Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಒಂದು ದಿನ ಐಶ್ವರ್ಯವಂತನ ಮನೆಗೆ ಒಬ್ಬ ಪ್ರಯಾಣಿಕನು ಬಂದನು. ಆಗ ಐಶ್ವರ್ಯವಂತನು ತನ್ನ ಕುರಿದನಗಳಿಂದ ಏನೂ ತೆಗೆದುಕೊಳ್ಳಲು ಮನಸ್ಸಿಲ್ಲದೆ, ಆ ಬಡವನ ಹೆಣ್ಣುಕುರಿಮರಿಯನ್ನು ಹಿಡಿದು ಅತಿಥಿಗೋಸ್ಕರ ಅಡಿಗೆ ಮಾಡಿಸಿದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಒಂದು ದಿನ ಆ ಐಶ್ವರ್ಯವಂತನ ಮನೆಗೆ ಒಬ್ಬ ಪ್ರಯಾಣಿಕ ಬಂದ. ಆಗ ತನ್ನ ಕುರಿದನಗಳಿಂದ ಏನನ್ನೂ ಕೊಲ್ಲಲು ಆ ಐಶ್ವರ್ಯವಂತನಿಗೆ ಮನಸ್ಸಿಲ್ಲದೆ ಹೋಯಿತು. ಆ ಬಡವನ ಕುರಿಮರಿಯನ್ನೇ ಹಿಡಿದುಕೊಂಡು ಅತಿಥಿಗೋಸ್ಕರ ಅಡಿಗೆ ಮಾಡಿಸಿದ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಒಂದು ದಿವಸ ಐಶ್ವರ್ಯವಂತನ ಮನೆಗೆ ಒಬ್ಬ ಪ್ರಯಾಣಿಕನು ಬಂದನು. ಆಗ ಐಶ್ವರ್ಯವಂತನು ತನ್ನ ಕುರಿದನಗಳಿಂದ ಏನೂ ತೆಗೆದುಕೊಳ್ಳಮನಸ್ಸಿಲ್ಲದೆ ಆ ಬಡವನ ಕುರಿಮರಿಯನ್ನು ಹಿಡಿದು ಅತಿಥಿಗೋಸ್ಕರ ಅದನ್ನು ಅಡಿಗೆ ಮಾಡಿಸಿದನು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಆಗ ಶ್ರೀಮಂತನ ಮನೆಗೆ ಒಬ್ಬ ಪ್ರಯಾಣಿಕನು ಬಂದನು. ಶ್ರೀಮಂತನು ಆ ಪ್ರಯಾಣಿಕನಿಗೆ ಊಟವನ್ನು ಕೊಡಲು ಇಚ್ಛಿಸಿದನು. ಆದರೆ ಶ್ರೀಮಂತನು ಆ ಪ್ರಯಾಣಿಕನಿಗೆ ಕೊಡಲು ತನ್ನ ಸ್ವಂತ ಕುರಿಗಳಿಂದಾಗಲಿ ದನಗಳಿಂದಾಗಲಿ ಯಾವುದನ್ನೇ ಆಗಲಿ ತೆಗೆದುಕೊಳ್ಳಲು ಇಚ್ಛಿಸಲಿಲ್ಲ. ಶ್ರೀಮಂತನು ಆ ಬಡವನಿಂದ ಕುರಿಮರಿಯನ್ನು ತೆಗೆದುಕೊಂಡು ಅದನ್ನು ಕೊಯ್ಯಿಸಿ ತನ್ನ ಅತಿಥಿಗಾಗಿ ಅಡಿಗೆ ಮಾಡಿಸಿದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಐಶ್ವರ್ಯವಂತನ ಬಳಿಗೆ ಒಬ್ಬ ಪ್ರಯಾಣಿಕನು ಬಂದಾಗ, ಐಶ್ವರ್ಯವಂತನು ಅತಿಥಿಗಾಗಿ ಅಡಿಗೆಯನ್ನು ಮಾಡಿಸುವುದಕ್ಕೆ ತನ್ನ ಕುರಿದನಗಳಲ್ಲಿ ಒಂದನ್ನೂ ತೆಗೆದುಕೊಳ್ಳಲು ಮನಸ್ಸಿಲ್ಲದೆ, ಆ ಬಡವನ ಕುರಿಯನ್ನು ತೆಗೆದುಕೊಂಡು, ತನ್ನ ಬಳಿಗೆ ಬಂದ ಮನುಷ್ಯನಿಗೋಸ್ಕರ ಅದನ್ನು ಅಡಿಗೆ ಮಾಡಿಸಿದನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:4
6 ತಿಳಿವುಗಳ ಹೋಲಿಕೆ  

ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.


ಈ ಮುದುಕನು ಬೀದಿಯಲ್ಲಿ ಕುಳಿತುಕೊಂಡಿದ್ದ ಆ ಪ್ರಯಾಣಿಕನನ್ನು ಕಂಡು, “ನೀನು ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು


ಬಡವನಿಗೆ ಒಂದು ಹೆಣ್ಣು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅವನು ಅದನ್ನು ಕೊಂಡುಕೊಂಡು ಸಾಕುತ್ತಿದ್ದನು. ಅದು ಮಗಳಂತೆ ಅವನ ಸಂಗಡಲೂ, ಅವನ ಮಕ್ಕಳ ಸಂಗಡಲೂ ಬೆಳೆಯುತ್ತಾ, ಅವರೊಡನೆ ರೊಟ್ಟಿ ತಿನ್ನುತ್ತಾ, ಅವರ ಪಾತ್ರೆಯಲ್ಲೇ ನೀರು ಕುಡಿಯುತ್ತಾ ಇತ್ತು. ಅವನ ಎದೆ ಮೇಲೆಯೇ ಒರಗಿಕೊಂಡು ನಿದ್ದೆ ಮಾಡುತ್ತಿತ್ತು.


ಇದನ್ನು ಕೇಳಿ ದಾವೀದನು ಆ ಮನುಷ್ಯನ ಮೇಲೆ ಬಹಳವಾಗಿ ಕೋಪಗೊಂಡು ನಾತಾನನಿಗೆ, “ಯೆಹೋವನ ಆಣೆ, ಆ ಮನುಷ್ಯನು ಸಾಯಲೇಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು