರು, ಊರೀಯನ ಹೆಂಡತಿಯು ದಾವೀದನಿಗೆ ಹೆತ್ತ ಕೂಸನ್ನು ಬಾಧಿಸಲು, ಅದು ಬಹಳ ಅಸ್ವಸ್ಥವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:15
9 ತಿಳಿವುಗಳ ಹೋಲಿಕೆ  

ಸುಮಾರು ಹತ್ತು ದಿನಗಳಾದನಂತರ ನಾಬಾಲನು ಯೆಹೋವನಿಂದ ಹತನಾಗಿ ಸತ್ತನು.


ನೀನು ವಿಮುಖನಾಗಲು ತಲ್ಲಣಿಸುತ್ತವೆ; ಅವುಗಳ ಶ್ವಾಸವನ್ನು ತೆಗೆದುಬಿಡಲು ಅವು ಸತ್ತು ತಿರುಗಿ ಮಣ್ಣಿಗೆ ಸೇರುತ್ತವೆ.


ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.


ಯಾರೊಬ್ಬಾಮನು ಅಬೀಯನ ಜೀವಮಾನದಲ್ಲಿ ತಿರುಗಿ ಬಲಗೊಳ್ಳಲೇ ಇಲ್ಲ. ಯೆಹೋವನು ಅವನನ್ನು ಬಾಧಿಸಿದ್ದರಿಂದ ಅವನು ಸತ್ತನು.


ಯೆಹೋವನು ಅವನನ್ನು ಕುಷ್ಠರೋಗದಿಂದ ಶಿಕ್ಷಿಸಿದನು. ಆದುದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾಧಿಪತ್ಯವನ್ನೂ, ಪ್ರಜಾಪಾಲನೆಯನ್ನೂ ಇವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.


ಇದಲ್ಲದೆ ದಾವೀದನು, “ಯೆಹೋವನ ಆಣೆ, ಅವನು ಯೆಹೋವನಿಂದ ಸಾಯುವನು, ಇಲ್ಲವೆ ಕಾಲ ತುಂಬಿದ ಮೇಲೆ ಮರಣ ಹೊಂದುವನು ಅಥವಾ ಯುದ್ಧದಲ್ಲಿ ಸಾಯುವನು.


ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ.


ಆದರೂ ನೀನು ಈ ಕೃತ್ಯದಿಂದ ಯೆಹೋವನ ವೈರಿಗಳು ಆತನನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದ ಕೊಟ್ಟಿದ್ದರಿಂದ ನಿನ್ನಿಂದ ಹುಟ್ಟಿರುವ ಮಗುವು ಸತ್ತೇ ಹೋಗುವುದು” ಎಂದು ಹೇಳಿ ಮನೆಗೆ ಹೊರಟುಹೋದನು.


ದಾವೀದನು ಮಗುವಿಗೋಸ್ಕರ ದೇವರನ್ನು ಪ್ರಾರ್ಥಿಸುತ್ತಾ, ಉಪವಾಸ ಮಾಡುತ್ತಾ, ಒಳಗಿನ ಕೋಣೆಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆಯೇ ಬಿದ್ದುಕೊಂಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು