Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೋವಾಬನು ದಾವೀದನಿಗೆ ದೂತರ ಮುಖಾಂತರವಾಗಿ, “ನಾನು ರಬ್ಬಕ್ಕೆ ಮುತ್ತಿಗೆ ಹಾಕಿ, ಹೊಳೆಯ ಬಳಿಯಲ್ಲಿರುವ ಭಾಗವನ್ನು ಸ್ವಾಧೀನ ಮಾಡಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ದಾವೀದನಿಗೆ ದೂತರ ಮುಖಾಂತರ, “ನಾನು ರಬ್ಬಕ್ಕೆ ಮುತ್ತಿಗೆಹಾಕಿ ನೀರು ಪೂರೈಕೆಯ ಭಾಗವನ್ನು ಸ್ವಾಧೀನಮಾಡಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ದಾವೀದನಿಗೆ ದೂತರ ಮುಖಾಂತರವಾಗಿ - ನಾನು ರಬ್ಬಕ್ಕೆ ಮುತ್ತಿಗೆಹಾಕಿ ಹೊಳೆಯ ಬಳಿಯಲ್ಲಿರುವ ಭಾಗವನ್ನು ಸ್ವಾಧೀನ ಮಾಡಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೋವಾಬನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿ, “ನಾನು ರಬ್ಬದ ವಿರುದ್ಧ ಹೋರಾಡಿ ನೀರಿರುವ ನಗರವನ್ನು ವಶಪಡಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೋವಾಬನು ದಾವೀದನಿಗೆ, “ನಾನು ರಬ್ಬಕ್ಕೆ ವಿರೋಧವಾಗಿ ಯುದ್ಧಮಾಡಿ, ನೀರು ಪೂರೈಕೆಯ ಭಾಗವನ್ನು ಸ್ವಾಧೀನ ಮಾಡಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:27
5 ತಿಳಿವುಗಳ ಹೋಲಿಕೆ  

ಅಮ್ಮೋನ್ಯರ ರಬ್ಬಾ ಎಂಬ ಪಟ್ಟಣಕ್ಕೂ, ಯೆಹೂದದೊಳಗೆ ಕೋಟೆ ಕೊತ್ತಲಗಳಿಂದ ಕೂಡಿದ ಯೆರೂಸಲೇಮಿಗೂ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು.


ರಾಜರೆಲ್ಲರು ಸಾಮಾನ್ಯವಾಗಿ ವಸಂತಕಾಲದ ಪ್ರಾರಂಭದಲ್ಲಿ ಯುದ್ಧಕ್ಕೆ ಹೊರಡುವ ಸಮಯವನ್ನು ಗೊತ್ತುಮಾಡುತ್ತಿದ್ದರು. ದಾವೀದನು ಯೋವಾಬನನ್ನೂ, ತನ್ನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತ್ಯಗಳನ್ನು ನಾಶ ಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು.


(ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈ ಅಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.)


ಯೋವಾಬನು ಅಮ್ಮೋನಿಯರ ಪಟ್ಟಣವಾದ ರಬ್ಬಕ್ಕೆ ಮುತ್ತಿಗೆ ಹಾಕಿ ಅರಮನೆಯಿದ್ದ ಭಾಗವನ್ನು ಸ್ವಾಧೀನಮಾಡಿಕೊಂಡನು.


ನೀನು ಬೇಗನೆ ಉಳಿದ ಸೈನ್ಯವನ್ನು ಕೂಡಿಸಿಕೊಂಡು ಬಂದು ಪಟ್ಟಣಕ್ಕೆ ಮುತ್ತಿಗೆ ಹಾಕಿ, ಉಳಿದ ಭಾಗವನ್ನು ಸ್ವಾಧೀನಪಡಿಸಿಕೋ, ಅದನ್ನು ನಾನೇ ಹಿಡಿದರೆ ಅದಕ್ಕೆ ನನ್ನ ಹೆಸರು ಬರುವುದು” ಎಂದು ಹೇಳಿ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು