Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದನ್ನು ಕೇಳಿ ದಾವೀದನು ಆ ಮನುಷ್ಯನ ಮೇಲೆ ಬಹಳವಾಗಿ ಕೋಪಗೊಂಡು ನಾತಾನನಿಗೆ, “ಯೆಹೋವನ ಆಣೆ, ಆ ಮನುಷ್ಯನು ಸಾಯಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇದನ್ನು ಕೇಳಿದ್ದೇ ದಾವೀದನು ಆ ವ್ಯಕ್ತಿಯ ಮೇಲೆ ಕಡುಕೋಪಗೊಂಡು ನಾತಾನನಿಗೆ, “ಸರ್ವೇಶ್ವರನಾಣೆ, ಆ ವ್ಯಕ್ತಿ ಸಾಯಲೇ ಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದನ್ನು ಕೇಳಿ ದಾವೀದನು ಆ ಮನುಷ್ಯನ ಮೇಲೆ ಬಹಳವಾಗಿ ಕೋಪಗೊಂಡು ನಾತಾನನಿಗೆ - ಯೆಹೋವನಾಣೆ, ಆ ಮನುಷ್ಯನು ಸಾಯಲೇ ಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದಾವೀದನು ಶ್ರೀಮಂತನ ಮೇಲೆ ಬಹಳ ಕೋಪಗೊಂಡನು. ಅವನು ನಾತಾನನಿಗೆ, “ಯೆಹೋವನ ಆಣೆಯಾಗಿ ಈ ಕಾರ್ಯವನ್ನು ಮಾಡಿದ ಮನುಷ್ಯನು ಸಾಯಲೇಬೇಕು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ, “ಯೆಹೋವ ದೇವರ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:5
10 ತಿಳಿವುಗಳ ಹೋಲಿಕೆ  

ಆದ್ದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷ ಹುಡುಕುವ ನೀನು ಯಾವನಾದರೂ ಸರಿಯೇ, ನಿನಗೆ ಅದರಿಂದ ಕ್ಷಮೆಯಿಲ್ಲ. ಯಾಕೆಂದರೆ, ಮತ್ತೊಬ್ಬರಲ್ಲಿ ದೋಷ ಹುಡುಕುವುದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ಮಾಡುತ್ತೀಯಲ್ಲಾ.


ನೀನು ಹೀಗೆ ಮಾಡುವುದು ಸರಿಯಲ್ಲ. ಯೆಹೋವನಾಣೆ, ಆತನ ಅಭಿಷಿಕ್ತನಾಗಿರುವ ನಿಮ್ಮ ಒಡೆಯನನ್ನು ಕಾಯದಿರುವ ನೀವು ಮರಣಕ್ಕೆ ಪಾತ್ರರೇ ಹೌದು. ಅರಸನ ತಲೆಯ ಬಳಿಯಲ್ಲಿದ್ದ ಬರ್ಜಿಯೂ ತಂಬಿಗೆಯೂ ಏನಾದವೋ ನೋಡು” ಎಂದು ಕೂಗಿ ಹೇಳಿದನು.


ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ” ಎಂಬ ವರ್ತಮಾನವನ್ನು ತಿಳಿಸಿದರು. ಆಗ ಯೆಹೂದನು, “ಆಕೆಯನ್ನು ಹೊರಗೆ ಕರತನ್ನಿರಿ, ಆಕೆಯನ್ನು ಸುಡಬೇಕು” ಎಂದು ಹೇಳಿದನು.


ಯೇಸು ತಿರುಗಿಕೊಂಡು ಅವರನ್ನು ಗದರಿಸಿದನು.


ಆ ಇಷಯನ ಮಗನು ಭೂಲೋಕದಲ್ಲಿರುವವರೆಗೆ ನಿನಗಾದರೂ, ನಿನ್ನ ರಾಜ್ಯಕ್ಕಾದರೂ ನೆಲೆಯಿಲ್ಲ. ಆದುದರಿಂದ ಅವನನ್ನು ಕರಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ. ಅವನು ಸಾಯಬೇಕು” ಅಂದನು.


ಇಸ್ರಾಯೇಲ್ಯರ ರಕ್ಷಕನಾದ ಯೆಹೋವನ ಆಣೆ, ಪಾಪಮಾಡಿದವನು ನನ್ನ ಮಗನಾದ ಯೋನಾತಾನನಾಗಿದ್ದರೂ ಸರಿಯೇ, ಅವನು ಸಾಯಲೇಬೇಕು” ಎಂದು ಹೇಳಿದನು; ಜನರು ಏನೂ ಮಾತನಾಡದೆ ಮೌನವಾಗಿದ್ದರು.


ಒಂದು ದಿನ ಐಶ್ವರ್ಯವಂತನ ಮನೆಗೆ ಒಬ್ಬ ಪ್ರಯಾಣಿಕನು ಬಂದನು. ಆಗ ಐಶ್ವರ್ಯವಂತನು ತನ್ನ ಕುರಿದನಗಳಿಂದ ಏನೂ ತೆಗೆದುಕೊಳ್ಳಲು ಮನಸ್ಸಿಲ್ಲದೆ, ಆ ಬಡವನ ಹೆಣ್ಣುಕುರಿಮರಿಯನ್ನು ಹಿಡಿದು ಅತಿಥಿಗೋಸ್ಕರ ಅಡಿಗೆ ಮಾಡಿಸಿದನು” ಎಂದು ಹೇಳಿದನು.


ಆಗ ಅರಸನು, “ನೀನು ಮನೆಗೆ ಹೋಗು, ನಿನ್ನ ವಿಷಯದಲ್ಲಿ ಆಜ್ಞಾಪಿಸುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು