Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಮಾಡುವುದಕ್ಕೂ ಇಟ್ಟಿಗೆಗಳನ್ನು ಮಾಡುವುದಕ್ಕೂ ಹಚ್ಚಿದರು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಕೆಲಸ ಮಾಡುವುದಕ್ಕೂ ಇಟ್ಟಿಗೆಗಳನ್ನು ಸುಡುವುದಕ್ಕೂ ಹಚ್ಚಿದನು. ಅಮ್ಮೋನಿಯರ ಉಳಿದೆಲ್ಲ ಪಟ್ಟಣದವರಿಗೂ ಇದೇ ಗತಿ ಆಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಜೆರುಸಲೇಮಿಗೆ ಮರಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಊರಿನ ನಿವಾಸಿಗಳನ್ನು ಹಿಡಿದು ಗರಗಸ ಗುದ್ದಲಿ ಕೊಡಲಿಗಳಿಂದ ಕೆಲಸ ಮಾಡುವದಕ್ಕೂ ಇಟ್ಟಿಗೆಗಳನ್ನು ಮಾಡುವದಕ್ಕೂ ಹಚ್ಚಿದನು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇವಿುಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ದಾವೀದನು ರಬ್ಬ ನಗರದ ಜನರನ್ನು ಹೊರದೂಡಿದನು. ದಾವೀದನು ಅವರನ್ನು ಗರಗಸ, ಕಬ್ಬಿಣದ ಗುದ್ದಲಿ ಮತ್ತು ಕೊಡಲಿಗಳಿಂದ ಕೆಲಸ ಮಾಡಿಸಿದನು. ಅವನು ಅವರಿಂದ ಬಲವಂತವಾಗಿ ಇಟ್ಟಿಗೆಗಳಿಂದ ಕಟ್ಟಡವನ್ನು ಕಟ್ಟಿಸಿದನು. ಅಮ್ಮೋನಿಯರ ನಗರಗಳಲ್ಲೆಲ್ಲಾ ದಾವೀದನು ಇದೇ ರೀತಿ ಮಾಡಿದನು. ನಂತರ ದಾವೀದನು ತನ್ನ ಸೈನ್ಯದೊಂದಿಗೆ ಜೆರುಸಲೇಮಿಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಇದಲ್ಲದೆ ಅವನು ಅದರಲ್ಲಿದ್ದ ಜನರನ್ನು ಹೊರಗೆ ತಂದು, ಅವರನ್ನು ಗರಗಸ ಗುದ್ದಲಿ ಕೊಡಲಿಗಳಿಂದ ಕೆಲಸ ಮಾಡುವದಕ್ಕೂ ಇಟ್ಟಿಗೆಗಳನ್ನು ಸುಡುವುದಕ್ಕೂ ಇಟ್ಟನು. ಅದೇ ಪ್ರಕಾರ ದಾವೀದನು ಅಮ್ಮೋನಿಯರ ಸಮಸ್ತ ಪಟ್ಟಣಗಳಿಗೂ ಮಾಡಿದನು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ತಿರುಗಿಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:31
10 ತಿಳಿವುಗಳ ಹೋಲಿಕೆ  

ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಕ್ಕೆ ನೇಮಿಸಿದನು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಸರ್ವಸೈನಿಕರೊಡನೆ ಯೆರೂಸಲೇಮಿಗೆ ಬಂದನು.


ಯೆಹೋವನು ಇಂತೆನ್ನುತ್ತಾನೆ, “ದಮಸ್ಕವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಗಿಲ್ಯಾದನ್ನು ಕಬ್ಬಿಣದ ಹಂತಿ ಕುಂಟೆಗಳಿಂದ ಒಕ್ಕಿ ನುಗ್ಗುಮಾಡಿತಷ್ಟೆ.


ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿ, ಅವರನ್ನು ನೆಲಕ್ಕೆ ಉರುಳಿಸಿ, ಹಗ್ಗದಿಂದ ಅಳತೆಮಾಡಿಸಿ, ಪ್ರತಿ ಮೂರನೆಯ ಎರಡು ಭಾಗದ ಜನರನ್ನು ಕೊಲ್ಲಿಸಿ, ಮೂರನೆ ಭಾಗದ ಜನರನ್ನು ಉಳಿಸಿದನು. ಉಳಿದ ಮೋವಾಬ್ಯರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು.


ಕೆಲವರನ್ನು ಜನರು ಕಲ್ಲೆಸೆದು ಕೊಂದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಕೊಂದರು, ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.


ದಾವೀದನು ಮಲ್ಕಾಮ್ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲಾ ತೂಕದ್ದು. ಅದರಲ್ಲಿದ್ದ ಅಮೂಲ್ಯವಾದ ರತ್ನಗಳನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಅವನು ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದನು.


ಆತನು, “ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಯೆಹೂದ್ಯರ ಕಣ್ಣೆದುರಿಗೆ ನೆಲಗಟ್ಟಿನ ಕೆಳಗೆ ಇಟ್ಟು ಗಾರೆಯಿಂದ ಮುಚ್ಚಿ ಬಿಟ್ಟು ಅವರಿಗೆ ಹೀಗೆ ಹೇಳು,


ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಗಿಲ್ಗಾಲಿನ ಪಾಳೆಯಕ್ಕೆ ಹಿಂದಿರುಗಿದನು.


ಯೆಹೋವನು ಇಂತೆನ್ನುತ್ತಾನೆ, “ಅಮ್ಮೋನ್ಯರು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರು.


ನಾನು ರಬ್ಬದ ಕೋಟೆಯನ್ನು ಬೆಂಕಿಯಿಂದ ಉರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು; ಆ ಯುದ್ಧದ ದಿನದಲ್ಲಿ ಆರ್ಭಟವಾಗುವುದು, ಆ ಸುಂಟರಗಾಳಿಯಂತ ದಿನದಲ್ಲಿ ಪ್ರಚಂಡ ಕಾದಾಟವೂ ಉಂಟಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು