Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಬಹು ಸುಂದರಿಯಾದ ಒಬ್ಬಳು ತಂಗಿಯಿದ್ದಳು. ದಾವೀದನ ಮಗ ಅಮ್ನೋನನು ಆಕೆಯನ್ನು ಮೋಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಬಹು ಚೆಲುವೆಯಾದ ತಂಗಿಯಿದ್ದಳು. ದಾವೀದನ ಮಗ ಅಮ್ನೋನನು ಆಕೆಯನ್ನು ಮೋಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಬಹು ಸುಂದರಿಯಾದ ಒಬ್ಬ ತಂಗಿಯಿದ್ದಳು. ದಾವೀದನ ಮಗನಾದ ಅಮ್ನೋನನು ಆಕೆಯನ್ನು ಮೋಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದಾವೀದನಿಗೆ ಅಬ್ಷಾಲೋಮನೆಂಬ ಮಗನಿದ್ದನು. ಅವನಿಗೆ ತಾಮಾರಳೆಂಬ ತಂಗಿಯಿದ್ದಳು. ಆಕೆ ಬಹಳ ಸುಂದರಿಯಾಗಿದ್ದಳು. ದಾವೀದನ ಮತ್ತೊಬ್ಬ ಮಗನಾದ ಅಮ್ನೋನನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕಾಲಾಂತರದಲ್ಲಿ ದಾವೀದನ ಮಗ ಅಬ್ಷಾಲೋಮನಿಗೆ ತಾಮಾರಳೆಂಬ ಹೆಸರುಳ್ಳ ಸುಂದರಿಯಾದ ಒಬ್ಬ ಸಹೋದರಿ ಇದ್ದಳು. ಅವಳನ್ನು ದಾವೀದನ ಮಗ ಅಮ್ನೋನನು ಪ್ರೀತಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:1
15 ತಿಳಿವುಗಳ ಹೋಲಿಕೆ  

ಉಪಪತ್ನಿಯಾರಿಂದಲೂ ಗಂಡು ಮಕ್ಕಳು ಹುಟ್ಟಿದರು. ತಾಮಾರ್ ಎಂಬ ಹೆಣ್ಣುಮಗಳೂ ದಾವೀದನಿಗೆ ಇದ್ದಳು.


ಮೂರನೆಯವನು ಅಬ್ಷಾಲೋಮ್, ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಮಗನು. ನಾಲ್ಕನೆಯವನು ಅದೋನೀಯ. ಇವನು ಹಗ್ಗೀತಳ ಪುತ್ರನು.


ಅವನಿಗೆ ಮೂರು ಮಂದಿ ಗಂಡು ಮಕ್ಕಳೂ, ಒಬ್ಬಳು ಮಗಳು ಇದ್ದಳು. ಮಗಳ ಹೆಸರು ತಾಮಾರಳು. ಈಕೆಯು ಬಹು ಸುಂದರಿಯಾಗಿದ್ದಳು.


ಇದಾದ ಮೇಲೆ ಅವನಿಗೆ ಆಕೆಯ ಮೇಲೆ ದ್ವೇಷಹುಟ್ಟಿತು. ಅವಳ ಬಗ್ಗೆ ಇದ್ದ ಪ್ರೀತಿಗಿಂತ ಆಕೆಯ ಮೇಲಿನ ದ್ವೇಷವೇ ಹೆಚ್ಚಾಯಿತು.


ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ, ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು.


ನಿನ್ನ ಹೃದಯವು ಅವಳ ಸೌಂದರ್ಯವನ್ನು ಮೋಹಿಸದಿರಲಿ, ಅವಳು ತನ್ನ ಕಣ್ಣುರೆಪ್ಪೆಗಳಿಂದ ನಿನ್ನನ್ನು ವಶಮಾಡಿಕೊಂಡಾಳು, ನೋಡಿಕೋ.


ಅರಸನಾದ ಸೊಲೊಮೋನನು ಫರೋಹನ ಮಗಳನ್ನಲ್ಲದೆ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೀದೋನ್ಯರು ಮತ್ತು ಹಿತ್ತಿಯರು ಎಂಬ ಜನಾಂಗಗಳ ಸ್ತ್ರೀಯರನ್ನು ಮೋಹಿಸಿದನು.


ಅವನು ಒಂದು ದಿನ ಸಂಜೆ ಹೊತ್ತಿನಲ್ಲಿ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಅವನು ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.


ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು. ಆ ಹುಡುಗಿಯನ್ನು ಪ್ರೀತಿಸಿ ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.


ಈ ಪ್ರಕಾರ ಯಾಕೋಬನು ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡಿದನು. ಅವನು ಆಕೆಯನ್ನು ಬಹಳವಾಗಿ ಪ್ರೀತಿಸಿದ್ದರಿಂದ ಅದು ಅವನಿಗೆ ಸ್ವಲ್ಪ ಕಾಲದಂತೆ ಕಾಣಿಸಿತು.


ಯಾಕೋಬನು ರಾಹೇಲಳನ್ನು ಪ್ರೀತಿಸಿ, “ನಿನ್ನ ಕಿರಿಯ ಮಗಳಾದ ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡುವೆನು” ಎಂದು ಹೇಳಲು,


ಸೌಂದರ್ಯವುಳ್ಳವರಾಗಿರುವುದನ್ನು ನೋಡಿ ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು.


ಅವನು ಆಕೆಯ ಮೇಲಿನ ಮೋಹದಿಂದ ಪೀಡಿತನಾಗಿ ಅಸ್ವಸ್ಥನಾದನು. ತಾಮಾರಳು ಕನ್ಯೆಯಾಗಿದ್ದರಿಂದ ಆಕೆಗೆ ಏನು ಮಾಡಲು ಸಾಧ್ಯವಿಲ್ಲವೆಂದು ಅಮ್ನೋನನು ತಿಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು