2 ಸಮುಯೇಲ 12:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯ ಬಳಿಗೆ ಹೋಗಿ ಆಕೆಯನ್ನು ಸಂತೈಸಿ ಆಕೆಯ ಸಂಗಡ ಮಲಗಿದನು. ಆಕೆಯು ಒಬ್ಬ ಮಗನನ್ನು ಹೆತ್ತಾಗ ದಾವೀದನು ಅವನಿಗೆ “ಸೊಲೊಮೋನನು” ಎಂದು ಹೆಸರಿಟ್ಟನು. ಯೆಹೋವನು ಅವನನ್ನು ಪ್ರೀತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ದಾವೀದನು ತನ್ನ ಹೆಂಡತಿ ಬತ್ಷೆಬೆಯ ಬಳಿಗೆ ಹೋಗಿ ಆಕೆಯನ್ನು ಸಂತೈಸಿ ಆಕೆಯ ಸಂಗಡ ಮಲಗಿದನು. ಆಕೆ ಮಗನನ್ನು ಹೆತ್ತಾಗ ಅವನಿಗೆ ಸೊಲೊಮೋನೆಂದು ಹೆಸರಿಟ್ಟನು. ಸರ್ವೇಶ್ವರಸ್ವಾಮಿ ಆ ಹುಡುಗನನ್ನು ಪ್ರೀತಿಸಿದರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯ ಬಳಿಗೆ ಹೋಗಿ ಆಕೆಯನ್ನು ಸಂತೈಸಿ ಆಕೆಯ ಸಂಗಡ ಮಲಗಿದನು. ಆಕೆ ಮಗನನ್ನು ಹೆತ್ತಾಗ ಅವನಿಗೆ ಸೊಲಮೋನನೆಂದು ಹೆಸರಿಟ್ಟನು. ಯೆಹೋವನು ಹುಡುಗನನ್ನು ಪ್ರೀತಿಸಿದನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನಂತರ ದಾವೀದನು ತನ್ನ ಪತ್ನಿಯಾದ ಬತ್ಷೆಬೆಳನ್ನು ಸಂತೈಸಿ ಅವಳೊಂದಿಗೆ ಮಲಗಿಕೊಂಡನು. ಬತ್ಷೆಬೆಳು ಮತ್ತೆ ಗರ್ಭಿಣಿಯಾದಳು. ಅವಳಿಗೆ ಮತ್ತೊಂದು ಗಂಡು ಮಗುವಾಯಿತು. ಆ ಮಗುವಿಗೆ ಸೊಲೊಮೋನ್ ಎಂದು ದಾವೀದನು ಹೆಸರಿಟ್ಟನು. ಯೆಹೋವನು ಸೊಲೊಮೋನನನ್ನು ಪ್ರೀತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಳನ್ನು ಆಧರಿಸಿ, ಅವಳ ಬಳಿಗೆ ಹೋಗಿ ಅವಳ ಸಂಗಡ ಮಲಗಿದನು. ಅವಳು ಒಬ್ಬ ಮಗನನ್ನು ಹೆತ್ತಳು. ಅವನಿಗೆ ಸೊಲೊಮೋನನೆಂದು ಹೆಸರಿಟ್ಟನು. ಯೆಹೋವ ದೇವರು ಅವನನ್ನು ಪ್ರೀತಿ ಮಾಡಿದರು. ಅಧ್ಯಾಯವನ್ನು ನೋಡಿ |