Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇದಲ್ಲದೆ ಅವನು ಮಲ್ಕಾಮ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲೆ ತೂಕವುಳ್ಳದ್ದಾಗಿತ್ತು. ಅಲ್ಲದೆ ಅದರಲ್ಲಿ ಅಮೂಲ್ಯರತ್ನವನ್ನು ಇರಿಸಲಾಗಿತ್ತು. ಅವರು ಅದನ್ನು ದಾವೀದನ ಶಿರಸ್ಸಿನ ಮೇಲಿರಿಸಿದರು. ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಇದಲ್ಲದೆ ಅವನು ಅವರ ಮಲ್ಕಾಮ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು; ಅದು ಮೂವತ್ತೈದು ಕಿಲೊಗ್ರಾಂ ತೂಕದ್ದು. ಅದರಲ್ಲಿದ್ದ ರತ್ನವನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಇದಲ್ಲದೆ ಅವನು ಅವರ ಮಲ್ಕಾಮಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು; ಅದು ನಾಲ್ಕು ಸಾವಿರ ತೊಲೆ ತೂಕದ್ದು. ಅದರಲ್ಲಿದ್ದ ಮಣಿಯನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ದಾವೀದನು ಅವರ ರಾಜನ ತಲೆಯ ಮೇಲಿದ್ದ ಕಿರೀಟವನ್ನು ತೆಗೆದುಕೊಂಡನು. ಆ ಕೀರಿಟವು ಚಿನ್ನದ್ದೂ ಎಪ್ಪತ್ತೈದು ಪೌಂಡುಗಳಷ್ಟು ಭಾರವುಳ್ಳದ್ದೂ ಆಗಿತ್ತು. ಆ ಕಿರೀಟದಲ್ಲಿ ಬೆಲೆಬಾಳುವ ರತ್ನಗಳಿದ್ದವು. ಅವರು ಆ ಕೀರಿಟವನ್ನು ದಾವೀದನ ತಲೆಯ ಮೇಲೆ ಇಟ್ಟರು. ದಾವೀದನು ಆ ನಗರದಿಂದ ಅನೇಕ ಬೆಲೆಬಾಳುವ ವಸ್ತುಗಳನ್ನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಇದಲ್ಲದೆ ದಾವೀದನು ಅಮ್ಮೋನಿಯರ ಅರಸನ ತಲೆಯ ಮೇಲೆ ಇದ್ದ ಕಿರೀಟವನ್ನು ಸಹ ತೆಗೆದುಕೊಂಡನು. ಅದು ಮೂವತ್ತೈದು ಕಿಲೋಗ್ರಾಂ ತೂಕದ್ದಾಗಿತ್ತು ಅದನ್ನು ಬಂಗಾರದಿಂದಲೂ, ಅಮೂಲ್ಯವಾದ ರತ್ನಗಳಿಂದಲೂ ಅಲಂಕರಿಸಲಾಗಿತ್ತು, ಆ ಕಿರೀಟವನ್ನು ದಾವೀದನ ಶಿರಸ್ಸಿನಲ್ಲಿ ಧರಿಸಲಾಯಿತು. ಆ ಪಟ್ಟಣದೊಳಗಿಂದ ಅತ್ಯಧಿಕವಾದ ಕೊಳ್ಳೆಯನ್ನೂ ತೆಗೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:30
4 ತಿಳಿವುಗಳ ಹೋಲಿಕೆ  

ದಾವೀದನು ಮಲ್ಕಾಮ್ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲಾ ತೂಕದ್ದು. ಅದರಲ್ಲಿದ್ದ ಅಮೂಲ್ಯವಾದ ರತ್ನಗಳನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಅವನು ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದನು.


ಆಗ ದಾವೀದನು ಜನರೆಲ್ಲರನ್ನು ಕೂಡಿಸಿಕೊಂಡು ಹೋಗಿ, ರಬ್ಬಕ್ಕೆ ಮುತ್ತಿಗೆ ಹಾಕಿ ಅದನ್ನು ವಶಮಾಡಿಕೊಂಡನು.


ನಾನಾ ಶುಭಗಳೊಡನೆ ನೀನೇ ಅವನನ್ನು ಎದುರುಗೊಂಡಿಯಲ್ಲಾ; ಅವನ ತಲೆಯ ಮೇಲೆ ಸುವರ್ಣ ಕಿರೀಟವನ್ನು ಇಟ್ಟಿದ್ದೀ.


ಇವರಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಕಿರೀಟವನ್ನು ಮಾಡಿ ಯೆಹೋಚಾದಾಕನ ಮಗನೂ ಹಾಗೂ ಮಹಾಯಾಜಕನು ಆದ ಯೆಹೋಶುವನ ತಲೆಯ ಮೇಲೆ ಇಟ್ಟು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು